ಯಾವ ರಾಜಕೀಯ ಪಕ್ಷಕ್ಕೆ ಈ ಬಾರಿ ಮೇಲುಗೈ; ನ್ಯೂಸ್ 18 ನ ಚುನಾವಣಾ ಸಮೀಕ್ಷೆ ಬಹಿರಂಗ.!
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಎಲೆಕ್ಷನ್‌ಗೆ ಕೆಲವೇ ವಾರಗಳು ಮಾತ್ರ ಬಾಕಿ ಉಳಿದಿದ್ದು,ರಾಜಕೀಯ ನಾಯಕರುಗಳ ನಡುವೆ ವಾಕ್ಸಮರ ಜೋರಾಗಿದೆ.ಇತ್ತ ಕರ್ನಾಟಕದ 28 ಕ್ಷೇತ್ರಗಳಲ್ಲಿ ಯಾರು ಎಷ್ಟು ಸ್ಥಾನಗಳನ್ನು ಗೆಲ್ಲಲಿದ್ದಾರೆ ಎಂಬ ಬಗ್ಗೆ ಚರ್ಚೆ ಶುರುವಾಗಿದೆ.
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ರಾಜಕೀಯ ಪಕ್ಷಗಳ ತಯಾರಿ ಒಂದು ಕಡೆಯಾದ್ರೆ, ಇತ್ತ ಕರ್ನಾಟಕಕ್ಕೆ ಸಂಬಂಧಿಸಿದಂತೆ ನ್ಯೂಸ್ 18 ಚುನಾವಣಾ ಪೂರ್ವ ಸಮೀಕ್ಷೆ ಹೊರಬಿದ್ದಿದೆ. ಈ ಸಮೀಕ್ಷೆಯ ಪ್ರಕಾರ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಫಸಲನ್ನು ತೆಗೆಯುವ ನಿರೀಕ್ಷೆ ಇದ್ದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಕೊಟ್ಟ ಗ್ಯಾರಂಟಿಗಳ ಹೊರತಾಗಿಯೂ ಕಾಂಗ್ರೆಸ್ ನಿರಾಸೆ ಅನುಭವಿಸಲಿದೆ ಎನ್ನಲಾಗಿದೆ.
ನ್ಯೂಸ್ 18 ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ. ಇತ್ತ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಕೇವಲ 3 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದೆ ಎಂದು ಹೇಳಿದೆ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಮೈತ್ರಿ ನಡುವೆ ಪ್ರಬಲ ಪೈಪೋಟಿ ಇದ್ದು, ಆ ಎರಡು ಕ್ಷೇತ್ರಗಳು ಗೆಲುವಿನ ಸಂಖ್ಯೆಯನ್ನು ಸ್ಪಷ್ಟಪಡಿಸಲಿವೆ ಎಂದು ಸಮೀಕ್ಷೆ ತಿಳಿಸಿದೆ.
ಪಿ ಮಾರ್ಕ್ ಸಮೀಕ್ಷೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ? ಇನ್ನೂ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಕುರಿತು ಸ್ಥಳೀಯ ಸುದ್ದಿ ವಾಹಿನಿ ರಿಪಬ್ಲಿಕ್ ಕನ್ನಡದ ಜೊತೆ ಮತದಾರರ ಅಭಿಪ್ರಾಯ ಕಲೆಹಾಕಿರುವ ಪಿ ಮಾರ್ಕ್ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ 23 ರಿಂದ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ. ಇತ್ತ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಕೇವಲ 2 ರಿಂದ 5 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದೆ ಎಂದು ಸಮೀಕ್ಷೆ ಮೂಲಕ ಬಹಿರಂಗವಾಗಿದೆ. ಇನ್ನೂ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಮೈತ್ರಿ ನಡುವೆ ಪ್ರಬಲ ಪೈಪೋಟಿ ಏರ್ಪಡಲಿದ್ದು, ಆ ಎರಡು ಕ್ಷೇತ್ರಗಳು ಗೆಲುವಿನ ಸಂಖ್ಯೆಯನ್ನು ಸ್ಪಷ್ಟಪಡಿಸಲಿವೆ ಎಂದು ಸಮೀಕ್ಷೆ ತಿಳಿಸಿದೆ.