ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!

Twitter
Facebook
LinkedIn
WhatsApp
ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!
ಕೇರಳ: ಅದೃಷ್ಟ ಯಾವಾಗ ಯಾರಿಗೆ ಒಲಿಯುತ್ತದೆ ಅಂತಾ ಹೇಳೋಕೆ ಸಾಧ್ಯವಿಲ್ಲ. ಜೀವನ ನಡೆಸಲು ಹೆಣಗಾಡುವ ಜನರು ರಾತ್ರೋರಾತ್ರಿ ಫೇಮಸ್‌ ಆಗುತ್ತಾರೆ. ಅದೃಷ್ಟ ಲಕ್ಷ್ಮಿ ಯಾವುದೋ ಒಂದು ರೂಪದಲ್ಲಿ ಅವರ ಕೈ ಹಿಡಿಯುತ್ತಾಳೆ. ಅದೇ ರೀತಿ ಕೇರಳದ ಆಟೋ ಚಾಲಕನಿಗೆ ಅದೃಷ್ಟ ಕೈಹಿಡಿದಿದೆ. ಆತ ಬರೋಬ್ಬರಿ 10 ಕೋಟಿ ರೂ. ಲಾಟರಿ ಗೆದಿದ್ದು ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ. 
ಹೌದು, ಕೇರಳದ ಆಟೋ ಚಾಲಕನಿಗೆ ಅದೃಷ್ಟ ಒಲಿದುಬಂದಿದೆ. ಮಂಗಳವಾರ ರಾತ್ರಿ ಕೇವಲ 10 ರೂ. ನೀಡಿ ಲಾಟರಿ ಟಿಕೆಟ್ ಖರೀದಿಸಿದ್ದ ಕೇರಳದ ಕಣ್ಣೂರಿನ ಆಳಕೋಡ್ ನಿವಾಸಿ ನಾಸರ್‌ ಅವರಿಗೆ ಅದೃಷ್ಟ ಲಕ್ಷ್ಮಿ ಒಲಿದುಬಂದಿದ್ದಾಳೆ. ಕುಟುಂಬ ನಡೆಸಲು ಹಗಲು-ರಾತ್ರಿ ಕಷ್ಟಪಟ್ಟು ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ ನಾಸರ್‌ಗೆ ಬಂಪರ್‌ ಲಾಟರಿ ಹೊಡೆದಿದೆ.
ಮಂಗಳವಾರವಷ್ಟೇ ಖರೀದಿಸಿದ್ದ ಲಾಟರಿಯಿಂದ ಅವರ ಅದೃಷ್ಟ ರಾತ್ರೋರಾತ್ರಿ ಬದಲಾಗಿದೆ. ಬುಧವಾರ ಬೆಳಗ್ಗೆ ಲಾಟರಿಯಲ್ಲಿ ಪ್ರಥಮ ಬಹುಮಾನ 10 ಕೋಟಿ ರೂ. ಗೆಲ್ಲುವ ಮೂಲಕ ಅವರು ಕೋಟ್ಯಾಧಿಪತಿಯಾಗಿದ್ದಾರೆ. ವೃತ್ತಿಯಲ್ಲಿ ಆಟೋ ಡ್ರೈವರ್ ಆಗಿದ್ದ ನಾಸರ್ ಇದೀಗ ಬಂಪರ್ ಲಾಟರಿ ಮೂಲಕ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿ ಬದಲಾಗಿದ್ದಾರೆ. 
ಕೇರಳದ ಕಾರ್ತಿಕಪುರದ ರಾಜರಾಜೇಶ್ವರಿ ಲಾಟರಿ ಏಜನ್ಸಿಯಿಂದ ನಾಸರ್ ಅವರು ಲಾಟರಿ ಟಿಕೆಟ್ ಖರೀಸಿದ್ದರು. ಅವರ ಅದೃಷ್ಟ ಖುಲಾಯಿಸಿದ್ದು, ಈ ಲಾಟರಿಯಲ್ಲಿ ಪ್ರಥಮ ಬಹುಮಾನವಾಗಿ 10 ಕೋಟಿ ರೂ. ಹಣ ಗೆದ್ದಿದ್ದಾರೆ. 
ಮೊದಲ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಸೌದಿ ಅರೇಬಿಯಾ ರಾಷ್ಟ್ರದ ಬ್ಯೂಟಿ ರೂಮಿ ಅಲ್ಕಹ್ತಾನಿ

ಸೌದಿ:ಮೊಟ್ಟಮೊದಲ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾಗಿಯಾಗಲಿರುವ ಸೌದಿ ಅರೇಬಿಯಾ ಹೊಸ ಇತಿಹಾಸ ನಿರ್ಮಿಸಲು ಸಿದ್ದಗೊಂಡಿದೆ.

27 ವರ್ಷದ ರೂಮಿ ಅಲ್ಕಹ್ತಾನಿ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಸೌದಿ ಅರೇಬಿಯಾವನ್ನು ಪ್ರತಿನಿಧಿಸಲಿದ್ದಾರೆ. ಈ ಮೂಲಕ ಸೌದಿ ಅರೇಬಿಯಾದ ಮಹಿಳಾ ಸಬಲೀಕರಣಕ್ಕೆ ಮಹತ್ವದ ಮೈಲಿಗಲ್ಲು ಸಿಕ್ಕಂತೆ.

ರೂಮಿ ಅಲ್ಕಹ್ತಾನಿ ಅವರು ಮಲೇಷ್ಯಾದಲ್ಲಿನ ಮಿಸ್ ಏಷ್ಯಾ ಮತ್ತು ಮಿಸ್ ಅರಬ್ ಪೀಸ್ ಸೇರಿದಂತೆ ವಿವಿಧ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಸೌದಿ ಅರೇಬಿಯಾವನ್ನು ಪ್ರತಿನಿಧಿಸಿದ್ದರು. ಇದಲ್ಲದೇ ಮಿಸ್ ಮಿಡಲ್ ಈಸ್ಟ್ (ಸೌದಿ ಅರೇಬಿಯಾ) ಮತ್ತು ಮಿಸ್ ಅರಬ್ ವರ್ಲ್ಡ್ ಪೀಸ್ 2021 ರಂತಹ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ರೂಪದರ್ಶಿ ರೂಮಿ ಸೋಮವಾರ ತಮ್ಮ ಇನ್‌ಸ್ಟಾಗ್ರಾಮ್ ಮೂಲಕ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.ಅರೇಬಿಕ್ ಸೇರಿದಂತೆ ಇಂಗ್ಲಿಷ್, ಫ್ರೆಂಚ್ ಮತ್ತು ಬಹು ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡಬಲ್ಲ ರೂಮಿ ಅಲ್ಕಹ್ತಾನಿ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಅರಬ್​​​ ರಾಷ್ಟ್ರವನ್ನು ಪ್ರತಿನಿಧಿಸುವ ಮೂಲಕ ವಿಶ್ವ ಸುಂದರಿ ಪಟ್ಟವನ್ನು ಮುಡಿಗೇರಿಸಿಕೊಳ್ಳುವ ಸಾಧ್ಯತೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ