ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಸ್ಫೋಟ : ಮೂವರು ಕಾರ್ಮಿಕರು ದುರ್ಮರಣ - ಹಲವರಿಗೆ ಗಾಯ..!
ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡ (Fire accident) ದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ.
ಕುಂಬಳೆ ಬಸ್ ನಿಲ್ದಾಣದಲ್ಲಿ ಬಸ್ಸಿನಿಂದ ಇಳಿದು ಪೇಟೆಗೆ ತೆರಳುತ್ತಿದ್ದ ಅಬ್ದುಲ್ಲ ಕುಂಞಿ (60) ಅವರಿಗೆ ಬಾಲಕ ವೇಗವಾಗಿ ಒಡಿಸುತ್ತಿದ್ದ ಬೈಕ್ ಗುದ್ದಿದೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದರು.ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಪೋಸ್ಟ್ಮಾರ್ಟಂಗೆ ಒಯ್ಯಲಾಗಿದೆ.
ಅಗ್ನಿ ದುರಂತ ಬಗ್ಗೆ ಕುಂಬಳಗೋಡು ಪೊಲೀಸರಿಂದ ತನಿಖೆ ಮುಂದುವರೆದಿದ್ದು, ಖಾಲಿ ಜಾಗದ ಶೆಡ್ನಲ್ಲಿ ಪರ್ಫ್ಯೂಮ್ ಕೆಮಿಕಲ್ ಫಿಲ್ಲಿಂಗ್ ಮಾಡಲಾಗುತ್ತಿತ್ತು. ಒಟ್ಟು 8 ಸಿಬ್ಬಂದಿ ಕೆಮಿಕಲ್ ಫಿಲ್ಲಿಂಗ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಇದೆ. ಫಿಲ್ಲಿಂಗ್ ವೇಳೆ ಸ್ಫೋಟಗೊಂಡು ಇಡೀ ಮನೆಗೆ ಬೆಂಕಿ ಆವರಿಸಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿ ದುರಂತದಲ್ಲಿ 1 ಬೈಕ್, 1 ಕಾರು ಹಾಗೂ ಆಟೋ ಸಂಪೂರ್ಣ ಹಾನಿಯಾಗಿದ್ದು, ಬೆಂಕಿಯ ತೀವ್ರತೆಗೆ ಅಕ್ಕಪಕ್ಕದ ಮನೆಯ ವಸ್ತುಗಳು ಬೆಂಕಿಗಾಹುತಿ ಆಗಿದೆ.
ಘಟನಾ ಸ್ಥಳದಲ್ಲಿ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಪ್ರತಿಕ್ರಿಯಿಸಿದ್ದು, ರಾಮಸಂದ್ರದಲ್ಲಿ ಸಂಜೆ 5 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ಸಲೀಂ ಸೇರಿ ಮೂವರು ಸಾವು, ಇಬ್ಬರ ಗುರುತು ಪತ್ತೆಯಾಗಿಲ್ಲ. ಗಾಯಾಳು ಐವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಐವರು ಗಾಯಾಳುಗಳ ಪೈಕಿ ಓರ್ವ 15 ವರ್ಷದ ಬಾಲಕನಿದ್ದಾನೆ.
FSL ತಜ್ಞರ ವರದಿ ಬಳಿಕ ಘಟನೆಗೆ ಸ್ಪಷ್ಟ ಕಾರಣ ಗೊತ್ತಾಗಲಿದೆ. ಗ್ರಾಮ ಪಂಚಾಯಿತಿನಿಂದ ಅನುಮತಿ ಪಡೆದಿದ್ದ ಬಗ್ಗೆ ಪರಿಶೀಲಿಸ್ತಿದ್ದೇವೆ. ವಿಠಲ್ ಎಂಬುವವರ ಜಾಗದಲ್ಲಿ ಸಲೀಂ ಗೋಡೌನ್ ನಡೆಸುತ್ತಿದ್ದ. ಕಳೆದ ಒಂದು ತಿಂಗಳ ಹಿಂದಷ್ಟೆ ಗೋದಾಮು ಆರಂಭಿಸಿದ್ದರು ಎಂದು ಹೇಳಿದ್ದಾರೆ.