ಬೆಂಗಳೂರು: ಚಿನ್ನದ ಅಂಗಡಿ ಮಾಲೀಕನ ಮೇಲೆ ಶೂಟೌಟ್; ನಾಲ್ವರು ಅರೆಸ್ಟ್

ಕೊಡಿಗೆಹಳ್ಳಿಯಲ್ಲಿ (Kodigehalli) ಚಿನ್ನದ ಅಂಗಡಿ (Jewellary Shop) ಮಾಲೀಕನ ಮೇಲೆ ಶೂಟೌಟ್ (Shootout) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಖತರ್ನಾಕ್ ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ.
ಖಾನಾ ಪಂಡಿತ್, ಆಶು ಪಂಡಿತ್, ಮೋಸೆ ಅಲಿಯಾಸ್ ಬಂಟಿ ಹಾಗೂ ಸೂರಜ್ ಎಂಬವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಖದೀಮರು ಸಣ್ಣ ಸಣ್ಣ ಆಭರಣದ ಅಂಗಡಿಗಳನ್ನು ಮಾತ್ರ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದರು. ದೊಡ್ಡ ದೊಡ್ಡ ಅಂಗಡಿಗಳಲ್ಲಿ ಸಾಕಷ್ಟು ಜನರು ಕೆಲಸ ನಿರ್ವಹಿಸುತ್ತಾರೆ. ಸಣ್ಣ ಸಣ್ಣ ಅಂಗಡಿಗಳಲ್ಲಿ ಒಬ್ಬರು, ಇಬ್ಬರು ಮಾತ್ರ ಕೆಲಸ ಮಾಡುವುದರಿಂದ ಅಂತಹ ಅಂಗಡಿಗಳನ್ನು ಟಾರ್ಗೆಟ್ ಮಾಡುತ್ತಿದ್ದರು.
ಪ್ರಕರಣ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇನ್ನು ಘಟನೆ ಸಂಬಂಧ ಆರೋಪಿಗಳು ಯಡವಟ್ಟು ಮಾಡಿದ್ದು, ಶೂಟೌಟ್ ವೇಳೆ ತಮ್ಮದೇ ಗ್ಯಾಂಗ್‌ನ ಸದಸ್ಯ ಸೂರಜ್ ಎಂಬಾತನಿಗೆ ಗುಂಡು ಹಾರಿಸಿದ್ದಾರೆ. ಆಶು ಪಂಡಿತ್ ಮಾಡಿದ ಯಡವಟ್ಟಿಗೆ ಸೂರಜ್ ಗಂಟಲಿಗೆ ಗುಂಡೇಟು ಬಿದ್ದಿದೆ. ಸದ್ಯ ಸೂರಜ್ ಗ್ವಾಲಿಯರ್‌ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಆಶು ಪಂಡಿತ್ ಹಾಗೂ ಖಾನಾ ಪಂಡಿತ್ ಮೇಲೆ 20ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ಕಳೆದ ವಾರವಷ್ಟೇ ಇದೇ ರೀತಿಯಾಗಿ ಮುಂಬೈನಲ್ಲಿ ಕಳ್ಳತನ ಮಾಡಿ ಅಲ್ಲಿಂದ ಎಸ್ಕೇಪ್ ಆಗಿದ್ದರು. ಇದೀಗ ನಾಲ್ವರ ಪೈಕಿ ಮೂವರನ್ನು ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.
ಎರಡು ಬೈಕ್‌ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳಲ್ಲಿ, ಇಬ್ಬರು ಇಳಿದು ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಅಂಗಡಿ ಮಾಲೀಕ ಅಪ್ಪುರಾಮ್ ಎಂಬವರ ಹೊಟ್ಟೆಗೆ ಗುಂಡು ತಗುಲಿದೆ. ಅಲ್ಲದೇ ಅಂತರಾಮ್ ಎಂಬವರ ಕಾಲಿಗೆ ಗುಂಡು ತಗುಲಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪ್ಪುರಾಮ್ ಸ್ಥಿತಿ ಗಂಭೀರವಾಗಿದೆ.
Brahmavar ಸ್ಕೂಟಿ ಢಿಕ್ಕಿ ಹೊಡೆದು ಸೈಕಲ್ ಸವಾರ ಸಾವು
ಬಾರಕೂರು ಹೇರಾಡಿ ಬಳಿ ಶನಿವಾರ ಬೆಳಗ್ಗೆ ಸ್ಕೂಟಿ ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಶೀನ ಮರಕಾಲ (76) ಮೃತಪಟ್ಟಿದ್ದಾರೆ.
ಅವರು ಬಾರಕೂರು ಕಡೆ ಬರುತ್ತಿದ್ದಾಗ ಸ್ಕೂಟಿ ಹಿಂದಿನಿಂದ ಢಿಕ್ಕಿ ಹೊಡೆಯತು. ತಲೆ, ಮುಖಕ್ಕೆ ತೀವ್ರ ಗಾಯಗಳಾಗಿ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಸ್ಕೂಟಿ ಸವಾರ ರಾಮಚಂದ್ರ ಸೋಮಯಾಜಿ ಅವರಿಗೂ ಗಾಯಗಳಾಗಿವೆ.