ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

Twitter
Facebook
LinkedIn
WhatsApp
ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ-ಜೆಡಿಎಸ್‌ ಮೈತ್ರಿಯಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರವನ್ನ ಪಡೆಯುವಲ್ಲಿ ದಳಪತಿಗಳು ಯಶಸ್ವಿಯಾಗಿದ್ದಾರೆ. ರಾಜಕಾರಣದಲ್ಲಿ ಶತ್ರುತ್ವ ಎನ್ನುವುದು ಶಾಶ್ವತವಲ್ಲ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸುಮಲತಾ ಅವರು ನನಗೆ ಶತ್ರುವಲ್ಲ. ಅವರನ್ನು ಭೇಟಿಯಾಗುವುದಕ್ಕೆ ಯಾವುದೇ ಹಿಂಜರಿಕೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸುಮಲತಾ ಅವರ ಜೊತೆ ಖಂಡಿತವಾಗಿಯೂ ಅವರು ನನಗೆ ಶತ್ರು ಅಲ್ಲ. ಅಂಬರೀಶ್ ಬದುಕಿದ್ದಾಗ ಜೊತೆಯಲ್ಲಿ ಅವರ ಮನೆಯಲ್ಲಿ ಊಟ ಮಾಡಿದ್ದೇವೆ. ಆಗ ಸುಮಲತಾ ಅವರೇ ನಮಗೆ ಊಟ ಬಡಿಸಿದ್ದಾರೆ. ಹೀಗಿರುವಾಗ ಆಗಿ ಹೋಗಿದ್ದನ್ನೇ ಸಾಧಿಸಿಕೊಂಡು ಹೋಗುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ರಾಜಕೀಯ ಸನ್ನಿವೇಶ, ಆಯಾ ಸಂದರ್ಭದಲ್ಲಿ ಸಂಘರ್ಷ ಆಗಿದೆ. ಆ ರಾಮಾಂಜನೇಯರ ನಡುವೆಯೇ ಯುದ್ಧ ಆಗಿದೆಯಲ್ಲವೇ? ಅವರ ಮುಂದೆ ನಾವೆಷ್ಟು? ನಾವು ಹುಲು ಮಾನವರು. ಸಮಯ ಬಂದಾಗ ನಾನು ಸುಮಲತಾ ಅವರ ಜೊತೆ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.
ಪುಟ್ಟರಾಜ ಅವರಿಗೆ ಇನ್ನೂ ಚೆನ್ನಾಗಿರುವ ವಧುವನ್ನೇ ‌ನೋಡೋಣ. ಅವರ ಬಗ್ಗೆ ಬೇರೆಯವರಿಗೆ ಚಿಂತೆ ಬೇಕಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಅವರಿಗೆ ತಿರುಗೇಟು ಕೊಟ್ಟರು. ಮಂಡ್ಯದ ಮೇಲೆ ಕೆಟ್ಟ ದೃಷ್ಟಿ ಬೀಳಬಾರದು ಅಂತ ಅವರು ಹೇಳಿದ್ದಾರೆ. ನನ್ನ ದೃಷ್ಟಿ ಕೆಟ್ಟದ್ದಲ್ಲ. ಅಷ್ಟು ಸಣ್ಣತನದಲ್ಲಿ ಮಾತನಾಡುವುದು ಬೇಡ ಎಂದು ಅವರಿಗೆ ಹೇಳಲು ಬಯಸುತ್ತೇನೆ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.
ಕೋಲಾರ ಟಿಕೆಟ್‌ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕೋಲಾರದಲ್ಲಿ ಕಾಂಗ್ರೆಸ್ ಟಿಕೆಟ್ ಬಗ್ಗೆ ನಡೆದಿರುವ ಹೈಡ್ರಾಮಾವನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅಲ್ಲಿನ ರಾಜಕೀಯವನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಹಲವಾರು ರೀತಿಯ ಬೆಳವಣಿಗೆಗಳು ಆಗಿವೆ. ಆದ್ದರಿಂದ ನಾವು ಇನ್ನು ಅಧಿಕೃತ ಘೋಷಣೆ ಮುಂದೂಡಿದ್ದೇವೆ ಅಷ್ಟೇ. ತಾವು ಯಾರನ್ನೂ ತೆಗೆದುಕೊಳ್ಳೋಕೆ ಪ್ರಯತ್ನ ಮಾಡುತ್ತಿಲ್ಲ. ನಮ್ಮಲ್ಲಿ ಇಬ್ಬರು ಅಭ್ಯರ್ಥಿಗಳಿದ್ದಾರೆ.
ಪಕ್ಷದಲ್ಲಿ ಶಿಸ್ತಿನಿಂದ ಇರುವವರ ಹೆಸರನ್ನು ಘೋಷಣೆ ಮಾಡುತ್ತೇವೆ. ಯಾವುದೇ ಗೊಂದಲವಿಲ್ಲ. ಆ ಜಿಲ್ಲೆಯ ಬೆಳವಣಿಗೆಗಳ ಬಗ್ಗೆ ಗಮನ ಇಟ್ಟಿದ್ದೇವೆ ಅಷ್ಟೇ ಎಂದು ಕುಮಾರಸ್ವಾಮಿ ಅವರು ಹೇಳಿದರು. ಕಾಂಗ್ರೆಸ್ ನಾಯಕರ ಒಳಜಗಳದಿಂದ ಎನ್‌ ಡಿಎ ಮೈತ್ರಿಕೂಟಕ್ಕೆ ಲಾಭವಾಗುತ್ತದೆ. ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆಯಿಂದ ನಮಗೆ ಗೆಲುವು ನಿಶ್ಚಿತ. ಅಭ್ಯರ್ಥಿಗಳ ಪಟ್ಟಿ ಸಿದ್ಧವಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ