ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ ಸಾದಾರಣ ಮಳೆ ಸಾಧ್ಯತೆ..!

Twitter
Facebook
LinkedIn
WhatsApp
Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ ಸಾದಾರಣ ಮಳೆ ಸಾಧ್ಯತೆ..!

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕೊಪ್ಪಳದಲ್ಲಿ 38.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 17.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹಳಷ್ಟು ಕಡಿಮೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ, ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ.

ಎಚ್​ಎಎಲ್​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗದೆ.

ಬಾಗಲಕೋಟೆಯಲ್ಲಿ 37.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹಾಸನದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಡಿಕೇರಿಯಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ