ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರು : ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ಲಕ್ಷಾಂತರ ರೂಪಾಯಿ ವಂಚನೆ...!

Twitter
Facebook
LinkedIn
WhatsApp
ಪುತ್ತೂರು : ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ಲಕ್ಷಾಂತರ ರೂಪಾಯಿ ವಂಚನೆ...!

ಬಂಟ್ವಾಳ: ಚತುಷ್ಪತ ರಾ. ಹೆದ್ದಾರಿಯ ಕಾಂಕ್ರೀಟ್ ರಸ್ತೆ ಕಾಮಗಾರಿ ಪರಿಶೀಲಿಸಿದ ಡಿಸಿ

ಬಿಸಿರೋಡಿನಿಂದ ಅಡ್ಡಹೊಳೆವರೆಗೆ ನಡೆಯುವ ಚತುಷ್ಪತ ರಾಷ್ಟ್ರೀಯ ಹೆದ್ದಾರಿಯ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ವೀಕ್ಷಣೆ ನಡೆಸಿದರು.ಈ ಸಂದರ್ಭದಲ್ಲಿ ಸಾರ್ವಜನಿಕರ ದೂರನ್ನು ಆಲಿಸಿದ ಅವರು ಕೆಲವೊಂದು ಪರಿಹಾರ ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ರೈತ ಸಂಘ ಹಾಗೂ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬೆಳಿಗ್ಗೆ ಬಿಸಿರೋಡಿನಿಂದ ಗುಂಡ್ಯವರೆಗೆ ವೀಕ್ಷಿಸಲು ಅಧಿಕಾರಿಗಳ ಜೊತೆ ತೆರಳಿದರು.

ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರುವೃತ್ತದಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿಯನ್ನು ವೀಕ್ಷಣೆ ನಡೆಸಿದ ಬಳಿಕ ,ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿಯತ್ತ ತೆರಳಿದರು. ಮೆಲ್ಕಾರ್ ನಲ್ಲಿ ಗುಡ್ಡವನ್ನು ಅಗೆದ ಪರಿಣಾಮವಾಗಿ ಕೆಲವೊಂದು ಮನೆಗಳಿಗೆ ಹಾನಿಯಾಗುವ ಸಂಭವವು ಇರುವುದರಿಂದ ಮತ್ತು ಇನ್ನು ಕೆಲವು ಮನೆಗಳಿಗೆ ಸಂಪರ್ಕ ರಸ್ತೆ ಕಡಿತಗೊಂಡ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತವಾದ ಬದಲಿ ವ್ಯವಸ್ಥೆ ಮಾಡಿಕೊಡುವ ಬಗ್ಗೆ ಚಿಂತನೆ ನಡೆಸುವ ಕುರಿತು ವಿಷಯ ಪ್ರಸ್ತಾಪ ಮಾಡಿದ್ದಲ್ಲದೆ,ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಯ ವೇಳೆ ದೂಳಿನ ಸಮಸ್ಯೆ ಉಂಟಾಗುತ್ತಿದ್ದು,ಸರಿಯಾಗಿ ನೀರು ಹಾಕುತ್ತಿಲ್ಲ ಎಂಬ ದೂರನ್ನು ಸಾರ್ವಜನಿಕ ರು ಜಿಲ್ಲಾಧಿಕಾರಿ ಅವರಲ್ಲಿ ನೀಡಿದರು‌.

ಈ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು ಇನ್ನು ಮುಂದೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ದೂರುಗಳು ಬರದ ರೀತಿಯಲ್ಲಿ ಸ್ಥಳೀಯ ಗ್ರಾ.ಪಂ.ನವರು ರಸ್ತೆ ನೀರು ಹಾಕುವ ಜವಾಬ್ದಾರಿ ವಹಿಸಬೇಕು ಎಂದು ತಹಶಿಲ್ದಾರ್ ಅವರಲ್ಲಿ ತಿಳಿಸಿದರು. ದೂಳಿನ ಸಮಸ್ಯೆಯಿಂದ ಕಲ್ಲಡ್ಕ ಪರಿಸರದ ಅನೇಕರಿಗೆ ಅಸ್ತಮಾ ,ಶ್ವಾಸಕೋಶದ ರೋಗ ಬಂದಿದ್ದು, ಈ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿ ಅವರಲ್ಲಿ ಅಳಲು ತೋಡಿಕೊಂಡಿರು.

ಸಾರ್ವಜನಿಕರ ನೀಡುವ ದೂರಿಗೆ ಕಂಪೆನಿಯ ಕೆಲಸಗಾರರು ಕಿವಿಗೊಡುವುದಿಲ್ಲ ಎಂದು ಅವರು ಆರೋಪ ಮಾಡಿದರು. ಮುಂದೆ ಇಂತಹ ಯಾವುದೇ ಸಮಸ್ಯೆ ಗಳು ಉದ್ಭವವಾಗಂತೆ ತಹಶಿಲ್ದಾರ್ ಎಚ್ಚರಿಕೆಯಿಂದ ನೋಡಿಕೊಳ್ಳುವಂತೆ ಅವರು ಸೂಚನೆ ನೀಡಿದರು. ಕೆಲವು ಕಡೆಗಳಲ್ಲಿ ರಸ್ತೆ ಕಾಮಗಾರಿ ವೇಳೆ ಕುಡಿಯುವ ನೀರಿನಪೈಪ್ ಗಳನ್ನು ತುಂಡರಿಸಲಾಗಿದ್ದು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ , ಅಂತಹ ಕಡೆಗಳಲ್ಲಿ ಹೊಸ ಪೈಪ್ ಲೈನ್ ಅಳವಡಿಸಿ ಕುಡಿಯುವ ನೀರಿಗೆ ಯಾವುದೇ ಕುಂದುಬರದಂತೆ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ