ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ ಈಶ್ವರಪ್ಪ..!

Twitter
Facebook
LinkedIn
WhatsApp
ಯಡಿಯೂರಪ್ಪ ಹೃದಯ ಬಗೆದ್ರೆ ಶೋಭಕ್ಕ ಇರ್ತಾರೆ ಎಂದ ಈಶ್ವರಪ್ಪ ಬೆಂಬಲಿಗರು

ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಬೇಸರಗೊಂಡಿರುವ ಕೆಎಸ್ ಈಶ್ವರಪ್ಪ(KS Eshwarappa), ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ(Shivamogga Loksabha constituency) ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಇಂದು (ಮಾರ್ಚ್ 15) ಶಿವಮೊಗ್ಗದ (Shivamogga) ಬಂಜಾರ ಕನ್ವೆನ್ಷನ್​ ಹಾಲ್​ನಲ್ಲಿ ಈಶ್ವರಪ್ಪ ತಮ್ಮ ಬೆಂಬಲಿಗರ ಸಭೆ ನಡೆಸಿದರು. ಸಭೆಯಲ್ಲಿ ಮುಂದಿನ ನಡೆ ಬಗ್ಗೆ ಮುಖಂಡರ ಅಭಿಪ್ರಾಯ ಸಂಗ್ರಹಿಸಿದರು. ಬಳಿಕ ಮಾತನಾಡಿದ ಈಶ್ವರಪ್ಪ, ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಹೋಗುವುದಿಲ್ಲ ಎನ್ನುತ್ತಲ್ಲೇ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದರು.

ಸ್ವತಂತ್ರವಾಗಿ ಸ್ಪರ್ಧಿಸಿ ನಾನು ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಹೋಗುತ್ತಿಲ್ಲ. ಪಕ್ಷ ಒಂದು ಕುಟುಂಬದ ಕೈಯಲ್ಲಿ ಸಿಲುಕಿರುವುದನ್ನು ಬಿಡಿಸಲು ಸ್ಪರ್ಧೆ ಮಾಡುತ್ತೇನೆ. ನೊಂದ ಪಕ್ಷದ ಕಾರ್ಯಕರ್ತರ ಧ್ವನಿಯಾಗಿ ಸ್ಪತಂತ್ರವಾಗಿ ನಿರ್ಧರಿಸುವೆ ಎಂದು ಹೇಳಿದರು. ಈ ಮೂಲಕ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ತೊಡೆತಟ್ಟಿದರು.

ಈಶ್ವರಪ್ಪ ಬೆನ್ನಿಗೆ ನಿಂತ ಹಿಂದುಳಿದ ಒಕ್ಕೂಟ!

ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹಾಗೂ ಅವರ ಕುಟುಂಬಕ್ಕೆ ಬಿಜೆಪಿಯಲ್ಲಿ ಅನ್ಯಾಯ ಆಗಿದೆ ಎಂಬ ಕೂಗು ಕೇಳಿ ಬರುತ್ತಿರುವ ಬೆನ್ನಲ್ಲೇ ಅವರ ಅವರ ಪರವಾಗಿ ಇದೀಗ ಹಿಂದುಳಿದ ವರ್ಗಗಳ ಒಕ್ಕೂಟ ಅಖಾಡಕ್ಕಿಳಿದಿದೆ. ಕೆಎಸ್ ಈಶ್ವರಪ್ಪ ಅವರ ಪುತ್ರ ಕಾಂತೇಶ್‌ಗೆ ಹಾವೇರಿ ಟಿಕೆಟ್‌ ನಿರಾಕರಿಸಲಾಗಿದೆ. ಅಲ್ಲದೆ ಈಶ್ವರಪ್ಪ ಅವರನ್ನು ರಾಜಕೀಯ ಮುಗಿಸುವ ಹುನ್ನಾರ ನಡೆಯುತ್ತಿದೆ ಎಂದು ಹಿಂದುಳಿದ ವರ್ಗಗಳ ಒಕ್ಕೂಟ ಆರೋಪಿಸಿದೆ.

ಈ ನಿಟ್ಟಿನಲ್ಲಿ ಶನಿವಾರ ಬೆಂಗಳೂರಿನಲ್ಲಿ ಪತ್ರಿಕಾ ಗೋಷ್ಠಿಯನ್ನು ಹಮ್ಮಿಕೊಂಡಿದೆ. ಕೆಎಸ್‌ ಈಶ್ವರಪ್ಪ ಅವರಿಗೆ ರಾಜಕೀಯವಾಗಿ ಅನ್ಯಾಯ ಆಗುತ್ತಿರುವುದಕ್ಕೆ ಬಿಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ಕಾರಣ ಎಂದು ಅವರ ವಿರುದ್ಧ ಅಹಿಂದ ಒಕ್ಕೂಟದ ಅಧ್ಯಕ್ಷ ಕುರುಬರ ಮುಕುಡಪ್ಪ ಪತ್ರಿಕಾಗೋಷ್ಠಿ ನಡೆಸುವ ಮೂಲಕ ವಾಗ್ದಾಳಿ ನಡೆಸಲಿದ್ದಾರೆ.

ಕೆಎಸ್ ಈಶ್ವರಪ್ಪ ಅವರು ತಮ್ಮ ಪುತ್ರ ಕಾಂತೇಶ್‌ಗೆ ಹಾವೇರಿಯಲ್ಲಿ ಟಿಕೆಟ್‌ ನೀಡುವಂತೆ ಬೇಡಿಕೆ ಇಟ್ಟಿದ್ದರು. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆದರೆ ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಟಿಕೆಟ್ ಕೊಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಕೆಎಸ್ ಈಶ್ವರಪ್ಪ ಬಹಿರಂಗವಾಗಿಯೇ ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಅಲ್ಲದೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ವಿರುದ್ಧವೂ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ಈ ಹಿಂದೆ ರಾಯಣ್ಣ ಬ್ರಿಗೇಡ್ ಕಟ್ಟಿದ್ದ ಈಶ್ವರಪ್ಪ ಹೈಕಮಾಂಡ್ ಸೂಚನೆಯಂತೆ ಸುಮ್ಮನಾಗಿದ್ದರು. ಆದರೆ ಇದೀಗ ಅವರಿಗೆ ಹಾಗೂ ಅವರ ಪುತ್ರನಿಗೆ ರಾಜಕೀಯವಾಗಿ ಯಾವುದೇ ಸ್ಥಾನ ಮಾನ ಇಲ್ಲ. ಇತ್ತ ಬಿಎಸ್‌ ಯಡಿಯೂರಪ್ಪ ಓರ್ವ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷನಾದರೆ ಮತ್ತೋರ್ವ ಸಂಸದರಾಗಿದ್ದಾರೆ.

ಪುತ್ರನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಈಶ್ವರಪ್ಪ ಇದೀಗ ಅಖಾಡಕ್ಕಿಳಿದಿದ್ದಾರೆ. ಬೆಂಬಲಿಗರ ಸಭೆಯನ್ನು ನಡೆಸುವ ಮೂಲಕ ಎಚ್ಚರಿಕೆಯ ಸಂದೇಶವನ್ನು ರವಾನಿಸುತ್ತಿದ್ದಾರೆ. ಅಲ್ಲದೆ ಶಿವಮೊಗ್ಗದಿಂದ ಪಕ್ಷೇತರವಾಗಿ ಕಣಕ್ಕಿಳಿಯುವ ಚಿಂತನೆಯನ್ನು ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ