ಬಾಲಿವುಡ್ ಸಿಂಗರ್ ಅನುರಾಧಾ ಪೌಡ್ವಾಲ್ ಬಿಜೆಪಿಗೆ ಸೇರ್ಪಡೆ..!!
ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಹಾಡಿದ್ದ ಬಾಲಿವುಡ್ ಸಿಂಗರ್ ಅನುರಾಧಾ ಪೌಡ್ವಾಲ್ (Anuradha Paudwal) ಅವರು ಇದೀಗ ಬಿಜೆಪಿಗೆ (BJP) ಸೇರ್ಪಡೆಯಾಗಿದ್ದಾರೆ. ಈ ಮೂಲಕ ರಾಜಕೀಯ ಅಖಾಡಕ್ಕೆ ಕಾರವಾರದ (Karwar) ಗಾಯಕಿ ಎಂಟ್ರಿ ಕೊಟ್ಟಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೀರಾ ಎಂದು ಪ್ರಶ್ನೆ ಎದುರಾದಾಗ, ನನಗೆ ಈ ಬಗ್ಗೆ ಗೊತ್ತಿಲ್ಲ. ಮುಂದೆ ನೋಡೋಣ ಎಂದು ಅನುರಾಧಾ ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕದ ಕಾರವಾರದಲ್ಲಿ ಜನಿಸಿದ ಅನುರಾಧಾ ಪೌಡ್ವಾಲ್ ಅವರು ಕನ್ನಡದ ನನ್ನ ಪ್ರೀತಿಯ ಹುಡುಗಿ, ಪ್ರೀತ್ಸೆ ಚಿತ್ರದ ಹಾಡುಗಳು ಸೇರಿದಂತೆ ಹಲವು ಚಿತ್ರಗಳಿಗೆ ಹಾಡಿದ್ದಾರೆ. ಬಹುಭಾಷೆಗಳಲ್ಲಿ 9000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ಸೈ ಎನಿಸಿಕೊಂಡಿದ್ದಾರೆ.
ಬಿಜೆಪಿ ತೊರೆದ ರಾಜ್ಯಸಭಾ ಸಂಸದ ಅಜಯ್ ಪ್ರತಾಪ್ ಸಿಂಗ್..!!
ಮಧ್ಯಪ್ರದೇಶದ ಭಾರತೀಯ ಜನತಾ ಪಕ್ಷದ ರಾಜ್ಯಸಭಾ ಸದಸ್ಯ, ಅಜಯ್ ಪ್ರತಾಪ್ ಸಿಂಗ್ ಅವರು ಶನಿವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಅವರು ತಮ್ಮ X ಖಾತೆಯಲ್ಲಿ ಪೋಸ್ಟ್ ಮಾಡಿದ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಅಲ್ಲದೆ ಇಲ್ಲಿ “ದೊಡ್ಡ ಪ್ರಮಾಣದ ಭ್ರಷ್ಟಾಚಾರ” ನಡೆಯುತ್ತಿದೆ ಜೊತೆಗೆ ಭ್ರಷ್ಟರಿಗೆ ರಕ್ಷಣೆ ಸಿಗುತ್ತಿದ್ದು ಪಕ್ಷವು ರಾಜಕೀಯ ವ್ಯಾಪಾರಿಗಳ ಅಡ್ಡೆಯಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದ್ದಾರೆ.
ಅಜಯ್ ಪ್ರತಾಪ್ ಸಿಂಗ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಇಂದು ಬೆಳಿಗ್ಗೆ ತಮ್ಮ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. “ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪೋಸ್ಟ್ ಮಾಡಿದ್ದಾರೆ.
ಸಿಂಗ್ ಅವರ ಮುಂದಿನ ನಿರ್ಧಾರದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
BJP Rajya Sabha MP Ajay Pratap Singh resigns from the party. pic.twitter.com/W26tD0CA11
— ANI (@ANI) March 16, 2024