Accident: ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು!
Twitter
Facebook
LinkedIn
WhatsApp
ಇಂದು ಮುಂಜಾನೆ ಬೀದರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ. ಘಟನೆಯಲ್ಲಿ ಐದು ಜನರಿಗೆ ಗಾಯಗಳಾಗಿದ್ದು ಬೀದರ್ ನ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತಪಟ್ಟಿರುವ ಎಲ್ಲರೂ ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎಂದು ತಿಳಿದು ಬಂದಿದೆ.
ಟಾಟಾ ಎಸ್ ವಾಹನದಲ್ಲಿ ಒಟ್ಟು 14 ಜನ ಉಗ್ಗಿರ್ ನಿಂದಾ ಹೈದ್ರಾಬಾದ್ ಹೋಗುತ್ತಿದ್ದರು. 6 ಜನ ಮಹಿಳೆಯರು 5 ಜನ ಪುರುಷರು 3 ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ಟ್ರಕ್-ಟಾಟಾ ಎಸಿ ನಡುವೆ ಡಿಕ್ಕಿಯಾಗಿದ್ದು ದಸ್ತಗಿರ್ ದಾವಲಸಾಬ್ (36) ರಸೀದಾ ಶೇಕ್ (41) ಟಾಟಾ ಎಸಿ ಚಾಲಕ ವಲಿ (31) ಅಮಾಮ್ ಶೇಕ್ (51) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ದನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆ 4:30ರ ಸುಮಾರಿಗೆ ಅಪಘಾತ ಸಂಭವಿಸಿದೆ.