ಗುರುವಾರ, ಮೇ 9, 2024
SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟಿಕೆಟ್ ಸಿಗಲಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ್ದ ಸಂಸದ ಸಾವು..!

Twitter
Facebook
LinkedIn
WhatsApp
ಟಿಕೆಟ್ ಸಿಗಲಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ್ದ ಸಂಸದ ಸಾವು..!

ಚೆನ್ನೈ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದ ಎಂಡಿಎಂಕೆ ಪಕ್ಷದ ಹಿರಿಯ ನಾಯಕ ಈರೋಡ್ ಸಂಸದ ಗಣೇಶ ಮೂರ್ತಿ ಸಾವನ್ನಪ್ಪಿದ್ದಾರೆ. ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಣೇಶ ಮೂರ್ತಿ ಇಂದು ಕೊನೆಯುಸಿರೆಳೆದಿದ್ದಾರೆ.

ಗಣೇಶ್ ಮೂರ್ತಿ ಅವರು ಎಂಡಿಎಂಕೆ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದು, 2019ರ ಲೋಕಸಭೆ ಚುನಾವಣೆಯಲ್ಲಿ ಈರೋಡೆ ಕ್ಷೇತ್ರದಿಂದ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು. ಈ ಬಾರಿಯೂ ಸಹ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವಿನ ನಿರೀಕ್ಷೆಯಲ್ಲಿದ್ದರು.

ಗಣೇಶ್ ಮೂರ್ತಿ 2024ರ ಸಂಸತ್ ಚುನಾವಣೆಯಲ್ಲಿ ತಮಗೆ ಮತ್ತೊಮ್ಮೆ ಸ್ಪರ್ಧಿಸಲು ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಈ ಬಾರಿ ಎಂಡಿಎಂಕೆ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳದೇ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಿದೆ. ಹೀಗಾಗಿ ಟಿಕೆಟ್‌ ಸಿಗದ ಕಾರಣ ಮನನೊಂದು ಗಣೇಶ್ ಮೂರ್ತಿ ಮಾರ್ಚ್ 24ರಂದು ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿತ್ತು.

ಗಣೇಶ್ ಮೂರ್ತಿ ಅವರ ಸ್ಥಿತಿ ಅರಿತ ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಇಂದು ಬೆಳಗ್ಗೆ ಹೃದಯಾಘಾತವಾಗಿ ಗಣೇಶ ಮೂರ್ತಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಟಿಕೆಟ್ ಕೈತಪ್ಪಿದ ಬಳಿಕ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಂಸದ.!

ತಮಿಳುನಾಡಿನ ಈರೋಡ್ ಕ್ಷೇತ್ರದ ಹಾಲಿ ಲೋಕಸಭಾ ಸಂಸದ ಡಿಎಂಕೆಯ ಎ.ಗಣೇಶಮೂರ್ತಿ ಅವರು ಕೀಟನಾಶಕ(Pesticide) ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಟಿಕೆಟ್‌ನಲ್ಲಿ ಚುನಾಯಿತರಾದ ಗಣೇಶಮೂರ್ತಿ ಆರೋಗ್ಯ ಏಕಾಏಕಿ ಹದಗಟ್ಟಿತ್ತು, ಬಳಿಕ ಆಸ್ಪತ್ರೆಗೆ ದಾಖಲಿಸಿದಾಗ ಅವರು ಕೀಟನಾಶಕ ಸೇವಿಸಿದ್ದು ತಿಳಿದುಬಂದಿದೆ. ತಪಾಸಣೆಯ ನಂತರ ಅವರನ್ನು ಐಸಿಯುಗೆ ದಾಖಲಿಸಲಾಗಿದ್ದು, ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಇಬ್ಬರು ವೈದ್ಯರು ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಮಧ್ಯಾಹ್ನ 2.30 ರ ಸುಮಾರಿಗೆ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಡಿಎಂಕೆ ನಾಯಕ ದುರೈ ವೈಕೋ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಣೇಶಮೂರ್ತಿ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಇಸಿಎಂಒ ಚಿಕಿತ್ಸೆಯಲ್ಲಿದೆ ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ