ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಮೇಶ್ವರಂ ಬಾಂಬ್ ಬ್ಲಾಸ್ಟ್ ಪ್ರಕರಣ; ಓರ್ವನನ್ನು ವಶಕ್ಕೆ ಪಡೆದ ಎನ್​ಐಎ..!

Twitter
Facebook
LinkedIn
WhatsApp
Pinterest
ರಾಮೇಶ್ವರಂ ಬಾಂಬ್ ಬ್ಲಾಸ್ಟ್ ಪ್ರಕರಣ; ಓರ್ವನನ್ನು ವಶಕ್ಕೆ ಪಡೆದ ಎನ್​ಐಎ..!

ಬೆಂಗಳೂರಿನ ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯಲ್ಲಿ ದಾಳಿ ನಡೆಸಿದ ಎನ್​ಐಎ ಅಧಿಕಾರಿಗಳು ಯುವಕನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.

ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಯುವಕನ ಮನೆ ಮೇಲೆ ದಾಳಿ ನಡೆಸಿದ ಎನ್​ಐಎ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆಗೆ ಎನ್​ಐಎ ಅಧಿಕಾರಿಗಳು ಯುವಕನನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ರಾಮೇಶ್ವರಂ ಬಾಂಬ್ ಪ್ರಕರಣಕ್ಕೂ ಮತ್ತು ಈ ಯುವಕನಿಗೂ ಏನಾದ್ರೂ ಲಿಂಕ್ ಇದೆಯೇ ಎಂಬುದು ವಿಚಾರಣೆಯಿಂದ ತಿಳಿದುಬರಬೇಕಿದೆ.

ಬೆಂಗಳೂರಿನ ವೈಟ್‌ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಭಾರೀ ಸ್ಫೋಟ ಸಂಭವಿಸಿತ್ತು. 9 ಮಂದಿ ಗ್ರಾಹಕರು ಗಾಯಗೊಂಡಿದ್ದರು. ಸುಧಾರಿತ ಕಡಿಮೆ ತೀವ್ರತೆಯ ಬಾಂಬ್​ ಇದಾಗಿದ್ದರಿಂದ ದೊಡ್ಡ ಹಾನಿ ಸಂಭವಿಸಿರಲಿಲ್ಲ.

ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿ ಬ್ಯಾಗ್ ಸಮೇತ ಕೆಫೆಗೆ ಆಗಮಿಸಿ, ಬಳಿಕ ಒಬ್ಬನೇ ತೆರಳುತ್ತಿರುವುದು ಪತ್ತೆಯಾಗಿದೆ. ಈತನ ಚಹರೆಯನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.

ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದು ಹೀಗೆ: “ರಾಮೇಶ್ವರಂ ಕೆಫೆಯಲ್ಲಿ ಇತ್ತೀಚೆಗೆ ನಡೆದ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಸುಳಿವು ದೊರತಿದ್ದು, ತನಿಖೆಯನ್ನು ರಾಜ್ಯ ಸಿಸಿಬಿ ಹಾಗೂ ಎನ್ಐಎ ತಂಡಗಳು ಜಂಟಿಯಾಗಿ ನಡೆಸುತ್ತಿವೆ” ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.

ಎನ್​ಐಎ ಅಧಿಕಾರಿಗಳಿಂದ ತನಿಖೆ ಚುರುಕು: ಬಾಂಬ್‌ ಸ್ಫೋಟ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳ ತಂಡ 5 ಮಾರ್ಚ್​ 2024ರಂದು ರಾಮೇಶ್ವರಂ ಕೆಫೆಗೆ ಭೇಟಿ ನೀಡಿ‌ ತನಿಖೆ ಆರಂಭಿಸಿತ್ತು. ಎನ್ಐಎ ಎಸ್.ಪಿ ನೇತೃತ್ವದ ಮೂವರು ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದು, ಕೆಫೆ ಸಿಬ್ಬಂದಿಯಿಂದ ಘಟನಾ ದಿನದ ವಿವರ ಪಡೆದುಕೊಂಡಿದ್ದರು. ಈ ತನಿಖೆ ಮುಂದುವರಿದಿದ್ದು, ಆರೋಪಿ ಸುಳಿವು ನೀಡಿದವರಿಗೆ ಎನ್​ಐಎ 10 ಲಕ್ಷ ನಗದು ಬಹುಮಾನ ಘೋಷಿಸಿತ್ತು.

ಶಂಕಿತನ ವಶಕ್ಕೆ ಪಡೆದ ಎನ್ಐಎ: ಮಾರ್ಚ್​ 8ರಂದು ಎನ್​ಐಎ ತಂಡ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನೊಬ್ಬನನ್ನು ವಶಕ್ಕೆ ಪಡೆದಿತ್ತು. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತ​ನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದರು.

ರಾಜ್ಯದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ್ದ ಆರೋಪದಡಿ ಬಳ್ಳಾರಿಯ ಕೌಲ್​ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿದ್ದ, ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯ ಮಿನಾಜ್ ಹಾಗೂ ಆತನ ಗುಂಪಿನ ಮತ್ತೋರ್ವ ಸದಸ್ಯ ಸಯ್ಯದ್ ಸಮೀರ್ ಎಂಬಾತನನ್ನು ಈ ಹಿಂದೆ ಎನ್ಐಎ ಬಂಧಿಸಿತ್ತು. ಬಳಿಕ ಆತನನ್ನು ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಕೆಲ ಮಹತ್ವದ ಸುಳಿವುಗಳು ಲಭ್ಯವಾದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿತ್ತು. ಸದ್ಯ ಬಳ್ಳಾರಿಯಿಂದ ಮತ್ತೊಬ್ಬ ಯುವಕನನ್ನು ಎನ್​ಐಎ ತಂಡ ವಶಕ್ಕೆ ಪಡೆದಿದ್ದು ತನಿಖೆ ಚುರುಕುಗೊಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist