ಬೆಳ್ತಂಗಡಿ: ರಸ್ತೆಗೆ ಬಂದ 3 ವರ್ಷದ ಮಗು, ರಿಕ್ಷಾ ಡಿಕ್ಕಿಯಾಗಿ ಸಾವು

ಸೋಣಂದೂರಿನ ಪಣಕಜೆಯಲ್ಲಿ ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗುವಿಗೆ ರಿಕ್ಷಾತಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ಮಾ.16ರಂದು ಬೆಳಗ್ಗೆ ಸಂಭವಿಸಿದೆ.
ಪಣಕಜೆ ಮುಂಡಾಡಿ ನಿವಾಸಿ ಚಂದ್ರ ಶೇಖರ್‌ಮತ್ತು ಉಷಾ ದಂಪತಿಯ ಪುತ್ರ ಕೌಶಿಕ್ ಮೃತಪಟ್ಟ ಮಗು. ಮುಂಡಾಡಿಯಲ್ಲಿ ಚಂದ್ರಶೇಖರ್ ಅವರ ಮನೆ ರಸ್ತೆಯ ಹತ್ತಿರವಿದ್ದು, ಮನೆಯಲ್ಲಿದ್ದ ಮಗು ಓಡಿ ರಸ್ತೆಗೆ ಬಂತೆನ್ನಲಾಗುತ್ತಿದ್ದು, ಆದೇ ಸಮಯಕ್ಕೆ ಬಂದ ರಿಕ್ಷಾ ತಾಗಿ ಗಂಭೀರ ಗಾಯಗೊಂಡಿತು.
ಮಗುವನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗದೆ ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ: ರಸ್ತೆಗೆ ಬಂದ 3 ವರ್ಷದ ಮಗು, ರಿಕ್ಷಾ ಡಿಕ್ಕಿಯಾಗಿ ಸಾವು
ಬೆಳಗಾವಿ : ಭೀಕರ ರಸ್ತೆ ಅಪಘಾತದಲ್ಲಿ ಎಎಸ್‌ಐ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಕೃಷ್ಣಾ ಬಡಾವಣೆ ಬಳಿ ತಡರಾತ್ರಿ ನಡೆದಿದೆ.
ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51), ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಎಎಸ್ಐ. ಬೈಲಹೊಂಗಲ ತಾಲೂಕಿನ ದೊಡವಾಡ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಿಕಲಿ. ಕರ್ತವ್ಯ ಮುಗಿಸಿ ಯರಗಟ್ಟಿಯಲ್ಲಿರುವ ಮನೆಗೆ ಬರುವಾಗ ನಡೆದಿರುವ ಭೀಕರ ರಸ್ತೆ ಅಪಘಾತದಲ್ಲಿ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಲ್ಮೆಟ್ ಧರಿಸದೇ ಅತಿವೇಗವಾಗಿ ಬೈಕ್ ಚಾಲಾಯಿಸಿ ಹಂಪ್ ಜಿಗಿಸಿದ್ದಕ್ಕೆ ನಡೆದಿರು ಅಪಘಾತ.
ಎಲ್ಲ ಪೊಲೀಸರು ಬೈಕ್ ಚಾಲನೆ ವೇಳೆ ಹೆಲ್ಮೆಟ್ ಧರಿಸುವುದು ಕಡ್ಡಾಯಗೊಳಿಸಿ ಬೆಳಗಾವಿ ಎಸ್ಪಿ ಆದೇಶ ಹೊರಡಿಸಿದ್ದರೂ ಮೇಲಾಧಿಕಾರಿಗಳ ನಿರ್ದೇಶನ ಸಮರ್ಪಕವಾಗಿ ಅನುಷ್ಠಾನಗೊಳಿಸದೇ ನಿರ್ಲಕ್ಷ್ಯ ವಹಿಸಿರುವ ಆರೋಪ ಹಿನ್ನೆಲೆ ದೊಡವಾಡ ಠಾಣೆ ಪಿಎಸ್‌ಐ ನಂದೀಶ್‌ರನ್ನು ಅಮಾನತ್ತು ಮಾಡಿ ಬೆಳಗಾವಿ ಎಸ್‌ಪಿ ಡಾ ಭೀಮಾಶಂಕರ್ ಗುಳೇದ್ ಆದೇಶ ಹೊರಡಿಸಿದ್ದಾರೆ.