ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು : ಮಾರ್ಚ್ 31ರೊಳಗೆ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಪೊಲೀಸ್ ಆಯುಕ್ತರ ಆದೇಶ ; ಇಲ್ಲಿದೆ ಹೆಚ್ಚಿನ ಮಾಹಿತಿ

Twitter
Facebook
LinkedIn
WhatsApp
ಮಂಗಳೂರು : ಮಾರ್ಚ್ 31ರೊಳಗೆ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಪೊಲೀಸ್ ಆಯುಕ್ತರ ಆದೇಶ ; ಇಲ್ಲಿದೆ ಹೆಚ್ಚಿನ ಮಾಹಿತಿ

ಮಂಗಳೂರು: ಕಾಡುಪ್ರಾಣಿಗಳನ್ನು ಹೆದರಿಸಲು ಸಹಿತ ಹಲವು ವಿಚಾರಗಳಿಗೆ ಸಂಬಂಧಿಸಿ ಕೋವಿ ಸಹಿತ ಶಸ್ತ್ರಾಸ್ತ್ರಗಳ ಪರವಾನಗಿ ಪಡೆದುಕೊಳ್ಳುವ ಸಂಪ್ರದಾಯ ಕಾಡಿನ ಹತ್ತಿರ ವಾಸಿಸುವ ಕೃಷಿಕರಿಗಿದೆ. ಪ್ರತಿ ಚುನಾವಣೆ ಬಂದಾಗ ಇದನ್ನು ಠೇವಣಿ ಇಡುವ ವಿಚಾರದಲ್ಲಿ ಸಂಘರ್ಷ ಏರ್ಪಡುತ್ತದೆ. ಈ ಬಾರಿಯೂ ಗೊಂದಲಗಳು ಏರ್ಪಟ್ಟ ಹಿನ್ನೆಲೆ, ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ಶಸ್ತ್ರಾಸ್ತ್ರಗಳನ್ನು ಕೇವಲ ರೈತರು ಬಳಸುತ್ತಿಲ್ಲ. ಹೀಗಾಗಿ ಅನ್ಯಸಮಸ್ಯೆಗಳು ಉದ್ಭವ ಆಗಬಾರದು ಎಂಬ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ.

 

2024ರ ಏ.26 ರಂದು ಲೋಕಸಭಾ ಚುನಾವಣೆ (Lok Sabha Election 2024) ನಡೆಯಲಿದೆ. ಈ ಹಿನ್ನಲೆಯಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಗೆ ಒಳಪಡುವ ಜಿಲ್ಲೆಯ ಆಯುಧ ಪರವಾನಿಗೆ ಹೊಂದಿರುವ ಎಲ್ಲಾ ರೀತಿಯ ಶಸ್ತ್ರಾಸ್ತ್ರಗಳನ್ನು 2024ರ ಏ.1 ರೊಳಗೆ ಠೇವಣಿ (Arms Deposit) ಇರಿಸಲು ಮಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಅನುಪಮ್ ಅಗ್ರವಾಲ್ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಪ್ರಸಕ್ತ ಕಾನೂನು ಸುವ್ಯವಸ್ಥೆ ಸಾರ್ವಜನಿಕ ಶಾಂತಿ ಸುರಕ್ಷತೆಯ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಕಮೀಷನರೇಟ್ ವ್ಯಾಪ್ತಿ ಗೆ ಒಳಪಡುವ ಎಲ್ಲಾ ಬೆಳೆ ರಕ್ಷಣೆಗಾಗಿ ಮತ್ತು ಆತ್ಮ ರಕ್ಷಣೆಗಾಗಿ ಮಂಜೂರು ಮಾಡಲಾಗಿರುವ ಶಸ್ತ್ರಾಸ್ತ್ರ ಪರವಾನಿಗೆಗಳನ್ನು ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಚುನಾವಣಾ ಅವಧಿಯಲ್ಲಿ ಠೇವಣಿಯಲ್ಲಿರಿಸಲು ಆದೇಶ ಹೊರಡಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತರ ಆದೇಶ ಪ್ರಮುಖ ಅಂಶಗಳು ಇಲ್ಲಿವೆ

  • ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಒಳವಡುವ ಆತ್ಮ ರಕ್ಷಣೆ ಹಾಗೂ ಕೃಷಿ ರಕ್ಷಣೆಯ ಎಲ್ಲಾ , 18-03-2024 800 13-06-2024 ರ ವರೆಗೆ ಶಸ್ತ್ರಾಸ್ತ್ರ ಕಾಯ್ದೆ 1959 ಕಲಂ 17(3)(ಬಿ) ರನ್ವಯ ಹಾಗೂ ಉಲ್ಲೇಖ (4) ರ ನಿಷೇಧ ಆದೇಶದಂತೆ ತಾತ್ಕಾಲಿಕ ಅವಧಿಗೆ ಅಮಾನತ್ತಿನಲ್ಲಿರಿಸಿ ಆದೇಶಿಸಲಾಗಿದೆ.
  • ಆತ್ಮ ರಕ್ಷಣೆ ಹಾಗೂ ಕೃಷಿ ರಕ್ಷಣೆಯ ಸಲುವಾಗಿ ಪಡೆದ ಪರವಾನಿಗೆಯಲ್ಲಿರುವ ಎಲ್ಲಾ ಆಯುಧಗಳನ್ನು ದಿನಾಂಕ. 31-03-2024 ರ ಒಳಗೆ ಪರವಾನಿಗೆದಾರರು ಅಧಿಕೃತ ಆಯುಧ ವಿತರಕರಲ್ಲಿ ಅಥವಾ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಠೇವಣಿ ಇರಿಸುವಂತೆ ಆದೇಶಿಸಲಾಗಿದೆ.
  • ನ್ಯಾಷನಲ್ ರೈಫಲ್ ಅಸೋಸಿಯೇಷನ್ ಇದರ ಸದಸ್ಯರಾಗಿದ್ದು ಕ್ರೀಡಾ ಉದ್ದೇಶಕ್ಕೆ ಪರವಾನಿಗೆ ಹೊಂದಿರುವವರಿಗೆ ಈ ಆದೇಶ ಅನ್ವಯಿಸುವುದಿಲ್ಲ.
  • ಪರವಾನಗಿದಾರರಿಗೆ ಆತ್ಮ ರಕ್ಷಣೆ / ಕೃಷಿ ರಕ್ಷಣೆಗಾಗಿ ಆಯುಧವು ತೀರಾ ಅವಶ್ಯವಿದ್ದು ಪರವಾನಿಗೆ ಅಮಾನತ್ತಿನಿಂದ ವಿನಾಯತಿ ಬೇಕಾದಲ್ಲಿ ದಿನಾಂಕ: 28-03-2024 ರ ಒಳಗಾಗಿ ನೈಜಿ ದಾಖಲಾತಿಗಳೊಂದಿಗೆ ಈ ಕಛೇರಿಗೆ ಅರ್ಜಿಯನ್ನು ಸಲ್ಲಿಸಿದಲ್ಲಿ ಪರಿಶೀಲಿಸಿ ನಿರ್ಣಯ ಕೈಗೊಳ್ಳಲಾಗುವುದು ನಿಗದಿತ ಅವಧಿಯ ನಂತರ ಸ್ವೀಕೃತಗೊಳ್ಳುವ ಅರ್ಜಿಯನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ
  • ಅಮಾನತ್ತಿನ ಅವಧಿ ಮುಗಿದ ತಕ್ಷಣ ದಿನಾಂಕ: 13-06-2024 ಅಯುಧ ಠೇವಣಿ ಪಡೆದ ಅಧಿಕಾರಿಗಳು, ವಿತರಕರು ಅಂತಹ ಆಯುಧಗಳನ್ನು ಠೇವಣೆದಾರರಿಗೆ ಹಿಂದಿರುಗಿಸುವಂತೆಯೂ ಪರವಾನಿಗೆದಾರರು ತಮ್ಮ ಆಯುಧಗಳನ್ನು ಮರು ಪಡೆದುಕೊಳ್ಳಬಹುದಾಗಿಯೂ ಆದೇಶಿಸಲಾಗಿದೆ.
  • ಈ ಆದೇಶದನ್ವಯ ನಿಗಧಿತ ಅವಧಿಯಲ್ಲಿ ಅಯುಧವನ್ನು ಠೇವಣಿ ಇರಿಸದೇ ಇದ್ದಲ್ಲಿ ಸಂಬಂಧಪಟ್ಟ ಆಯುಧ ಪರವಾನಗಿದಾರರ ವಿರುದ್ಧ ಕಲಂ 188 ಐಪಿಸಿ ರಂತೆ ಠಾಣಾಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಅನುಪಮ್ ಅಗ್ರವಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: ಹಿರಿಯ, ವಿಕಲಚೇತನ ಮತದಾರರು ಹಕ್ಕು ಚಲಾಯಿಸಲು ಮತಗಟ್ಟೆಗಳಲ್ಲಿಯೇ ಅಗತ್ಯ ಸೌಲಭ್ಯ

ಜಾಪ್ರಭುತ್ವದ ಹಬ್ಬವಾದ ಚುನಾವಣೆಗಳಲ್ಲಿ ಅರ್ಹ ಮತದಾರರೆಲ್ಲರೂ ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಪ್ರತಿಬಾರಿ ವಿವಿಧ ರೀತಿಯ ಸೌಕರ್ಯ ಕಲ್ಪಿಸಿಕೊಡುವ ಚುನಾವಣಾ ಆಯೋಗವು ಈ ಬಾರಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ಶೇ.40ಕ್ಕೂ ಹೆಚ್ಚು ಅಂಗವಿಕಲತೆ ಹೊಂದಿರುವ ವಿಕಲಚೇತನರಿಗೆ ಅಂಚೆ ಮತದ ಮೂಲಕ ಮನೆಯಿಂದಲೇ ಮತ ಚಲಾಯಿಸುವ ಅವಕಾಶ ಕಲ್ಪಿಸಿಕೊಟ್ಟಿದೆ.

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ಮತದಾರರ ಪಟ್ಟಿಯಲ್ಲಿ ಗುರುತಿಸಲಾದ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕ ಮತದಾರರು ಹಾಗೂ ಶೇ.40ಕ್ಕೂ ಹೆಚ್ಚು ವಿಕಲತೆ ಹೊಂದಿರುವ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಪ್ರಮಾಣ ಪತ್ರ ಹೊಂದಿರುವ ವಿಕಲಚೇತನ ಮತದಾರರ ಮನೆಗಳಿಗೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‍ಓ) ಭೇಟಿ ನೀಡಿ ಅವರ ಮನೆಯಲ್ಲಿಯೇ ಮತದಾನ ಮಾಡಲು ಅಗತ್ಯವಿರುವ ಅಂಚೆ ಮತದಾನದ ಸೌಲಭ್ಯ ನೀಡುವ 12-ಡಿ ನಮೂನೆ ನೀಡುವರು. ಅದನ್ನು ಪಡೆದು, ಭರ್ತಿ ಮಾಡಿ ಬೂತ್ ಮಟ್ಟದ ಅಧಿಕಾರಿಗಳಿಗೆ ಸಲ್ಲಿಸಬೇಕು. ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿದ ಮತದಾರರ ಮನೆಗೆ ಬಿಎಲ್‍ಓಗಳು ಮೊದಲ ಸಲ ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರು ಲಭ್ಯವಿಲ್ಲದಿದ್ದಲ್ಲಿ ಪುನಃ ಎರಡನೇ ಬಾರಿ ಭೇಟಿ ನೀಡುವರು, ಈ ಮೂಲಕ ಅವರಿಗೆ ಮತದಾನದ ಸೌಲಭ್ಯ ಒದಗಿಸಲಾಗುವುದು. ಆದರೆ ಎರಡೂ ಬಾರಿಯ ಭೇಟಿ ಸಂದರ್ಭದಲ್ಲಿ ಮತದಾರರು ಲಭ್ಯವಾಗದಿದ್ದರೆ ಅಂತಹ ಮತದಾರರು ಮತದಾನದ ಸೌಲಭ್ಯ ಕಳೆದುಕೊಳ್ಳುವರು. ಅಂಚೆ ಮತದಾನ ಮಾಡಲಿಚ್ಚಿಸುವವರು ಬಿಎಲ್‍ಒಗಳಿಗೆ 12-ಡಿ ದೃಢೀಕರಣ ಪತ್ರವನ್ನು ಸಲ್ಲಿಸಬೇಕು.

ಮತಗಟ್ಟೆಯಲ್ಲಿ ಇವಿಎಂ ಯಂತ್ರದ ಮೂಲಕ ಮತದಾನ ನಡೆದರೆ, ಮನೆಮನೆ ಭೇಟಿಯ ಅಂಚೆ ಮತದಾನವು ಮತಗಟ್ಟೆಯಲ್ಲಿ ನಡೆಯುವ ಮತದಾನ ಪ್ರಕ್ರಿಯೆಯಂತೆ ಸಂಪೂರ್ಣ ಮನೆಯಲ್ಲೇ ನಡೆಯಲಿದ್ದು, ಅಂಚೆ ಮತಪತ್ರದ ಮೂಲಕ ನಡೆಯುತ್ತದೆ. ಇದಕ್ಕಾಗಿ 12-ಡಿ ನಮೂನೆಯಲ್ಲಿ ಅರ್ಜಿ ಸಲ್ಲಿಸಿದ ಮತದಾರರಿಗೆ ಅವರ ಮನೆಯಲ್ಲಿಯೇ ಚುನಾವಣಾ ಪ್ರಕ್ರಿಯೆಯನ್ನು ನಿಗಧಿಪಡಿಸಿದ ಚುನಾವಣೆಯ ದಿನಾಂಕದ ಮುನ್ನವೇ ನಡೆಯಲಿದೆ.

ಚುನಾವಣಾ ಆಯೋಗವು 85 ವರ್ಷ ಮೇಲ್ಪಟ್ಟ ನಾಗರೀಕರು ಹಾಗೂ ವಿಕಲಚೇತನ (40%ಕ್ಕೂ ಹೆಚ್ಚು ವಿಕಲತೆ) ಮತದಾರರಿಗೆ ಮನೆಯಲ್ಲಿಯೇ ಅಂಚೆ ಮತದಾನ ಮಾಡುವ ಸೌಲಭ್ಯ ನೀಡಿದೆ, ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮೂಲಕ ಚುನಾವಣಾ ಹಬ್ಬದಲ್ಲಿ ಭಾಗವಹಿಸಬಹುದು.

ಅದಕ್ಕಾಗಿ ಹಿರಿಯ ನಾಗರೀಕರು ಹಾಗೂ ವಿಕಲಚೇತನ ಮತದಾರರಿಗೆ ಮತಗಟ್ಟೆಯಲ್ಲಿಯೇ ಬಂದು ಮತ ಚಲಾಯಿಸಲು ಅಗ್ಯವಿರುವ ವೀಲ್ ಚೇರ್, ರ್ಯಾಂಪ್, ಮತಗಟ್ಟೆ ಸಹಾಯಕರು ಸೇರಿದಂತೆ ಇತರೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿರುತ್ತದೆ. ಒಂದು ಬಾರಿ ಮನೆಯಿಂದಲೇ ಮತ ಚಲಾಯಿಸುವ ಆಯ್ಕೆ ಮಾಡಿಕೊಂಡಲ್ಲಿ, ಅವರಿಗೆ ಮತಗಟ್ಟೆಗೆ ಬಂದು ಮತ ಚಲಾಯಿಸಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ