ಬೆಂಗಳೂರು ಪೂರ್ವ ವಿಭಾಗದ ಡಿಸಿಪಿಯಾಗಿ ಕುಲದೀಪ್ ಕುಮಾರ್ ಜೈನ್ ವರ್ಗಾವಣೆ..!

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬೆಂಗಳೂರು ಪೂರ್ವ ಸಂಚಾರ ವಿಭಾಗದ ಡಿಸಿಪಿಯಾಗಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ಬೆಂಗಳೂರು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕುಲದೀಪ್ ಕುಮಾರ್ ಜೈನ್ ಅವರು ಈ ಹಿಂದೆ ಮಂಗಳೂರು ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಡಿಸಿಪಿ ಕುಲದೀಪ್ ಕುಮಾರ್ ಜೈನ್ ಅವರು ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ವೇಳೆ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದರು. ಮಂಗಳೂರಿನಲ್ಲಿ ಡ್ರಗ್ ಜಾಲದ ವಿರುದ್ಧ ಸಮರ ಸಾರಿದ್ದರು.
ಮಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಕೇವಲ ಐದು ತಿಂಗಳಲ್ಲಿ ಮಂಗಳೂರನ್ನು ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡುವ ಗುರಿ ಹೊಂದಿದ್ದರು. ಹಾಗೆ ಮಟ್ಕಾ, ಜೂಜಿಗೆ ಕಡಿವಾಣ ಹಾಕಿದ್ದರು. ಮಟ್ಕಾ, ಜೂಜು ಅಡ್ಡೆಗಳ ಮೇಲೆ ನಿರಂತರ ದಾಳಿ ನಡೆಸಿದ್ದರು. ಡ್ರಗ್ಸ್, ಮಟ್ಕಾ ಮಾಫಿಯಾದ ಹಿಂದೆ ಬಿದ್ದಿದ್ದರು. ಕುಲ್ ದೀಪ್ ಕುಮಾರ್ ಜೈನ್ ಅವರು ದಕ್ಷ ಅಧಿಕಾರಿ ಎಂದೇ ಗುರುತಿಸಿ ಕೊಂಡಿದ್ದರು.
ನಾಲ್ಕು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರದ ಆದೇಶ
ಬೆಂಗಳೂರು(ಮಾ.15): ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನ ನಾಲ್ಕು ಮಂದಿ ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಮೇಶ್ ಕುಮಾರ್ ಎಡಿಜಿಪಿ .ಕೆಎಸ್‌ಆರ್‌ಪಿ, ಸೀಮಂತ್ ಕುಮಾರ್ ಸಿಂಗ್ ಎಡಿಜಿಪಿ. ಬಿಎಂಟಿಎಫ್, ಹರಿಸೇಖರನ್, ಎಡಿಜಿಪಿ ಕ್ರೈಂ ಅಂಡ್ ಟೆಕ್ನಿಕಲ್ ಸರ್ವೀಸ್ ಬೆಂಗಳೂರು, ಯಡಾ ಮಾರ್ಟಿನ್ ಪೊಲೀಸ್ ಕಮಿಷನರ್ ಬೆಳಗಾವಿ ನಗರ ವರ್ಗಾವಣೆಗೊಂದ ಐಪಿಎಸ್ ಅಧಿಕಾರಿಗಳಾಗಿದ್ದಾರೆ.