Jasprit Bumrah: ಶ್ರೀನಾಥ್ ದಾಖಲೆಯನ್ನು ಸರಿಗಟ್ಟುವ ಸನೀಹದಲ್ಲಿ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ..!
ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯವು ಗುರುವಾರದಿಂದ ಶುರುವಾಗಲಿದೆ. ರಾಜ್ಕೋಟ್ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್ ಜಸ್ಪ್ರೀತ್ ಬುಮ್ರಾ (Jasprit Bumrah). ಏಕೆಂದರೆ ಬಾಝ್ಬಾಲ್ ರಣತಂತ್ರಕ್ಕೆ ಇದೀಗ ಬೂಮ್ಬಾಲ್ ಪ್ರತಿತಂತ್ರ ಸಿದ್ಧವಾಗಿದೆ.
ಈ ಪ್ರತಿತಂತ್ರದ ಫಲವೇ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಮುಗ್ಗರಿಸಿರುವುದು. ಈ ಪಂದ್ಯದ ಗೆಲುವಿನ ರೂವಾರಿ ಜಸ್ಪ್ರೀತ್ ಬುಮ್ರಾ(Jasprit Bumrah). ಮೊದಲ ಇನಿಂಗ್ಸ್ನಲ್ಲಿ 6 ವಿಕೆಟ್ ಕಬಳಿಸಿದ್ದ ಬುಮ್ರಾ 2ನೇ ಇನಿಂಗ್ಸ್ನಲ್ಲಿ 3 ವಿಕೆಟ್ ಉರುಳಿಸಿದ್ದರು. ಈ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದರು.
ಬೆಳಿಗ್ಗೆ ಸ್ಥಳೀಯ ಯುವಕರು ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದರು. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ
ಇದೀಗ ಜಸ್ಪ್ರೀತ್ ಬುಮ್ರಾ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ. ಅದು ಕೂಡ ಮೈಸೂರ್ ಎಕ್ಸ್ಪ್ರೆಸ್ ಖ್ಯಾತಿಯ ಜಾವಗಲ್ ಶ್ರೀನಾಥ್ ಅವರ ದಾಖಲೆಯನ್ನು ಮುರಿಯುವ ಸನಿಹದಲ್ಲಿ ಎಂಬುದು ವಿಶೇಷ.
ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ವೇಗದ ಬೌಲರ್ಗಳ ಪಟ್ಟಿಯಲ್ಲಿ ಜಾವಗಲ್ ಶ್ರೀನಾಥ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಒಟ್ಟು 13 ಬಾರಿ ಐದು ವಿಕೆಟ್ ಕಬಳಿಸಿ ಕನ್ನಡಿಗ ಈ ವಿಶೇಷ ದಾಖಲೆ ಬರೆದಿಟ್ಟಿದ್ದಾರೆ.
ಇತ್ತ ಜಸ್ಪ್ರೀತ್ ಬುಮ್ರಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 12 ಬಾರಿ ಐದು ವಿಕೆಟ್ಗಳನ್ನು ಕಬಳಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಇನಿಂಗ್ಸ್ನಲ್ಲಿ ಬುಮ್ರಾ 5 ವಿಕೆಟ್ ಪಡೆದರೆ ಜಾವಗಲ್ ಶ್ರೀನಾಥ್ ಅವರ ದಾಖಲೆಯನ್ನು ಸರಿಗಟ್ಟಬಹುದು.
ಒಂದು ವೇಳೆ ಎರಡೂ ಇನಿಂಗ್ಸ್ಗಳಲ್ಲಿ ಐದೈದು ವಿಕೆಟ್ ಕಬಳಿಸಿದ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಟೀಮ್ ಇಂಡಿಯಾದ 2ನೇ ವೇಗಿ ಎಂಬ ದಾಖಲೆ ಜಸ್ಪ್ರೀತ್ ಬುಮ್ರಾ(Jasprit Bumrah) ಪಾಲಾಗಲಿದೆ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಬೂಮ್ ಬೂಮ್ ಕಡೆಯಿಂದ ಭರ್ಜರಿ ದಾಖಲೆಯನ್ನು ನಿರೀಕ್ಷಿಸಬಹುದು.
ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ ಕಬಳಿಸಿದ ಟೀಮ್ ಇಂಡಿಯಾದ ವೇಗದ ಬೌಲರ್ ಕಪಿಲ್ ದೇವ್. ಭಾರತ ತಂಡದ ಮಾಜಿ ನಾಯಕ ಒಟ್ಟು 24 ಬಾರಿ 5 ವಿಕೆಟ್ಗಳ ಸಾಧನೆ ಮಾಡಿದ್ದಾರೆ.