ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Breaking News: ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ

Twitter
Facebook
LinkedIn
WhatsApp
Congress MLA Raja Venkatappa

ಯಾದಗಿರಿ, (ಫೆಬ್ರವರಿ 25): ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67)  ನಿಧನರಾಗಿದ್ದಾರೆ. ಬೆಂಗಳೂರಿನ   ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್​ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ರಾಜಾ ವೆಂಕಟಪಟ್ಟ ನಾಯಕ ಅವರಿಗೆ ಕಿಡ್ನಿ ಸ್ಟೋನ್ ಆಗಿದ್ದು, ಆಪರೇಶನ್ ಸಹ ಮಾಡಲಾಗಿತ್ತು. ಕಳೆದ 15 ದಿನಗಳ ಹಿಂದೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಬಂದಿದ್ದರು. ಆದರೆ, ಇಂದು ದಿಢೀರನೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸಂತಾಪ ಸೂಚಿಸಿದ ಸಿದ್ದರಾಮಯ್ಯ

ರಾಜಾ ವೆಂಕಟಪ್ಪ ನಾಯಕ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ. ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ರಾಜಾ ವೆಂಕಟಪ್ಪ ನಾಯಾಕ್​ ರಾಜಕೀಯ ಜರ್ನಿ

1994ರಲ್ಲಿ ಕಾಂಗ್ರೆಸ್​​ನಿಂದ ಸ್ಪರ್ಧಿಸಿ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇದಾದ ಬಳಿಕ 1999, 2013 ಹಾಗೂ 2023 ರಲ್ಲೂ ಸಹ ಕಾಂಗ್ರೆಸ್​ನಿಂದ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು. ಇನ್ನು ಇವರ ತಂದೆ ರಾಜಾ ಕುಮಾರ್​ ನಾಯಕ ಸಹ ಕಾಂಗ್ರೆಸ್​ನಿಂದ ಎರಡು(1957,1978 ರಲ್ಲಿ) ಬಾರಿ ಶಾಸಕರಾಗಿದ್ದರು.

2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಸುರಪುರ ಎಸ್​ಟಿ ಮೀಸಲು ಕ್ಷೇತ್ರದಿಂದ ಬಿಜೆಪಿಯ ರಾಜುಗೌಡ ಅವರನ್ನು ರಾಜಾ ವೆಂಕಟಪ್ಪ ನಾಯಕ್​ ಮಣಿಸಿದ್ದರು. ಈ ಮೂಲಕ ನಾಲ್ಕನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಅಲ್ಲದೇ ಈ ಬಾರಿ ಸಚಿವ ಸ್ಥಾನಕ್ಕೆ ಕಸರತ್ತು ನಡೆಸಿದ್ದರು. ಆದ್ರೆ, ಹೈಕಮಾಂಡ್​ ರಾಜಾ ವೆಂಕಟಪ್ಪ ನಾಯಕ್​ ಅವರಿಗೆ ಉಗ್ರಾಣ ನಿಗಮ ನೀಡಲಾಗಿತ್ತು. ಅದರಂತೆ ಮೊನ್ನೇ ಅಷ್ಟೇ ಅವರು ಉಗ್ರಾಣ ನಿಗಮ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist