ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರನ್ನು ನೇಮಿಸಿದ ಸಿಎಂ ಸಿದ್ದರಾಮಯ್ಯ..!
ರಾಜ್ಯ ಸರ್ಕಾರದ (Karnataka Government) ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಆದೇಶ ಹೊರಡಿಸಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao), ಕಂದಾಯ ಇಲಾಖೆ ಕೃಷ್ಣಭೈರೇಗೌಡ (Krishna Byre Gowda), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ (Eshwar Khandre) ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಅವರನ್ನು ಸರ್ಕಾರದ ವಕ್ತಾರರಾಗಿ ನೇಮಿಸಲಾಗಿದೆ. ಈ ಐವರು ಸಚಿವರಿಗೆ ದಾಖಲೆಗಳು ಹಾಗೂ ಮಾಹಿತಿಗಳನ್ನು ಕಾಲ ಕಾಲಕ್ಕೆ ಒದಗಿಸುವಂತೆ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ.
ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ವಿರೋಧ ಪಕ್ಷಗಳು ಮಾಡುವ ಆರೋಪಗಳಿಗೆ ಸೂಕ್ತ ರೀತಿಯಲ್ಲಿ ಉತ್ತರ ನೀಡಲು ಈ ಐವರಿಗೆ ಜವಾಬ್ದಾರಿ ನೀಡಲಾಗಿದೆ. ವಿರೋಧ ಪಕ್ಷಗಳು ಸರ್ಕಾರದ ಮೇಲೆ ಮಾಡುವ ಆರೋಪಗಳಿ ಮತ್ತು ಟೀಕೆಗಳಿಗೆ ಈ ಐವರು ಸಚಿವರು ಸದನದ ಒಳಗೆ ಮತ್ತು ಹೊರಗೆ ಎರಡೂ ಕಡೆ ಸೂಕ್ತ ರೀತಿಯಲ್ಲಿ ಪ್ರತ್ಯುತ್ತರ ನೀಡುತ್ತಲೇ ಬಂದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಈ ಐವರು ಸಚಿವರು ಸಾಕಷ್ಟು ಆಕ್ಟಿವ್ ಆಗಿ ಇದ್ದಾರೆ. ಬಿಜೆಪಿಯ ಮತೀಯ ಹೇಳಿಕೆಗಳಿಗೆ ಈ ಸಚಿವರು ತಕ್ಕ ಪ್ರತ್ಯುತ್ತರ ನೀಡುತ್ತಾ ಬಂದಿದ್ದಾರೆ. ಮತ್ತು ಈ ಐವರು ಸಚಿವರು ಸಿದ್ದರಾಮಯ್ಯ ಅವರ ಆಪ್ತ ಬಣದಲ್ಲೂ ಗುರುತಿಸಿಕೊಂಡಿದ್ದಾರೆ.
ಸಚಿವರುಗಳಾದ @dineshgrao, @krishnabgowda, @PriyankKharge, @eshwar_khandre ಹಾಗೂ ಸಂತೋಷ್ ಲಾಡ್ ಅವರನ್ನು ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಿಸಿ ಆದೇಶಿಸಲಾಗಿದೆ.
— Siddaramaiah (@siddaramaiah) March 13, 2024
ಸರ್ಕಾರದ ವಕ್ತಾರರಾಗಿ ನೇಮಕಗೊಂಡಿರುವ ಈ ಎಲ್ಲಾ ಸಚಿವರು ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ ರಾಜ್ಯದ ಜನರ ಮುಂದಿಡಲಿದ್ದಾರೆ ಎಂಬ ಪೂರ್ಣ ವಿಶ್ವಾಸವಿದೆ.… pic.twitter.com/WtalWOGcPj