ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಮಾನವೀಯ ಘಟನೆ ; ಮಲಗಿದ್ದ ಕರುವಿನ ಮೇಲೆ ಕಾರು ಹತ್ತಿಸಿದ ಚಾಲಕ..!

Twitter
Facebook
LinkedIn
WhatsApp
ಅಮಾನವೀಯ ಘಟನೆ ; ಮಲಗಿದ್ದ ಕರುವಿನ ಮೇಲೆ ಕಾರು ಹತ್ತಿಸಿದ ಚಾಲಕ..!

ಬೆಂಗಳೂರಿನಲ್ಲಿ ರಸ್ತೆ ಬದಿಯಲ್ಲಿ ಮಲಗುವ ಮನುಷ್ಯರಿಗೆ ರಕ್ಷಣೆ ಇಲ್ಲ. ಇನ್ನು ಪ್ರಾಣಿಗಳ ಪರಿಸ್ಥಿತಿ ಹೇಳ ತೀರದಾಗಿದೆ. ಕೆಲವು ವಾಹನ ಚಾಲಕರ ಅಜಾಗರೂಕ ಚಾಲನೆಯಿಂದ ರಸ್ತೆ ಬದಿಯಲ್ಲಿ ಮಲಗುವ ಬೀದಿ ನಾಯಿಗಳು, ಹಸರುಗಳು, ಕರುಗಳು ಗಾಯಗೊಳ್ಳುವ ಪ್ರಕರಣಗಳು ಹೆಚ್ಚುತ್ತಿದೆ.

ಇಂತಹದ್ದೇ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಸ್ತೆ ಬದಿಯಲ್ಲಿ ಮಲಗಿದ್ದ ಕರುವಿನ ಮೇಲೆ ಕಾರು ಹರಿಸಿ ಚಾಲಕ ಪರಾರಿಯಾಗಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ನಡೆದಿದೆ. ಕಳೆದ ವಾರವೇ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಾಲಕ್ಷ್ಮೀ ಲೇಔಟ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ಕೆಂಪು ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಕರುವಿನ ಮೇಲೆ ಕಾರು ಹರಿಸಿದ್ದಾನೆ. ಅಲ್ಲದೇ ಒಂದಿಷ್ಟು ದೂರ ಚಕ್ರದ ಕೆಳಗೆ ಸಿಲುಕಿದ್ದ ಕರುವನ್ನು ಎಳೆದೊಯ್ದಿದ್ದಾನೆ. ಬಳಿಕ ಕಾರು ಚಕ್ರದಿಂದ ಕರು ಬೇರ್ಪಟ್ಟ ಬಳಿಕ, ಸೌಜನ್ಯಕ್ಕೂ ಕಾರು ನಿಲ್ಲಿಸಿ ನೋಡದೇ, ಅಲ್ಲಿಂದ ಪರಾರಿಯಾಗಿದ್ದಾನೆ. ಈ ದೃಶ್ಯ ಈಗ ಎಲ್ಲೆಡೆ ವೈರಲ್‌ ಆಗುತ್ತಿದೆ.

ಮಂಗಳೂರು: ಮಾದಕ ವಸ್ತು ಕೋಕೆನ್ ಪತ್ತೆ; ಆರೋಪಿಗಳು ಸಿಸಿಬಿ ಪೊಲೀಸರ ವಶಕ್ಕೆ

ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಾಗೂ 35 ಗ್ರಾಂ ಕೋಕೆನ್ ನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಅಂಬ್ಲ ಮೊಗರು, ಸಣ್ಣಮದಕ, ಕೊಳಂಜೆ ಹಿಟ್ಟು ಮನೆ ನಿವಾಸಿ ಸದಕತ್.ಯು ಯಾನೆ ಶಾನ್ ನವಾಜ್(31), ಹಾಗೂ ಮಂಗಳೂರಿನ ಅಂಬ್ಲ ಮೊಗರು, ಮದಕ, ಸೇನರಬೆಟ್ಟು ಮನೆ ನಿವಾಸಿ ಮಹಮ್ಮದ್ ಅಶ್ಫಕ್ ಯಾನೆ ಅಶ್ಫಾ(25) ಬಂಧಿತ ಆರೋಪಿಗಳು.

ಆರೋಪಿಗಳು ಮಂಗಳೂರು ನಗರಕ್ಕೆ ಗೋವಾದಿಂದ ನಿಷೇದಿತ ಮಾದಕ ವಸ್ತುವಾದ ಕೋಕೆನ್ ನ್ನು ಖರೀದಿಸಿ ಮಾರಾಟ ಮಾಡುತ್ತಿದ್ದರು. ಜೊತೆಗೆ ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಕೋಕೆನ್ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ

ದಾಳಿಯಲ್ಲಿ ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದ ಪೊಲೀಸರು, ಆರೋಪಿಗಳ ವಶದಲ್ಲಿದ್ದ ಹೊಂಡಾ ಅಕ್ಟಿವಾ ಸ್ಕೂಟರ್ ಅನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಜೊತೆಗೆ ಅದರಲ್ಲಿ ಸಾಗಾಟ ಮಾಡುತ್ತಿದ್ದ 2,72,000 ರೂ. ಮೌಲ್ಯದ 35 ಗ್ರಾಂ ನಿಷೇಧಿತ ಮಾದಕ ವಸ್ತು ಕೋಕೆನ್, 3 ಮೊಬೈಲ್ ಫೋನ್ ಗಳನ್ನು, ಡಿಜಿಟಲ್ ತೂಕ ಮಾಪಕ, ನಗದು ರೂ. 5,560ನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 4,00,000 ಆಗಿರುತ್ತದೆ ಎಂದು ತಿಳಿದುಬಂದಿದೆ. ಇನ್ನು ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಗೋವಾದಿಂದ ಕೋಕೆನ್ ಖರೀದಿಸಿ ಕರ್ನಾಟಕ, ಕೇರಳದ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ. ಇನ್ನು ಆರೋಪಿಗಳ ಪೈಕಿ ಸದಕತ್.ಯು ಎಂಬಾತನ ವಿರುದ್ದ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ಹಾಗೂ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ.

ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ನೇತೃತ್ವದ ತಂಡ ಕೋಕೆನ್ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ್ದು, ಈ ಮಾದಕ ವಸ್ತು ಕೋಕೆನ್ ಮಾರಾಟ ಪತ್ತೆ ಕಾರ್ಯಾಚರಣೆಯಲ್ಲಿ ಪಿಎಸ್ಐಯವರಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist