ಬಾಲಕಿಯ ಮೇಲೆ ಗ್ಯಾಂಗ್ ರೇಪ್: ಮೂವರು ಯುವಕರ ಬಂಧನ!
Twitter
Facebook
LinkedIn
WhatsApp
ಜಾತ್ರೆ ನಡೆಯುತ್ತಿದ್ದ ವೇಳೆ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರು ಯುವಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಮಾರ್ಚ್ 4 ರಂದು ಜಾತ್ರೆಯ ಸಮಯದಲ್ಲಿ ಹುಡುಗಿ ತನ್ನ ಸ್ನೇಹಿತನೊಂದಿಗೆ ಹತ್ತಿರದ ಬೆಟ್ಟದ ಮೇಲೆ ಕುಳಿತಿದ್ದಳು. ಅವರ ಮೇಲೆ ನಿಗಾ ಇಟ್ಟಿದ್ದ ಮೂವರು ಯುವಕರು ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿ ನಂತರ ಹುಡುಗಿಯನ್ನು ಸಮೀಪದ ಬಂಡೆಪಾಳ್ಯ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ದಾಖಲಿಸಿದ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.