ಬಿ.ಪಿ. ಲೋ ಆಗಿ ನಿಯಂತ್ರಣ ತಪ್ಪಿ ಆಟೋ ಪಲ್ಟಿ; ಚಾಲಕ ಮೃತ್ಯು.!
Twitter
Facebook
LinkedIn
WhatsApp

ಆಟೋ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಬಳಿ ಭಾನುವಾರ ರಾತ್ರಿ ನಡೆದಿದೆ.
ವಿವೇಕಾನಂದ ದೇವರಗದ್ದೆ ಮೃತ ಆಟೋಚಾಲಕನಾಗಿದ್ದಾರೆ. ಭಾನುವಾರ ರಾತ್ರಿ 9 ರ ಸುಮಾರಿಗೆ ಈ ಘಟನೆ ನಡೆದಿದ್ದು ಇಂಜಾಡಿ ಬಳಿ ಹೋಗುತ್ತಿರುವಾಗ ವಿವೇಕಾನಂದ ಅವರಿಗೆ ಬಿ.ಪಿ. ಲೋ ಆದ ಪರಿಣಾಮ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಬಿದ್ದು ಗಂಭೀರ ಗಾಯಗೊಂಡರೆನ್ನಲಾಗಿದೆ.
ತಕ್ಷಣವೇ ಅವರನ್ನು ಆಸ್ಪತ್ರೆ ಸಾಗಿಸುವ ಪ್ರಯತ್ನ ಮಾಡಲಾಯಿತಾದ್ರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.