ಸಂಸದ ಉಮೇಶ್ ಜಾಧವ್ ಬೆಂಬಲಿಗನ ಬರ್ಬರ ಹತ್ಯೆ..!
ಹಿರಿಯ ಬಿಜೆಪಿ ಮುಖಂಡ ಮಹಾಂತಪ್ಪಾ ಆಲೂರೆ ಅವರ ಬರ್ಬರ ಹತ್ಯೆಯ ಬೆನ್ನಲ್ಲೇ ಇದೀಗ ಮತ್ತೊಂದು ಜಿಲ್ಲೆಯಲ್ಲಿ ಮತ್ತೊಂದು ಹತ್ಯೆ ನಡೆದಿದೆ. ಸಂಸದ ಡಾ.ಉಮೇಶ್ ಜಾಧವ್ (Dr. Umesh Jadhav) ಬಲಗೈ ಬಂಟನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಗಿರೀಶ್ ಚಕ್ರ (Girish Chakra) ಬರ್ಬರವಾಗಿ ಹತ್ಯೆಯಾದ ಬಿಜೆಪಿ ಮುಖಂಡ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ ಕೊಲೆ ಮಾಡಲಾಗಿದೆ.ಕಳೆದ ನಾಲ್ಕು ದಿನಗಳ ಹಿಂದೆ ಕಲಬುರಗಿ ಬಿ.ಎಸ್ ಎನ್ ಎಲ್ ಸಲಹಾ ಸಮಿತಿಗೆ ನಿರ್ದೇಶಕರಾಗಿ ಸಂಸದ ಜಾಧವ್ ಆಯ್ಕೆ ಮಾಡಿದ್ದರು. ಸಲಹಾ ಸಮಿತಿ ನಿರ್ದೇಶಕ ನೇಮಕ ಹಿನ್ನೆಲೆ ಪಾರ್ಟಿ ಕೊಡುವುದಾಗಿ ಜಮೀನಿಗೆ ಕರೆಸಿ ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಕೊಲೆಗೂ ಮುನ್ನ ಕಣ್ಣಿಗೆ ಖಾರದ ಪುಡಿ ಎರಚಿ ನಂತರ ಹತ್ಯೆಗೈಯಲಾಗಿದೆ. ಸಾಗನೂರ ಗ್ರಾಮದ ಸಚಿನ್& ಗ್ಯಾಂಗ್ ನಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಗಾಣಗಾಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.