ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Virat Kohli: ಕಪ್ ಗೆದ್ದ ತಕ್ಷಣ ಸ್ಮೃತಿ ಮಂದಣ್ಣಾಗೆ ಕರೆ ಮಾಡಿದ ವಿರಾಟ್ ಕೊಹ್ಲಿ ; ವಿಡಿಯೋ ವೈರಲ್

Twitter
Facebook
LinkedIn
WhatsApp
Virat Kohli: ಕಪ್ ಗೆದ್ದ ತಕ್ಷಣ ಸ್ಮೃತಿ ಮಂದಣ್ಣಾಗೆ ಕರೆ ಮಾಡಿದ ವಿರಾಟ್ ಕೊಹ್ಲಿ ; ವಿಡಿಯೋ ವೈರಲ್

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ 2024 (WPL 2024) ರ ಫೈನಲ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವು (RCB Womens). ಡೆಲ್ಲಿ ಕ್ಯಾಪಿಟಲ್ಸ್ ಮಹಿಳೆಯರನ್ನು ಸೋಲಿಸಿ ಚೊಚ್ಚಲ ಪ್ರಶಸ್ತಿಯನ್ನು (WPL Trophy) ಗೆದ್ದುಕೊಂಡಿತು. ಮಾರ್ಚ್ 17 ರ ಭಾನುವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು.

ಟ್ರೋಫಿ ಗೆದ್ದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನಾ (Smriti Mandhana) ಅವರಿಗೆ ಆರ್​ಸಿಬಿ ಪುರುಷರ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವಿಡಿಯೊ ಕಾಲ್ ಮಾಡಿ ಶುಭಾಶಯ ಹೇಳಿದರು. ಈ ಕ್ಷಣದ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಪ್ರಶಸ್ತಿ ಗೆಲುವನ್ನು ಆಚರಿಸುತ್ತಿರುವ ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಮಹಿಳೆಯರ ತಂಡದ ಚಿತ್ರವನ್ನು ಪೋಸ್ಟ್ ಮಾಡಿ ಅದಕ್ಕೆ “ಸೂಪರ್ ವುಮೆನ್” ಎಂದು ಶೀರ್ಷಿಕೆ ನೀಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದೊಂದಿಗೆ 16 ವರ್ಷವಿರುವ ಕೊಹ್ಲಿಗಎ ಐಪಿಎಲ್ ಟ್ರೋಫಿ ಎತ್ತಲು ಇದುವರೆಗೂ ಸಾಧ್ಯವಾಗಲಿಲ್ಲ ಆದರೆ ಮಹಿಳಾ ತಂಡವು ಗೆದ್ದಿರುವುದನ್ನು ನೋಡಿ ಸ್ಟಾರ್ ಬ್ಯಾಟ್ಸ್ಮನ್ ಭಾವಪರವಶರಾದರು.

 

ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಅಭಿಮಾನಿಗಳ ಪಾಲಿಗೆ ಭಾನುವಾರ ಅತ್ಯಂತ ಸಂತೋಷದಾಯಕ ದಿನ. 17 ವರ್ಷಗಳ ನಿಯತ್ತಿಗೆ ಸಿಕ್ಕ ಗೌರವ. 2008ರಲ್ಲಿ ಪುರುಷರ ಟೂರ್ನಿ (ಐಪಿಎಲ್​) ಮೂಲಕ ಆರಂಭಗೊಂಡ ಫ್ರಾಂಚೈಸಿ ಮೊಟ್ಟ ಮೊದಲ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಈ ಫ್ರಾಂಚೈಸಿ ಪಾಲಿಗೆ ಐತಿಹಾಸಿಕ ದಿನವಾಗಿದೆ. ಮಹಿಳೆಯರ ಪ್ರೀಮಿಯರ್ ಲೀಗ್​ನ (WPL 2024) ಎರಡನೇ ಆವೃತ್ತಿಯಲ್ಲಿ ಸ್ಮೃತಿ ಮಂಧಾನಾ ನೇತೃತ್ವದ ತಂಡ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಆರ್​ಸಿಬಿ ಅಭಿಮಾನಿಗಳಿಗೆ ಸಮಾಧಾನ ಹೇಳಿದೆ. ಅದಕ್ಕೆ ಪೂರಕವಾಗಿ ವಿಶ್ವದ ಮೂಲೆಮೂಲೆಗಳಲ್ಲಿರುವ ಆರ್​ಸಿಬಿ ಅಭಿಮಾನಿಗಳು ಬೀದಿಗಿಳಿದು ಸಂಭ್ರಮಾಚರಣೆ ಮಾಡಿದ್ದಾರೆ.

ಮೊದಲ ಆವೃತ್ತಿಯ ಮಹಿಳೆಯರ ಪ್ರೀಮಿಯರ್ ಲೀಗ್​ನಲ್ಲಿ ಆರ್​ಸಿಬಿ ತಂಡದ ಪ್ಲೇ ಆಫ್​ ಹಂತಕ್ಕೆ ಏರಲು ವಿಫಲಗೊಂಡಿತ್ತು. ಆದರೆ, ಎರಡನೇ ಆವೃತ್ತಿಯಲ್ಲಿ ಚಾಂಪಿಯನ್​ಪಟ್ಟಕ್ಕೇರಿದೆ. ಈ ಮೂಲಕ ಹೆಣ್ಣು ಮಕ್ಕಳೇ ಸ್ಟ್ರಾಂಗ್ ಗುರು ಎಂಬ ಮಾತನ್ನು ಉಳಿಸಿಕೊಂಡಿದೆ. ಆರ್​ಸಿಬಿ ಫ್ರಾಂಚೈಸಿ ಐಪಿಎಲ್​ ಕ್ರಿಕೆಟ್​ ಟೂರ್ನಿಯಲ್ಲಿ ಅತ್ಯಂತ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ. ಅದರ ಪುರುಷರ ತಂಡಕ್ಕೆ ಇದುವರೆಗೆ ಒಂದು ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ಆದರೆ, ಮಹಿಳೆಯರ ತಂಡ ಗೆಲುವು ತಂದುಕೊಟ್ಟಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ