ಗುರುವಾರ, ಮೇ 9, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಸರಗೋಡು: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆ.!

Twitter
Facebook
LinkedIn
WhatsApp
ಕಾಸರಗೋಡು: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆ.!

ಕಾಸರಗೋಡು: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆಗೈದ ಘಟನೆ ಬುಧವಾರ ಮಧ್ಯಾಹ್ನ ಕಾಸರಗೋಡಿನ  ಉಪ್ಪಳಪೇಟೆಯಲ್ಲಿ ನಡೆದಿದೆ.

ವಾಹನದ ಗಾಜನ್ನು ಒಡೆದು ಹಣ ದರೋಡೆ ಮಾಡಿದ್ದಾರೆ. ಉಪ್ಪಳ ಪೇಟೆಯಲ್ಲಿರುವ ಆಕ್ಸಿಸ್ ಬ್ಯಾಂಕ್ ನ ಎ ಟಿ ಎಂ ಮೆಷಿನ್ ಗೆ ಹಣ ತುಂಬಿಸಲು ಬಂದಿದ್ದ ಸಂದರ್ಭ ಈ ಘಟನೆ ನಡೆದಿದೆ.

ವಾಹನದಲ್ಲಿದ್ದ ನೌಕರರು ವಾಹನ ನಿಲ್ಲಿಸಿ ಎಟಿಎಂ ಮೆಷಿನ್ ತೆರೆದು ವಾಹನದಲ್ಲಿದ್ದ ಹಣದ ಬಾಕ್ಸನ್ನು ತೆಗೆದುಕೊಂಡು ಹೋಗಲು ಮರಳಿ ಬಂದಾಗ ವಾಹನದ ಗಾಜು ಹುಡಿಯಾದ ಸ್ಥಿತಿಯಲ್ಲಿ ಕಂಡುಬಂದಿದೆ. ಪರಿಶೀಲಿಸಿದಾಗ 50 ಲಕ್ಷ ರೂ. ಇದ್ದ ಬಾಕ್ಸ್ ನಾಪತ್ತೆಯಾಗಿತ್ತು. ಖಾಸಗಿ ಏಜೆನ್ಸಿಯ ವಾಹನದಲ್ಲಿ ಹಣವನ್ನು ತಂದು ಎಟಿಎಂ ಗೆ ತುಂಬಿಸಲಾಗುತ್ತಿತ್ತು. ವಾಹನದ ಗಾಜನ್ನು ಒಡೆದು ಕೃತ್ಯ ನಡೆಸಲಾಗಿದೆ.

ಮಂಜೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದು , ವಾಹನದ ಚಾಲಕ ಮತ್ತು ನೌಕರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸಮೀಪದ ಸಿಸಿಟಿವಿ ಕ್ಯಾಮರಾ ಮೂಲಕ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟೂರಿಸ್ಟ್ ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಕಾರ್ಕಳ: ಕುಕ್ಕುಂದೂರು ಗಣಿತ ನಗರ ಸಮೀಪದ ಮಸೀದಿಯ ಹತ್ತಿರ ಕಾರ್ಕಳ ಕಡೆಯಿಂದ ಉಡುಪಿಗೆ ಹೋಗುತ್ತಿದ್ದ ಟೂರಿಸ್ಟ್ ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.ಚಾಲಕನು ಅತೀ ವೇಗ ಹಾಗೂ ನಿರ್ಲಕ್ಷ್ಯ ರೀತಿಯಲ್ಲಿ ವಾಹನ ಚಲಾಯಿಸಿರುವುದೇ ಕಾರಣವೆನ್ನಲಾಗಿದೆ. ಕಾರ್ಕಳ ನಗರ ಠಾಣಾ ಸರಹದ್ದಿನೊಳಗೆ ಈ ಘಟನೆ ಸಂಭವಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ