ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಮೂಡಿಸುತ್ತಿರುವ ಅಭ್ಯರ್ಥಿ ಬ್ರಿಜೇಶ್ ಚೌಟ

Twitter
Facebook
LinkedIn
WhatsApp
ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಮೂಡಿಸುತ್ತಿರುವ ಅಭ್ಯರ್ಥಿ ಬ್ರಿಜೇಶ್ ಚೌಟ

ಮಂಗಳೂರು: ಬಿಜೆಪಿಯ ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರಲ್ಲಿ, ಯುವಕರಲ್ಲಿ ಹೊಸ ಚೈತನ್ಯವನ್ನು ಮೂಡಿಸಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಚೌಟ ಪ್ರಚಾರಕ್ಕೆ ತೆರಳಿದ ಸಂದರ್ಭದಲ್ಲಿ ಬೃಹತ್ ಸಂಖ್ಯೆಯಲ್ಲಿ ಯುವಕರು ಉತ್ತಮ ಪ್ರತಿಕ್ರಿಯೆಯನ್ನು ನೀಡುತ್ತಿರುವುದು ದಕ್ಷಿಣ ಕನ್ನಡ ಬಿಜೆಪಿಗೆ ಹೊಸ ಬೆಳವಣಿಗೆಯಾಗಿದೆ ಎಂದು ತಿಳಿದುಬಂದಿದೆ.

ದೇಶದ ಅತ್ಯುನ್ನತ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರುವ ಚೌಟ ಪುತ್ತೂರು, ಸುಳ್ಯ ಭಾಗದಲ್ಲಿ ಬಹುತೇಕ ಕಾರ್ಯಕರ್ತರ ಮನೆಗಳಿಗೆ ಹಾಗೂ ದೇವಸ್ಥಾನಗಳಿಗೆ ಭೇಟಿ ನೀಡಿರುವುದು, ಅಲ್ಲಿ ಕಾರ್ಯಕರ್ತರು ಸ್ಪಂದಿಸಿರುವುದು ಬಿಜೆಪಿಗೆ ಇನ್ನಷ್ಟು ಉತ್ಸಾಹವನ್ನು ಇಮ್ಮಡಿಗೊಳಿಸಿದೆ ಎಂದು ಬಿಜೆಪಿಯ ಹಿರಿಯ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.

ಕ್ಯಾಪ್ಟನ್ ಬ್ರಿಜೇಶ್ ಚೌಟರ ಹಿನ್ನೆಲೆ ಏನು?

ಕಾಲೇಜು ದಿನಗಳಲ್ಲಿಯೇ ಎನ್‌ಸಿಸಿ(NCC)ಯಲ್ಲಿ ಹೆಸರು ಮಾಡಿ ಸೇನೆಗೆ ಸೇರ್ಪಡೆಯಾಗಿದ್ದರು. ಮಂಗಳೂರಿನ ಮಿಲಾಗ್ರಿಸ್‌ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ಪಿಯು(PUC) ಮತ್ತು ಬಿಎಸ್ಸಿ(BSC) ಪದವಿ ಪೂರೈಸಿದ್ದ ಅವರು ಬಳಿಕ ಮಧ್ಯಪ್ರದೇಶದ ಇಂದೋರ್‌ ಐಐಎಂ(IIM)ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಪದವಿಯಲ್ಲಿದ್ದಾಗ ಎನ್‌ಸಿಸಿಯಲ್ಲಿ ಮಂಗಳೂರು ವಿ.ವಿ.ಯಲ್ಲಿ “ಬೆಸ್ಟ್‌ ಕೆಡೆಟ್‌’ ಎಂದು ಗುರುತಿಸಿದ್ದರು. ದಿಲ್ಲಿ(Delhi) ರಿಪಬ್ಲಿಕ್‌ ಪರೇಡ್‌ನ‌ಲ್ಲಿ ಎನ್‌ಸಿಸಿ(NCC) ಕೆಡೆಟ್‌ ಆಗಿ ಪಾಲ್ಗೊಂಡಿದ್ದರು.

UPSC ಆಯೋಜಿಸುವ ಕಂಬೈನ್‌ ಡಿಫೆನ್ಸ್‌ ಸರ್ವಿಸಸ್‌ ಎಕ್ಸಾಮಿನೇಷನ್‌ (CDSE) ಪರೀಕ್ಷೆ ಹಾಗೂ SSB ಸಂದರ್ಶನದಲ್ಲಿ ತೇರ್ಗಡೆಗೊಂಡು ಚೆನ್ನೈಯಲ್ಲಿರುವ ಆಫೀಸರ್ಸ್‌ ಟ್ರೈನಿಂಗ್‌ ಅಕಾಡೆಮಿಯಲ್ಲಿ ತರಬೇತಿ ಪಡೆದು ಭೂ ಸೇನೆಯ ಗೋರ್ಖಾ ರೈಫಲ್ಸ್‌ನ 7ನೇ ಬೆಟಾಲಿಯನ್‌ನಲ್ಲಿ ಅಧಿಕಾರಿಯಾಗಿದ್ದರು. ಅಸ್ಸಾಂ ಮತ್ತು ಮಣಿಪುರ ಸೇರಿದಂತೆ ದೇಶದ ಹಲವು ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

2011ರಲ್ಲಿ ಸೇನೆಯಿಂದ ಸ್ವಯಂ ನಿವೃತ್ತಿ ಪಡೆದು ಊರಿಗೆ ಮರಳಿದ್ದ ಚೌಟ ಆರೆಸ್ಸೆಸ್‌(RSS) ಮತ್ತು ಬಿಜೆಪಿ(BJP)ಯಲ್ಲಿ ಗುರುತಿಸಿಕೊಂಡಿದ್ದರು. 2013ರಲ್ಲಿ ಯುವ ಮೋರ್ಚಾದ ದ.ಕ. ಜಿಲ್ಲಾ ಪ್ರ. ಕಾರ್ಯದರ್ಶಿ, 2016-19ರಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, ಆನಂತರ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಪ್ರಭಾರಿಯಾಗಿ ಕೆಲಸ ಮಾಡಿದ್ದರು. 

ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಬೇಕೆಂದು ನಿಶ್ಚಯಿಸಿ, ಯುವ ಸ್ನೇಹಿತರ ಬಳಗವನ್ನು ಕಟ್ಟಿಕೊಂಡು ಸತತ ಏಳು ವರ್ಷಗಳಿಂದ ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಯಶಸ್ವಿಯಾಗಿ ಕಂಬಳ ಆಯೋಜಿಸಿದ್ದರು. ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಂಟ ಸಮುದಾಯದ ಪ್ರಮುಖ ಗುತ್ತಿನ ಮನೆಗೆ ಸೇರಿದ್ದರೂ ಅವಿವಾಹಿತರಾಗಿಯೇ ಇದ್ದು ತನ್ನ ಸಂಪೂರ್ಣ ಜೀವನವನ್ನು ದೇಶ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ.ಹೀಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ರಾಜಕೀಯಕ್ಕೆ ಆಗಮಿಸಿ, ದಕ್ಷಿಣ ಕನ್ನಡದಲ್ಲಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist