ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

5, 8, 9, 11ನೇ ತರಗತಿಗಳ ಪಬ್ಲಿಕ್ ಪರೀಕ್ಷೆಗೆ ಅನುಮತಿ ನೀಡಿದ ಹೈಕೋರ್ಟ್ ವಿಭಾಗೀಯ ಪೀಠ..!

Twitter
Facebook
LinkedIn
WhatsApp
5, 8, 9, 11ನೇ ತರಗತಿಗಳ ಪಬ್ಲಿಕ್ ಪರೀಕ್ಷೆಗೆ ಅನುಮತಿ ನೀಡಿದ ಹೈಕೋರ್ಟ್ ವಿಭಾಗೀಯ ಪೀಠ..!
ಶಾಲೆಗಳ 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ (School Board Exam)  ಅನುಮತಿ ಕರ್ನಾಟಕ ಹೈಕೋರ್ಟ್ (Karnataka High Court Division bench)​ ಅನುಮತಿ ನೀಡಿ ಆದೇಶ ಹೊರಡಿಸಿದೆ. ಹೈಕೋರ್ಟ್​ನ ಏಕಸದಸ್ಯ ಪೀಠದ ಶಾಲೆಗಳ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್​ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆಹಿಡಿದಿದ್ದು, ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಿಗದಿಯಂತೆ ಸೋಮವಾರದಿಂದ ಬೋರ್ಡ್ ಪರೀಕ್ಷೆಗಳು ನಡೆಯಲಿವೆ.

​2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್​ ಪರೀಕ್ಷೆಯನ್ನು ರದ್ದುಪಡಿಸಿತ್ತು. ಇದರಿಂದ ಸರ್ಕಾರ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು.

ಮೇಲ್ಮನವಿ ಸಲ್ಲಿಸಿದ್ದ ಸರ್ಕಾರ 5,3,6,8ನೇ ತರಗತಿಯ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಖಾಸಗಿ ಶಾಲೆಗಳಷ್ಟೇ ಬೋರ್ಡ್ ಪರೀಕ್ಷೆಗೆ ತಕರಾರಿದೆ. ಸ್ವಹಿತಾಸಕ್ತಿಗಾಗಿ ಖಾಸಗಿ ಶಾಲೆಗಳು ರಿಟ್ ಸಲ್ಲಿಸಿವೆ. ಪೋಷಕರಾಗಲೀ, ಮಕ್ಕಳಾಗಲೀ ಬೋರ್ಡ್ ಪರೀಕ್ಷೆಗೆ ಆಕ್ಷೇಪಿಸಿಲ್ಲ. ಬೋರ್ಡ್ ಪರೀಕ್ಷೆಯಿಂದ ಖಾಸಗಿ ಶಾಲೆಗಳ ಮೌಲ್ಯಮಾಪನವಾಗಲಿದೆ. ತಡೆಯಾಜ್ಞೆಯಿಂದ ಸೋಮವಾರ ನಡೆಯುವ ಪರೀಕ್ಷೆ ಅಡಕತ್ತರಿಗೆ ಸಿಲುಕಿದೆ. ಹೀಗಾಗಿ ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಸರ್ಕಾರದ ಪರ ಎಎಜಿ ವಿಕ್ರಮ್ ಹುಯಿಲಗೋಳ್‌ ಅವರು ಮೇಲ್ಮನವಿಯಲ್ಲಿ ಮನವಿ ಮಾಡಿದ್ದರು. ಮತ್ತೊಂದೆಡೆ ಸರ್ಕಾರದ ಈ ಮನವಿಗೆ ಖಾಸಗಿ ಶಾಲೆಗಳ ಸಂಘ ಆಕ್ಷೇಪ ವ್ಯಕ್ತಪಡಿಸಿತ್ತು. ಅಂತಿಮವಾಗಿ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಎಕ್ಸಾಂ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ.

ಬೋರ್ಡ್​ ಎಕ್ಸಾಂ ರದ್ದುಪಡಿಸಿದ್ದ ಏಕಸದಸ್ಯ ಪೀಠ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಬೋರ್ಡ್​ ಮೂಲಕ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿ ಸಂಘ (ರುಪ್ಸಾ) ಹಾಗೂ ಅನುದಾನರಹಿತ ಮಾನ್ಯತೆ ಹೊಂದಿದ ಶಾಲೆಗಳ ಸಂಘಟನೆ ರಿಟ್ ಅರ್ಜಿ ಸಲ್ಲಿಸಿದ್ದವು. ಈ ಎರಡು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ರವಿ ವಿ ಹೊಸಮನಿ ಅವರಿದ್ದ ಏಕಸದಸ್ಯ ಪೀಠ, ಬೋರ್ಡ್​ ಪರೀಕ್ಷೆಯನ್ನು ರದ್ದು ಮಾಡಿ ಆದೇಶ ಹೊರಡಿಸಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist