ಮಂಗಳೂರು : ಹುಡುಗಿ ವಿಚಾರಕ್ಕೆ ಯುವಕರಿಬ್ಬರ ಹೊಡೆದಾಟ; ಓರ್ವನಿಗೆ ಗಾಯ!
ಮಂಗಳೂರು: ನಗರದ ಕಾಲೇಜಿನ ವಿದ್ಯಾರ್ಥಿಗಳಿಬ್ಬರು ಹುಡುಗಿ ವಿಚಾರದಲ್ಲಿ ಹೊಡೆದಾಡಿದ್ದು, ಒಬ್ಬ ಯುವಕನಿಗೆ ಮುಖದಲ್ಲಿ ರಕ್ತ ಒಸರುವ ರೀತಿ ಹೊಡೆಯಲಾಗಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ.
ನೀರುಮಾರ್ಗ ಬಳಿಯ ಪಾಲ್ದನೆಯಲ್ಲಿ ಘಟನೆ ನಡೆದಿದೆ. ನಗರದ ಬಜ್ಜೋಡಿ ನಿವಾಸಿ ಯುವಕ ತಾನು ಪ್ರೀತಿಸುತ್ತಿದ್ದ ಹುಡುಗಿಯಲ್ಲಿ ಪದೇ ಪದೇ ಹಣ ಕೇಳಿ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ಯುವತಿ ತನ್ನ ನೀರುಮಾರ್ಗದ ಗೆಳೆಯನಿಗೆ ವಿಷಯ ತಿಳಿಸಿದ್ದಳು. ಇದನ್ನರಿತ ಯುವಕ ಬಜ್ಜೋಡಿಯಿಂದ ಐದಾರು ಮಂದಿ ಯುವಕರ ಜೊತೆಗೆ ಕಾರಿನಲ್ಲಿ ನೀರುಮಾರ್ಗಕ್ಕೆ ತೆರಳಿ, ಆಕೆಯ ಗೆಳೆಯನನ್ನು ಪ್ರಶ್ನೆ ಮಾಡಿದ್ದಾನೆ. ಈ ವೇಳೆ ಅವರ ನಡುವೆ ಹೊಡೆದಾಟ ನಡೆದಿದ್ದು, ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹುಡುಗರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಒಬ್ಬ ಯುವಕ ಕಳೆದ ವರ್ಷ ಡಿಗ್ರಿ ಪೂರೈಸಿದ್ದರೆ, ಹಲ್ಲೆ ನಡೆಸಿದ ಯುವಕ ಈ ಸಲ ಅಂತಿಮ ಪದವಿಯಲ್ಲಿದ್ದಾನೆ ಎಂದು ತಿಳಿದು ಬಂದಿದೆ. ಎರಡೂ ಕಡೆಯ ಕುಟುಂಬಸ್ಥರು ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥ ಮಾಡಿದ್ದಾರೆ. ಪೊಲೀಸರು ಮುಚ್ಚಳಿಕೆ ಬರೆಸಿ ಕಳಿಸಿಕೊಟ್ಟಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ- ಓರ್ವ ಮೃತ್ಯು, ನಾಲ್ವರಿಗೆ ಗಾಯ
ಕಾರ್ಕಳ: ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಮಾಳ ಗ್ರಾಮದ ಕಡಾರಿ ಕ್ರಾಸ್ನಲ್ಲಿ ನಡೆದಿದೆ.
ಹೆಜಮಾಡಿಯಿಂದ ಮಾಳದೆಡೆಗೆ ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಕಡಾರಿ ಕ್ರಾಸ್ನಲ್ಲಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.
ಅಪ್ರಾಪ್ತನನ್ನು ಥಳಿಸಿದ ‘ಚಾರ್ಲಿ’ಗೆ ಜೈಲು ತೋರಿಸಿದ ನ್ಯಾಯಾಲಯ..!
ಪುತ್ತೂರು: ಅಪ್ರಾಪ್ತ ಬಾಲಕನನ್ನು ಥಳಿಸಿದ ಆರೋಪದಲ್ಲಿ ಆರೋಪಿಗೆ ದಂಡದೊಂದಿಗೆ ಜೈಲು ತೋರಿಸಿ ಪುತ್ತೂರು ನ್ಯಾಯಾಲಯ ತೀರ್ಪು ನೀಡಿದೆ.
2018ರಲ್ಲಿ ಬಂಟ್ವಾಳ ತಾಲೂಕಿನ ಪೆರ್ನೆ ಬಲತೋಟ ಆಮ್ಕೆ ಎಂಬಲ್ಲಿ ಚಾರ್ಲಿ ಮೇನೇಜಸ್ ಎಂಬವರು ಅಪ್ರಾಪ್ತ ಬಾಲಕನನ್ನು ಥಳಿಸಿ ಗಾಯಗೊಳಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಾರ್ಲಿಗೆ ಒಂದೂವರೆ ವರ್ಷ ಜೈಲು ಶಿಕ್ಷೆ ಮತ್ತು 3 ಸಾವಿರ ರೂಪಾಯಿ ದಂಡ ವಿಧಿಸಿ ಪುತ್ತೂರು ನ್ಯಾಯಾಲಯ ಆದೇಶಿಸಿದೆ. ಪುತ್ತೂರು ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಚ್ ಆರ್ ಶಿವಣ್ಣ ಮಾ.21ರಂದು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸರಕಾರದ ಪರವಾಗಿ ಎಪಿಪಿ ಕವಿತಾ ವಾದ ಮಂಡಿಸಿದ್ದರು.