ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಯಡಿಯೂರಪ್ಪರಿಂದ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ ; ಬಿಎಸ್ ವೈ ಪ್ರತಿಕ್ರಿಯೆ ಏನು?

Twitter
Facebook
LinkedIn
WhatsApp
ಯಡಿಯೂರಪ್ಪರಿಂದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ; ಬಿಎಸ್ ವೈ ಪ್ರತಿಕ್ರಿಯೆ ಏನು?

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಉಪಕಾರ ಮಾಡಿದ್ರೆ ನನ್ನ ವಿರುದ್ಧ ಹೀಗೆ ಮಾಡಿದ್ದಾರೆ ಎಂದು ತಾವು ನಿರಪರಾಧಿ ಎಂಬ ರೀತಿಯಲ್ಲಿ ಮಾತನಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, “ಯಾರೋ ಒಬ್ಬ ಹೆಣ್ಣು ಮಗಳು ಅನ್ಯಾಯವಾಗಿದೆ ಎಂದು ನನ್ನ ಬಳಿ ಬಂದಿದ್ದರು. ತಾಯಿ- ಮಗಳು ಹಲವು ಬಾರಿ ಬಂದು ಹೋಗುತ್ತಿದ್ದರು. ಅವರನ್ನು ಮನೆಯ ಒಳಗೆ ಕರೆಸಿ ಸಮಸ್ಯೆ ಕೇಳಿದ್ದೇನೆ. ಈ ವೇಳೆ ತಮಗೆ ಅನ್ಯಾಯವಾಗಿದೆ ಎಂದಿದ್ದರು. ಆಮೇಲೆ ನನ್ನ ಮೇಲೆ ಏನೇನೋ ಮಾತನಾಡಲು ಶುರು ಮಾಡಿದರು. ಕಮಿಷನರ್‌ಗೆ ಕರೆ ಮಾಡಿ ಅವರನ್ನು ಕಳುಹಿಸಿಕೊಟ್ಟೆ” ಎಂದಿದ್ದಾರೆ.

ಆದರೆ, ಈಗ ಅವರು ನನ್ನ ವಿರುದ್ಧವೆ ಏನೋ ಮಾಡುತ್ತಿದ್ದಾರೆ. ಹೆಣ್ಮಗಳು ನನ್ನ ಮೇಲೆ ಕಂಪ್ಲೆಂಟ್ ಕೊಟ್ಟಿದ್ದಾರೆ. ಆರೋಪ ನಿರಾಧಾರವಾಗಿದೆ. ಇರಲಿ ಎಲ್ಲವನ್ನು ಎದುರಿಸೋಣ. ಇದು ರಾಜಕೀಯ ಪ್ರೇರಿತ ಎಂದು ಹೇಳಲು ಇಷ್ಟಪಡುವುದಿಲ್ಲ. ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ. ಮಾರ್ಚ್ ೧೪ರ ಗುರುವಾರ ತಡರಾತ್ರಿ 81 ವರ್ಷದ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗೃಹ ಚಿವ ಜಿ ಪರಮೇಶ್ವರ್ ಹೇಳಿದ್ದೇನು? ಪ್ರಕರಣದ ಬಗ್ಗೆ ಮಾತನಾಡಿರುವ ಗೃಹ ಸಚಿವ ಜಿ ಪರಮೇಶ್ವರ್, “ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಸಾಧ್ಯವಿಲ್ಲ. ಇದು ಒಬ್ಬ ಮಾಜಿ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದ್ದಾಗಿದೆ. ಇದು ಬಹಳ ಸೂಕ್ಷ್ಮ ವಿಷಯವಾಗಿದೆ. ಮಹಿಳೆಗೆ ರಕ್ಷಣೆ ಅಗತ್ಯ ಬಿದ್ದರೆ ಕೊಡುತ್ತೇವೆ” ಎಂದಿದ್ದಾರೆ.

ಮುಂದುವರಿದು, ” ಯಡಿಯೂರಪ್ಪ ವಿರುದ್ಧ ದೂರು ನೀಡಿದ ಮಹಿಳೆ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳುತ್ತಿದ್ದಾರೆ, ದೂರನ್ನು ಲಿಖಿತವಾಗಿ ನೀಡಿಲ್ಲ ಬದಲಿಗೆ ಟೈಪ್ ಮಾಡಿ ಕೊಟ್ಟಿದ್ದಾರೆ. ಇದು ಒಬ್ಬ ಮಾಜಿ ಸಿಎಂಗೆ ಸಂಬಂಧಿಸಿದ ವಿಷಯ. ಎಚ್ಚರಿಕೆಯಿಂದ ಮಾತನಾಡಬೇಕು” ಎಂದು ಹೇಳಿದ್ದಾರೆ.

ಫೆಬ್ರುವರಿ 2 ರಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಯಡಿಯೂರಪ್ಪ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಾಲಕಿಯ ತಾಯಿ ದೂರು ನೀಡಿದ್ದಾರೆ. ಪೋಕ್ಸೋ (Protection of Children from Sexual Offences (Pocso) Act) ಕಾನೂನಿನ ಸೆಕ್ಷನ್ 8 ಮತ್ತು ಐಪಿಸಿ ಸೆಕ್ಷನ್‌ 354 (ಎ) ಅಡಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಥಮ ಮಾಹಿತಿ ವರದಿ

ಎಫ್‌ಐಆರ್ ಪ್ರಕಾರ, ಮಗಳ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆಗೆ ವಹಿಸುವಂತೆ ಮನವಿ ಮಾಡಲು ಫೆಬ್ರುವರಿ 2 2024ರ ರಂದು ಯಡಿಯೂರಪ್ಪನವರ ಮನೆಗೆ ಸಂತ್ರಸ್ತ ಬಾಲಕಿ ಹಾಗೂ ತಾಯಿ ಹೋಗಿದ್ದಾರೆ. ಆ ವೇಳೆ ಅಪ್ರಾಪ್ತ ಬಾಲಕಿಯನ್ನು ತನ್ನ ರೂಮಿಗೆ ಕರೆದುಕೊಂಡು ಹೋಗಿ ಸುಮಾರು 5 ನಿಮಿಷಗಳ ಕಾಲ ಬಾಗಿಲು ಹಾಕಿಕೊಂಡು ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ. ರೇಪ್‌ ಆಗಿದೆಯೋ ಇಲ್ಲವೋ ಎಂದು ಚೆಕ್ ಮಾಡಲು ಹಾಗೆ ಮಾಡಿದೆ ಎಂದು ಹೇಳಿ ಕ್ಷಮೆ ಕೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist