ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

IND vs ENG: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಭಾರತ ತಂಡ.!

Twitter
Facebook
LinkedIn
WhatsApp
IND vs ENG: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಭಾರತ ತಂಡ.!

ಧರ್ಮಶಾಲಾದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾ (Team India) ಜಯ ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಪರ ಆರಂಭಿಕ ಆಟಗಾರ ಝಾಕ್ ಕ್ರಾಲಿ (79) ಅರ್ಧಶತಕ ಬಾರಿಸಿ ಮಿಂಚಿದ್ದರು.

ಆದರೆ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಕುಲ್ದೀಪ್ ಯಾದವ್ ಹಾಗೂ ರವಿಚಂದ್ರನ್ ಅಶ್ವಿನ್ ಸ್ಪಿನ್ ದಾಳಿಗೆ ಕ್ರೀಸ್​ ಕಚ್ಚಿ ನಿಲ್ಲಲು ಪರದಾಡಿದ ಇಂಗ್ಲೆಂಡ್ ಮೊದಲ ಇನಿಂಗ್ಸ್​ನಲ್ಲಿ 218 ರನ್​ಗಳಿಸಲಷ್ಟೇ ಶಕ್ತರಾದರು. ಟೀಮ್ ಇಂಡಿಯಾ ಪರ ಕುಲ್ದೀಪ್ ಯಾದವ್ 5 ವಿಕೆಟ್ ಕಬಳಿಸಿದರೆ, ಅಶ್ವಿನ್ 4 ವಿಕೆಟ್ ಪಡೆದರು.

ಇಂಗ್ಲೆಂಡ್ ಆಲೌಟ್ ಆದ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 104 ರನ್ ಪೇರಿಸಿ ಜೈಸ್ವಾಲ್ (57) ಔಟಾದರು. ಇನ್ನು ರೋಹಿತ್ ಶರ್ಮಾ (103) ಹಾಗೂ ಶುಭ್​ಮನ್ ಗಿಲ್ (110) ಭರ್ಜರಿ ಶತಕ ಸಿಡಿಸಿದರು.

ಆ ಬಳಿಕ ಬಂದ ದೇವದತ್ ಪಡಿಕ್ಕಲ್ (65) ಹಾಗೂ ಸರ್ಫರಾಝ್ ಖಾನ್ (56) ಅರ್ಧಶತಕ ಬಾರಿಸಿ ಮಿಂಚಿದರು. ಪರಿಣಾಮ 2ನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ ಸ್ಕೋರ್ 450 ರನ್​ಗಳ ಗಡಿ ದಾಟಿತು. ಮೂರನೇ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಕುಲ್ದೀಪ್ ಯಾದವ್ (30) ಹಾಗೂ ಜಸ್​ಪ್ರೀತ್ ಬುಮ್ರಾ 20 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಮೊದಲ ಇನಿಂಗ್ಸ್​ನಲ್ಲಿ 477 ರನ್ ಕಲೆಹಾಕಿ ಟೀಮ್ ಇಂಡಿಯಾ 259 ರನ್​ಗಳ ಮುನ್ನಡೆ ಪಡೆಯಿತು.

ದ್ವಿತೀಯ ಇನಿಂಗ್ಸ್​:

259 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಆರಂಭದಲ್ಲೇ ರವಿಚಂದ್ರನ್ ಅಶ್ವಿನ್ ಆಘಾತ ನೀಡಿದರು. ಪರಿಣಾಮ 103 ರನ್​ ಕಲೆಹಾಕುವಷ್ಟರಲ್ಲಿ ಇಂಗ್ಲೆಂಡ್ 5 ಪ್ರಮುಖ ವಿಕೆಟ್ ಕಳೆದುಕೊಂಡಿತು. ಇದಾಗ್ಯೂ ಒಂದೆಡೆ ಕ್ರೀಸ್ ಕಚ್ಚಿ ನಿಂತು ಆಡಿದ ಜೋ ರೂಟ್ (84) ಅರ್ಧಶತಕ ಬಾರಿಸಿ ಮಿಮಚಿದರು.

ಆದರೆ ಮತ್ತೊಂದೆಡೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಇಂಗ್ಲೆಂಡ್ ತಂಡವು 195 ರನ್​ಗಳಿಗೆ ಆಲೌಟ್ ಆಗುವ ಮೂಲಕ ಇನಿಂಗ್ಸ್ ಹಾಗೂ 64 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಭರ್ಜರಿ ಗೆಲುವಿನ ಮೂಲಕ ಐದು ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 4-1 ಅಂತರದಿಂದ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಪರ ದ್ವಿತೀಯ ಇನಿಂಗ್ಸ್​ನಲ್ಲಿ ಅಶ್ವಿನ್ 5 ವಿಕೆಟ್ ಕಬಳಿಸಿದರೆ, ಜಸ್​ಪ್ರೀತ್ ಬುಮ್ರಾ ಮತ್ತು ಕುಲ್ದೀಪ್ ಯಾದವ್ ತಲಾ 2 ವಿಕೆಟ್ ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist