ಕಾಂಗ್ರೆಸ್ ಅಭ್ಯರ್ಥಿಗಳಾದ ಜಯಪ್ರಕಾಶ್ ಹೆಗ್ಡೆ ಮತ್ತು ಪದ್ಮರಾಜ್ ನಾಮಪತ್ರ ಸಲ್ಲಿಕೆ..!
ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಚಿವ ಕೆ. ಜೆ.ಜಾರ್ಜ್, ಮಾಜಿ ಶಾಸಕ ವಿನಯ ಕುಮಾರ ಸೊರಕೆ, ಶ್ರೀಮತಿ ಮೋಟಮ್ಮ, ಶ್ರೀ ಅಂಶುಮಂತ್ ಜೊತೆಗಿದ್ದರು.
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಬೆಳಿಗ್ಗೆ ಕುದ್ರೋಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕಾಂಗ್ರೇಸ್ ಕಾರ್ಯಕರ್ತರೊಂದಿಗೆ ಮರೆವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಡಾ.ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಜೆ.ಆರ್.ಲೋಬೊ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ,ಮಾಜಿ ಸಚಿವ ಅಭಯಚಂದ್ರ ಜೈನ್, ಮತ್ತಿತರರು ಉಪಸ್ಥಿತರಿದ್ದರು.