ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಬೂಲ್‌ನಿಂದ ಭಾರತದ ರಾಯಭಾರಿ ಕಚೇರಿ ಸ್ಥಳಾಂತರ.

Twitter
Facebook
LinkedIn
WhatsApp
ಅಫ್ಘನಿಸ್ಥಾನದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ‌ಗೆ ಕ್ರಮ: ವಿದೇಶಾಂಗ ಸಚಿವಾಲಯ  

ಅಫ್ಘಾನಿಸ್ತಾನವನ್ನು ತಾಲಿಬಾನ್‌ ವಶಪಡಿಸದಲ್ಲಿದೆ. ಅಲ್ಲಿನ ಜನರು ಮುಂದೆ ಎದುರಾಗಬಹುದಾದದ ಅಪಾಯದ ಬಗ್ಗೆ ಭೀತಗೊಂಡಿದ್ದಾರೆ. ಅಲ್ಲಿದ್ದ ವಿವಿಧ ದೇಶಗಳ ಜನರು ದೇಶ ತೊರೆಯಲು ಆರಂಭಿಸಿದ್ದಾರೆ. ಈ ನಡುವೆ, ಭಾರತೀಯ ರಾಯಭಾರ ಕಚೇರಿಯ ಸಿಬ್ಬಂದಿಯ ರಕ್ಷಣೆ ಮುಖ್ಯವಾಗಿದ್ದು, ಮಂಗಳವಾರ ಬೆಳಿಗ್ಗೆ ಕಾಬೂಲ್‌ನಲ್ಲಿರುವ ರಾಯಭಾರ ಕಚೇರಿಯನ್ನು ಸ್ಥಳಾಂತರಿಸಲಾಗಿದೆ.
ವಾಯುಪಡೆಯ ವಿಶೇಷ ವಿಮಾನವು ರಾಯಭಾರ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಐಟಿಬಿಪಿ (ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್) ಪಡೆಯನ್ನು ವಾಪಸ್ ಕರೆತರಲಾಗಿದೆ. 120 ಕ್ಕೂ ಹೆಚ್ಚು ಭಾರತೀಯ ಅಧಿಕಾರಿಗಳನ್ನು ವಾಪಸ್ ಕರೆತರಲಾಗಿದೆ.
48 ವರ್ಷಗಳ ನಂತರ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಮರಳಿದ್ದು, ಕಳೆದ 48 ಗಂಟೆಗಳಲ್ಲಿ ದೇಶದ ಪರಿಸ್ಥಿತಿ ಹಲವು ಸವಾಲುಗಳನ್ನು ಎದುರಿಸಿಸುತ್ತಿದೆ.  ದೇಶವನ್ನು ತೊರೆಯಲು ಕಾಬೂಲ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಐವರು ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
“ನಡೆಯುತ್ತಿರುವ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು, ಕಾಬೂಲ್‌ನಲ್ಲಿರುವ ನಮ್ಮ ರಾಯಭಾರಿ ಮತ್ತು ಭಾರತೀಯ ಸಿಬ್ಬಂದಿಯನ್ನು ತಕ್ಷಣವೇ ಭಾರತಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.

ರಾಯಭಾರ ಕಚೇರಿಯ ಸಿಬ್ಬಂದಿಯನ್ನು ಸ್ಥಳಾಂತರಿಸಲು ಭಾನುವಾರ ಎರಡು ವಿಮಾನಗಳನ್ನು ನಿಯೋಜಿಸಲಾಗಿತ್ತು. 45 ಸಿಬ್ಬಂದಿಯೊಂದಿಗೆ ಮೊದಲ ಐಎಎಫ್ ಸಿ -17 ವಿಮಾನ ಸೋಮವಾರ ದೇಶಕ್ಕೆ ಮರಳಿದೆ. ಆದರೆ, ರಸ್ತೆಗಳು ಮತ್ತು ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಸ್ಥಗಿತಗೊಂಡಿರುವುದರಿಂದ,  ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆಯಿಂದಾಗಿ ಉಳಿದ ಕಾಬೂಲ್‌ನಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗಳು, ಇತರ ಸಿಬ್ಬಂದಿ ಮತ್ತು ಐಟಿಬಿಪಿ ಪಡೆಗಳನ್ನು ಹಿಂದಕ್ಕೆ ಕರೆತರಲು ಸಾಧ್ಯವಾಗಿರಲಿಲ್ಲ.
ಭಾರತೀಯ ರಾಯಭಾರ ಕಚೇರಿಯೂ ತಾಲಿಬಾನ್ ಕಣ್ಗಾವಲಿನಲ್ಲಿದೆ ಎಂದು ವರದಿಯಾಗಿದೆ. ತಾಲಿಬಾನ್ ಪಡೆಯು ಶಾಹೀರ್ ವೀಸಾ ಏಜೆನ್ಸಿಯ ಮೇಲೆಯೂ ದಾಳಿ ನಡೆಸಿದೆ, ಇದರಿಂದ ಭಾರತಕ್ಕೆ ಪ್ರಯಾಣಿಸಲು ಬಯಸುವವರಿಗೆ ತೊಂದರೆಯುಂಟಾಗಿದೆ ಎಂದು ಮೂಲಗಳು ತಿಳಿಸಿವೆ.
ತಾಲಿಬಾನ್ ನಿಯಂತ್ರಿತ ದೇಶವನ್ನು ತೊರೆಯಲು ಇಚ್ಛಿಸುವ ಅಫ್ಘಾನಿಸ್ತಾನದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಭಾರತವು ಹೊಸ ಮಾದರಿಯ “ಇ-ಎರ್ಮಜನ್ಸಿ ಎಕ್ಸ್-ಮಿಸ್ಕ್ ವೀಸಾ” ಎಲೆಕ್ಟ್ರಾನಿಕ್ ವೀಸಾವನ್ನು ಘೋಷಿಸಿದೆ.
ಸಾವಿರಾರು ಜನರು ಅಫ್ಘಾನಿಸ್ತಾನದಿಂದ ಹೊರ ದೇಶಕ್ಕೆ ಹೊರಡಬಹುದಾದ ಏಕೈಕ ದಾರಿಯಾದ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ್ದು, ನೂಕು ನುಗ್ಗಲು ಉಂಟಾಗಿದೆ. ವಿಮಾನ ನಿಲ್ದಾಣವು ಅಮೆರಿಕಾ ಭದ್ರತಾ ಪಡೆಗಳ ನಿಯಂತ್ರಣದಲ್ಲಿದ್ದು, ಅಮೆರಿಕಾ ಅಲ್ಲಿ ಆರು ಸಾವಿರ ಯೋಧರನ್ನು ನೇಮಿಸಿದೆ. ನೂಕು ನುಗ್ಗಲನ್ನು ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಕೂಡಾ ನಡೆದಿದೆ ಎಂದು ವರದಿಯಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು