ಸೋಮವಾರ, ಫೆಬ್ರವರಿ 3, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕ್ರಿಕೆಟಿಗ ಶುಭ್​ಮನ್ ಗಿಲ್ ಪಂಜಾಬ್ ರಾಜ್ಯ ಚುನಾವಣಾ ಐಕಾನ್ ಆಗಿ ನೇಮಕ

Twitter
Facebook
LinkedIn
WhatsApp
ಲೋಕಸಭೆ ಚುನಾವಣೆಗೂ (Lok Sabha Elections) ಮುನ್ನ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್ (Shubman Gill) ಪಂಜಾಬ್ ರಾಜ್ಯ ಚುನಾವಣಾ ಆಯೋಗ ದೊಡ್ಡ ಜವಾಬ್ದಾರಿಯನ್ನು ವಹಿಸಿದ್ದು, ಯುವ ಆರಂಭಿಕ ಆಟಗಾರನನ್ನು ಪಂಜಾಬ್‌ನ ರಾಜ್ಯ ಚುನಾವಣಾ ಐಕಾನ್ (State Icon) ಆಗಿ ಆಯ್ಕೆ ಮಾಡಿದೆ. ಇದೀಗ ಹೊಸ ಜವಬ್ದಾರಿಯನ್ನು ವಹಿಸಿಕೊಂಡಿರುವ ಶುಭ್ಮನ್ ಗಿಲ್, ಚುನಾವಣೆಗೂ ಮುನ್ನ ಮತದಾರರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಮಾಡಲಿದ್ದಾರೆ. ಸ್ವತಃ ಈ ಮಾಹಿತಿಯನ್ನು ಮುಖ್ಯ ಚುನಾವಣಾಧಿಕಾರಿ ಸಿಬಿನ್ ಸಿ. ಹಂಚಿಕೊಂಡಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಮುಖ್ಯ ಚುನಾವಣಾಧಿಕಾರಿ, ಕ್ರಿಕೆಟಿಗ ಶುಭ್​ಮನ್​ ಗಿಲ್​ಗೆ ಹೊಸ ಜವಾಬ್ದಾರಿ ನೀಡಲಾಗಿದೆ. ಅದರಂತೆ ಗಿಲ್ ಪ್ರತ್ಯೇಕವಾಗಿ ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಲಿದ್ದಾರೆ. ರಾಜ್ಯದಲ್ಲಿ ಮತದಾನದ ಪ್ರಮಾಣ ಶೇ 70ರ ಗಡಿ ದಾಟುವಂತೆ ಮತದಾರರಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ.

   2019 ರ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಶೇಕಡಾ 65.96 ರಷ್ಟು ಮತದಾನವಾಗಿತ್ತು. ಈ ಬಾರಿಯ ಮತದಾನವನ್ನು ಶೇ.70ರಷ್ಟಕ್ಕೆ ಏರಿಸುವುದು ನಮ್ಮ ಗುರಿಯಾಗಿದೆ ಎಂದು ಚುನಾವಣಾಧಿಕಾರಿ ಹೇಳಿದ್ದಾರೆ. ‘ಈ ಬಾರಿ 70 ದಾಟಬೇಕು’ ಎಂಬ ಘೋಷವಾಕ್ಯದೊಂದಿಗೆ ಆಯೋಗ ಚುನಾವಣಾ ಪ್ರಚಾರ ನಡೆಸುತ್ತಿದೆ.

  ಕಳೆದ ಶುಕ್ರವಾರ ನಡೆದ ಪಂಜಾಬ್‌ನ ಎಲ್ಲಾ ಡೆಪ್ಯುಟಿ ಕಮಿಷನರ್‌ಗಳೊಂದಿಗಿನ ಸಭೆಯಲ್ಲಿ ಕಳೆದ ಚುನಾವಣೆಯಲ್ಲಿ ಮತದಾನದ ಶೇಕಡಾವಾರು ಕಡಿಮೆ ಇರುವ ಪ್ರದೇಶಗಳನ್ನು ಗುರುತಿಸಲು ಹೇಳಲಾಗಿತ್ತು. ಅದರಂತೆ ಇದೀಗ ಗುರುತಿಸಿರುವ ಸ್ಥಳಗಳಲ್ಲಿ ಗಿಲ್ ಚುನಾವಣೆಯ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.

ಗಿಲ್ ಯುವ ಪ್ರತಿಭಾವಂತ ಕ್ರಿಕೆಟಿಗನಾಗಿದ್ದು, ಯುವ ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿಲಿದ್ದಾರೆ. ಇದು ಪ್ರತಿಯೊಬ್ಬರನ್ನು ಮತದಾನ ಮಾಡುವಂತೆ ಪ್ರೇರೇಪಿಸುತ್ತದೆ ಮತ್ತು ಮತದಾನದ ಶೇಕಡಾವಾರು ಹೆಚ್ಚಿಸಲು ಸಹಾಯ ಮಾಡುತ್ತದೆ. ಈ ಹಿಂದೆ, ಜನಪ್ರಿಯ ಪಂಜಾಬಿ ಗಾಯಕ ತಾರ್ಸೆಮ್ ಜಸ್ಸರ್ ಅವರನ್ನು ‘ರಾಜ್ಯ ಚುನಾವಣಾ ಐಕಾನ್’ ಆಗಿ ಆಯ್ಕೆ ಮಾಡಲಾಗಿತ್ತು. ಇದೀಗ ಆ ಜವಬ್ದಾರಿಯನ್ನು ಗಿಲ್ ನಿರ್ವಹಿಸಲಿದ್ದಾರೆ ಎಂದಿದ್ದಾರೆ.

ಪ್ರಸ್ತುತ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಯುವ ಬ್ಯಾಟ್ಸ್‌ಮನ್ ಅದ್ಭುತ ಶತಕ ಸಿಡಿಸಿದ್ದರು. 12 ಇನ್ನಿಂಗ್ಸ್‌ಗಳ ನಂತರ ಅವರ ಬ್ಯಾಟ್‌ನಿಂದ ಈ ಶತಕ ಸಿಡಿದಿತ್ತು. ಅದೇ ವೇಳೆ ಮೂರನೇ ಟೆಸ್ಟ್‌ನಲ್ಲೂ ಶತಕ ಸಿಡಿಸುವ ಹೊಸ್ತಿಲಿನಲ್ಲಿದ್ದರು. ಆದರೆ 91 ರನ್​ಗಳಿದ್ದಾಗ ಗಿಲ್​ ರನೌಟ್​ಗೆ ಬಲಿಯಾಗಿ ಕೇವಲ 9 ರನ್​ಗಳಿಂದ ಶತಕ ವಂಚಿತರಾದರು. ಇದುವರೆಗೆ ಆಡಿದ ಮೂರು ಟೆಸ್ಟ್ ಪಂದ್ಯಗಳಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿರುವ ಶುಭಮನ್ ಗಿಲ್ ಇಲ್ಲಿಯವರೆಗೆ 252 ರನ್ ಕಲೆಹಾಕಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist