ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಸೇರಿ ಉಚಿತ ಯೋಜನೆಯ ಕರಪತ್ರದ ಮೂಲಕ ಎಎಪಿ ಯ ಭರ್ಜರಿ ಚುನಾವಣಾ ಪ್ರಚಾರ..!

Twitter
Facebook
LinkedIn
WhatsApp
ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಸೇರಿ ಉಚಿತ ಯೋಜನೆಯ ಕರಪತ್ರದ ಮೂಲಕ ಎಎಪಿ ಯ ಭರ್ಜರಿ ಚುನಾವಣಾ ಪ್ರಚಾರ..!

ಆಮ್ ಆದ್ಮಿ ಪಕ್ಷ (AAP) ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಲೋಕಸಭಾ ಚುನಾವಣಾ (Lok Sabha Election 2024) ಪ್ರಚಾರದ ಕಹಳೆಯನ್ನು ಊದಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಅವರೊಂದಿಗೆ ಸೇರಿ ಪಕ್ಷದ ಪ್ರಚಾರವನ್ನು ಶುಕ್ರವಾರ ಪ್ರಾರಂಭಿಸಿದ್ದು, ಮತದಾರರಿಗೆ 9 ಉಚಿತ ಯೋಜನೆಗಳನ್ನು ನೀಡುವ ಕರಪತ್ರವನ್ನು ಬಿಡುಗಡೆ ಮಾಡಿದ್ದಾರೆ.

ಆಮ್ ಆದ್ಮಿ ಪಕ್ಷದ ಪ್ರಧಾನ ಕಚೇರಿಯಲ್ಲಿ, ಪಕ್ಷದ ಇತರ ಮುಖಂಡರು ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಪ್ರಚಾರವನ್ನು ಪ್ರಾರಂಭಿಸಲಾಗಿದೆ. ʼನನ್ನ ಕುಟುಂಬವಾಗಿರುವ ದೆಹಲಿಯ ಜನರಿಗೆ ಸೇವೆ ಸಲ್ಲಿಸಲು ನಾನು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆʼ ಎಂದು ಕೇಜ್ರಿವಾಲ್ ಈ ಸಂದರ್ಭದಲ್ಲಿ ಹೇಳಿದರು. “ಸಂಸದ್ ಮೇ ಭಿ ಕೇಜ್ರಿವಾಲ್, ತೋ ದಿಲ್ಲಿ ಹೋಗಿ ಔರ್ ಖುಷ್ ಹಾಲ್’ (ಸಂಸತ್‌ನಲ್ಲೂ ಕೇಜ್ರಿವಾಲ್, ಹಾಗಾದರೆ ದಿಲ್ಲಿ ಇನ್ನಷ್ಟು ಖುಷಿ, ಸಮೃದ್ಧ) ಎಂಬುದು ನಮ್ಮ ಚುನಾವಣಾ ಘೋಷಣೆ” ಎಂದರು.

“ದೆಹಲಿ ಮತ್ತು ಪಂಜಾಬ್ ಇಂದು ಎಎಪಿ ಆಡಳಿತದಲ್ಲಿವೆ. ಈ ಎರಡು ರಾಜ್ಯಗಳಲ್ಲಿ ಮಾತ್ರ ಉಚಿತ ವಿದ್ಯುತ್ ಸರಬರಾಜು ಇದೆ. ಯಾವಾಗಲೂ ನಿಮ್ಮ ಕುಟುಂಬವನ್ನು ನೋಡಿಕೊಳ್ಳುವ ಮತ್ತು ಯಾವಾಗಲೂ ನಿಮ್ಮನ್ನು ರಕ್ಷಿಸುವ ನಿಮ್ಮ ಮಗನಿಗೆ ಈ ಬಾರಿ ನಿಮ್ಮ ಆಶೀರ್ವಾದ ನೀಡಿ. ನಿಮ್ಮ ಕೆಲಸ ಮತ್ತು ದೆಹಲಿಯ ಅಭಿವೃದ್ಧಿಯನ್ನು ತಡೆಯುವವರನ್ನು ಗುರುತಿಸಿ ಮತ್ತು ಅವರ ತಪ್ಪಿಗೆ ಈ ಬಾರಿ ಶಿಕ್ಷೆ ನೀಡಿ” ಎಂದು ಅವರು ಮತದಾರರಲ್ಲಿ ಮನವಿ ಮಾಡಿದರು.

ಇದಕ್ಕೂ ಮುನ್ನ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಎಎಪಿ ಸರ್ಕಾರವು ಬಿಜೆಪಿ ಮತ್ತು ಕೇಂದ್ರೀಯ ತನಿಖಾ ಸಂಸ್ಥೆಗಳೊಂದಿಗೆ ಭಿನ್ನಾಭಿಪ್ರಾಯ ಹೊಂದಿದೆ. ದೆಹಲಿಯ ಗವರ್ನರ್‌ ಮೂಲಕ ಆಪ್ ಸರ್ಕಾರದ ಎಲ್ಲಾ ಕಲ್ಯಾಣ ಯೋಜನೆಗಳನ್ನು ತಡೆಯಲು ಬಿಜೆಪಿ ಪ್ರಯತ್ನಿಸಿತು. ಆದರೆ ಅದರ ಏಳು ಸಂಸದರಲ್ಲಿ ಯಾರೂ ಅದರ ವಿರುದ್ಧ ಧ್ವನಿ ಎತ್ತಲಿಲ್ಲ” ಎಂದು ಅವರು ಹೇಳಿದರು.

ʻಇಂಡಿಯಾ ಬ್ಲಾಕ್ʼನಲ್ಲಿ ಕಾಂಗ್ರೆಸ್ ಪಾಲುದಾರನಾಗಿರುವ ಆಪ್‌, ದೆಹಲಿ, ಗುಜರಾತ್ ಮತ್ತು ಹರಿಯಾಣದಲ್ಲಿ ಸಾರ್ವತ್ರಿಕ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದ ಮಾಡಿಕೊಂಡಿದೆ. ದೆಹಲಿಯ ಏಳು ಲೋಕಸಭಾ ಸ್ಥಾನಗಳ ಪೈಕಿ ನಾಲ್ಕರಲ್ಲಿ ಎಎಪಿ ಸ್ಪರ್ಧಿಸಲಿದೆ ಮತ್ತು ಉಳಿದ ಮೂರರಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಗುಜರಾತ್‌ನಲ್ಲಿ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್‌ನೊಂದಿಗೆ ಒಪ್ಪಂದದಲ್ಲಿ ಆಪ್‌ ಪಡೆದುಕೊಂಡಿದೆ- ಭರೂಚ್ ಹಾಗೂ ಜಾಮ್‌ನಗರ. ಹರಿಯಾಣದಲ್ಲಿ ಕುರುಕ್ಷೇತ್ರದಲ್ಲಿ ಸ್ಪರ್ಧಿಸಲಿದೆ. ಅಸ್ಸಾಂನ ಗುವಾಹಟಿ, ದಿಬ್ರುಗಢ ಮತ್ತು ಸೋನಿತ್‌ಪುರ ಲೋಕಸಭಾ ಕ್ಷೇತ್ರಗಳಿಂದ ತನ್ನ ಅಭ್ಯರ್ಥಿಗಳನ್ನು ಆಪ್‌ ಘೋಷಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist