Weather Report: ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿದೆ; ಇಲ್ಲಿದೆ ವರದಿ
ಬೆಂಗಳೂರು: ಸದ್ಯಕ್ಕೆ ವಸಂತ ಋತುವಿನಲ್ಲಿ ಎಲ್ಲೆಲ್ಲೂ ಮರ ಗಿಡ ಚಿಗುರಿ ಕಂಗೊಳಿಸುತ್ತದೆ. ಹೂಗಳು ಅರಳುವ ಸುವಾಸನೆ, ತಂಪಾದ ಗಾಳಿ ಮನಸ್ಸಿಗೆ ಹಿತ ನೀಡುತ್ತಿದೆ. ಜೊತೆಗೆ ಅಷ್ಟೇ ಸೆಖೆ ಕೂಡಾ ಆರಂಭವಾಗಿದೆ. ಜನರು ಬೇಸಿಗೆಗೆ ಅವಶ್ಯಕತೆ ಇರುವ ತಯಾರಿ ನಡೆಸುತ್ತಿದ್ದಾರೆ. ಮನೆಗೆ ಏರ್ ಕೂಲರ್, ಫ್ಯಾನ್ ಕೊಂಡು ತರುತ್ತಿದ್ದಾರೆ. ಕೆಲವೆಡೆ ಬೆಳಗಿನ ಜಾವ ಇನ್ನೂ ಚಳಿ ಇದ್ದರೂ. ಬೆಳಗ್ಗೆ 8 ಗಂಟೆ ನಂತರ ಬಿಸಿಲಿನ ಕಾವು ಹೆಚ್ಚಾಗುತ್ತಿದೆ. ಈ ನಡುವೆ ಹವಾಮಾನ ಪ್ರತಿದಿನ ಬದಲಾಗುತ್ತಿದೆ.
ಮಾರ್ಚ್ 22, ಶುಕ್ರವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಯಾವುದೇ ಮುಖ್ಯ ಮಳೆಯ ಪ್ರಮಾಣ ವರದಿ ಆಗಿಲ್ಲ. ಕರಾವಳಿಯ ಹಲವು ಕಡೆಗಳಲ್ಲಿ ಉಷ್ಣಾಂಶ ಅತ್ಯಂತ ಗಮನಾರ್ಹವಾಗಿ ಏರಿಕೆ ಕಂಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿಯ ಬಹುತೇಕ ಕಡೆಗಳಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಮನಾರ್ಹವಾಗಿ ಇಳಿಕೆ ಆಗಿದೆ. ರಾಜ್ಯದ ಸಮತಟ್ಟಾದ ಪ್ರದೆೇಶಗಳಲ್ಲಿಅತಿ ಗರಿಷ್ಠಉಷ್ಣಾಂಶ 37.6 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದ್ದರೆ ರಾಜ್ಯದ ಸಮತಟ್ಟಾದ ಪ್ರದೆೇಶಗಳಲ್ಲಿ ಅತಿ ಕನಿಷ್ಠಉಷ್ಣಾಂಶ 19.5 ಡಿಗ್ರಿ ಸೆಲ್ಸಿಯಸ್ ಬೀದರ್‌ನಲ್ಲಿ ದಾಖಲಾಗಿದೆ.
ಈತನ್ಮಧ್ಯೆ ಭಾರತೀಯ ಹವಾಮಾನ ಇಲಾಖೆಯು (IMD) ಇಂದಿನಿಂದ ಮಾರ್ಚ್ 26 ರವರೆಗೆ ದೇಶದ ಹಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ಮಾರ್ಚ್ 23 ಮತ್ತು 25 ರಂದು ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಆ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ಪಂಜಾಬ್, ಗಂಗಾನದಿ ಪಶ್ಚಿಮ ಬಂಗಾಳ, ಒಡಿಶಾ, ದಕ್ಷಿಣ ತಮಿಳುನಾಡು, ಕೇರಳ, ಕರಾವಳಿ ಕರ್ನಾಟಕ ಮತ್ತು ಲಕ್ಷದ್ವೀಪಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಸೋಮವಾರ ಕೂಡಾ ಇದೇ ವಾತಾವರಣ ಮುಂದುವರೆಯಲಿದೆ. ಮುಂದಿನ 24 ಗಂಟೆಗಳಲ್ಲಿ ಗುಡುಗು ಮುನ್ನೆಚರಿಕೆ, ಭಾರೀ ಮಳೆಯ ಮುನ್ನೆಚರಿಕೆ ಇಲ್ಲ. ಭಾರತೀಯ ಹವಾಮಾನ ಇಲಾಖೆಯು ಮೀನುಗಾರರಿಗೂ ಯಾವುದೇ ಮುನ್ನೆಚರಿಕೆ ನೀಡಿಲ್ಲ.
ಮುಂದಿನ 24 ಗಂಟೆಗಳು ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವದ ವಾತಾವರಣವಿರುತ್ತದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಲಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಇತ್ತೀಚಿನ ದಿನಗಳಲ್ಲಿ, ದೇಶದ ಬಹುತೇಕ ಭಾಗಗಳಲ್ಲಿ ಹವಾಮಾನ ವೈಪರೀತ್ಯದಿಂದ ರೈತರು ಹಾಗೂ ಜನಸಾಮಾನ್ಯರ ಸಂಕಷ್ಟ ಹೆಚ್ಚಿದೆ. ಅಕಾಲಿಕ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.