ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪೊಲೀಸ್ ಠಾಣೆಯಲ್ಲೇ ಶಿವಸೇನಾ ಮುಖಂಡನ ಮೇಲೆ ಗುಂಡು ಹಾರಿಸಿದ ಬಿಜೆಪಿ ಶಾಸಕ...!

Twitter
Facebook
LinkedIn
WhatsApp
ಪೊಲೀಸ್ ಠಾಣೆಯಲ್ಲೇ ಶಿವಸೇನಾ ಮುಖಂಡನ ಮೇಲೆ ಗುಂಡು ಹಾರಿಸಿದ ಬಿಜೆಪಿ ಶಾಸಕ...!

ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ ಶಿವಸೇನೆಯ ನಗರ ಮುಖ್ಯಸ್ಥರ ಮೇಲೆ ಬಿಜೆಪಿ ಶಾಸಕ ಪೊಲೀಸ್ ಠಾಣೆಯಲ್ಲೇ ಗುಂಡು ಹಾರಿಸಿದ ಘಟನೆ ತಡ ರಾತ್ರಿ ಮುಂಬೈನಲ್ಲಿ ನಡೆದಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಮಹೇಶ್ ಗಾಯಕ್ವಾಡ್ ಮೇಲೆ ಗಣಪತ್ ಗಾಯಕ್ವಾಡ್ ಗುಂಡು ಹಾರಿಸಿದ್ದಾರೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸಬಗರದ ಹಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ. ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಬೆಂಬಲಿಗರು ಶಿವಸೇನಾ (ಏಕನಾಥ್ ಶಿಂಧೆ)ಬಣದ ನಾಯಕ ಮಹೇಶ್ ಹಾಯಕ್ವಾಡ್ ಅವರ ಬೆಂಬಲಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಇತರ ಇಬ್ಬರು ಕೂಡ ಗಾಯಗೊಂಡಿದ್ದಾರೆ.

ಮುಂಬೈನಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಕಲ್ಯಾಣ್ ಪೂರ್ವ ಕ್ಷೇತ್ರವನ್ನು ಗಣಪತ್ ಗಾಯಕ್ವಾಡ್ ಪ್ರತಿನಿಧಿಸುತ್ತಾರೆ. ಅವರ ಪಕ್ಷವು ಮಹಾರಾಷ್ಟ್ರ ಸರ್ಕಾರದಲ್ಲಿ ಶಿಂಧೆ ಅವರ ಸೇನೆಯೊಂದಿಗೆ ಮೈತ್ರಿ ಹೊಂದಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಶುಕ್ರವಾರ ಉಭಯ ಕಡೆಯವರು ಉಲ್ಲಾಸನಗರದ ಹಿಲ್ ಲೈನ್ ಪೊಲೀಸ್ ಠಾಣೆಗೆ ಹೋಗಿದ್ದರು. ಆದರೆ ಮಾತುಕತೆ ವಾಗ್ವಾದಕ್ಕೆ ತಿರುಗಿ ತಡ ರಾತ್ರಿ ಮಹೇಶ್ ಗಾಯಕ್ವಾಡ್ ಮೇಲೆ ಗುಂಡು ಹಾರಿಸಲಾಗಿದೆ.

ಮಹೇಶ್ ಗಾಯಕ್ವಾಡ್ ಅವರ ದೇಹದಿಂದ ಐದು ಗುಂಡುಗಳನ್ನು ಹೊರತೆಗೆಯಲಾಗಿದೆ. ಆದರೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಘಟನೆಯ ನಂತರ ಬಂಧಿತರಾಗಿರುವ ಗಣಪತ್ ಗಾಯಕ್ವಾಡ್ ಸುದ್ದಿ ವಾಹಿನಿಯೊಂದಕ್ಕೆ ಮಾತನಾಡಿ, ‘ಮಹೇಶ್ ಗಾಯಕ್ವಾಡ್ ತಮ್ಮ ಮಗನೊಂದಿಗೆ ಅನುಚಿತವಾಗಿ ವರ್ತಿಸಿದ್ದರಿಂದ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆ’ ಎಂದು ಹೇಳಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಸರ್ಕಾರವನ್ನು ಶಿವಸೇನೆಯ ಉದ್ಧವ್ ಠಾಕ್ರೆ ಬಣ ತರಾಟೆಗೆ ತೆಗೆದುಕೊಂಡಿದೆ. ಪೊಲೀಸ್ ಠಾಣೆಯೊಳಗೆ ಬಿಜೆಪಿ ಶಾಸಕ ಗುಂಡಿನ ದಾಳಿ ನಡೆಸಿದ್ದು, ಗುಂಡು ತಗುಲಿದ ವ್ಯಕ್ತಿ ಮುಖ್ಯಮಂತ್ರಿ ಹಾಗೂ ಮಾಜಿ ಕಾರ್ಪೋರೇಟರ್ ಅವರ ಆಪ್ತರು, ಅವರಿಬ್ಬರೂ ಅಧಿಕಾರದಲ್ಲಿದ್ದಾರೆ ಎಂದರೆ ಈ ಜನರಿಗೆ ಕಾನೂನಿನ ಭಯವಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಉದ್ಧವ್ ಬಣದ ವಕ್ತಾರ ಆನಂದ್ ದುಬೆ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist