ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Twitter
Facebook
LinkedIn
WhatsApp
ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ವಿಜಯಪುರ: ಎರಡು ವರ್ಷದ ಮಗು ತೆರೆದ ಕೊಳವೆ ಬಾವಿಗೆ (Open Borewel) ಬಿದ್ದ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ (Lachyana) ಗ್ರಾಮದಲ್ಲಿ ನಡೆದಿದೆ. ಸಾತ್ವಿಕ್ ಮುಜಗೊಂಡ ಆಟವಾಡಲು ಹೋಗಿದ್ದ ವೇಳೆ ಕೊಳವೆ ಬಾವಿಗೆ ಬಿದ್ದಿದ್ದಾನೆ ಎಂದು ತಿಳಿದು ಬಂದಿದೆ. ಸತೀಶ್ ಮತ್ತು ಪೂಜಾ ದಂಪತಿಯ ಮಗನಾಗಿರುವ ಸಾತ್ವಿಕ್ ಇಂದು (ಏಪ್ರಿಲ್ 03) ಸಂಜೆ 6 ಗಂಟೆ ಸುಮಾರಿಗೆ ಆಟವಾಡುತ್ತ ಕೊಳವೆ ಬಾವಿಗೆ ಬಿದ್ದಿದ್ದಾನೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಇಂಡಿ ಗ್ರಾಮಾಂತರ ಠಾಣೆಯ ಪೊಲೀಸರು, ಅಗ್ನಿ ಶಾಮಕ ದಳ, ತಾಲೂಕು ಆಡಳಿತಾಧಿರಿಗಳು ದೌಡಾಯಿಸಿದ್ದು, ರಕ್ಷಣಾ

ನಿನ್ನೆ(ಏಪ್ರಿಲ್ -02) ಜಮೀನಿನಲ್ಲಿ ಶಂಕರಪ್ಪ ಮುಜಗೊಂಡ ಬೋರ್​ವೆಲ್ ಕೊರೆಸಿದ್ದರು. ಸುಮಾರು 500 ಅಡಿ ಆಳ ಕೊರೆಸಲಾಗಿತ್ತು. ಆದ್ರೆ, ನೀರು ಬಾರದ ಕಾರಣ ಮುಚ್ಚದೆ ಹಾಗೆಯೇ ಬಿಟ್ಟಿದ್ದ. ಇದೀಗ ಶಂಕರಪ್ಪ ಮುಜಗೊಂಡ ಮೊಮ್ಮಗ ಸಾತ್ವಿಕ್ ಕೊಳವೆ ಬಾವಿಗೆ ಬಿದ್ದಿದ್ದಾನೆ. ಸುಮಾರು 15ರಿಂದ 20 ಅಡಿ ಆಳದಲ್ಲಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದ್ದು, ಇದೀಗ ಆ್ಯಕ್ಸಿಜನ್​​ ವ್ಯವಸ್ಥೆ ಮಾಡಲಾಗಿದೆ.

ಇನ್ನು ವಿಷಯ ತಿಳಿದಯುತ್ತಿದ್ದಂತೆಯೇ ಸ್ಥಳದಲ್ಲಿ ಜನರ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಹೆಚ್ಚಾಗುತ್ತಿದೆ. ಮುಂಜಾಗ್ರತ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇತ್ತ ಸಾತ್ವಿಕ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಪತ್ನಿ ಅಕ್ರಮ ಸಂಬಂಧ ಶಂಕೆ; ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ

ಕೋಲಾರ: ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು (Hanging) ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾರಾಯಣಸ್ವಾಮಿ(40), ಪವನ್(12), ನಿತಿನ್(10) ಮೃತರು. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪತ್ನಿ ಲಕ್ಷ್ಮೀ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದರು ಅನ್ನೋ ಕಾರಣಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

ನೀರಿನ ಬಕೆಟ್​ಗೆ ಬಿದ್ದು ಹೆಣ್ಣು ಮಗು ಸಾವು

ನೀರಿನ ಬಕೆಟ್​ಗೆ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ಕೊನೆಯುಸಿರೆಳೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಆಸೀಫ್-ಅಂಜುಮ್ ದಂಪತಿಯ ಪುತ್ರಿ ಆನಮ್ ಫಾತಿಮಾ ಸಾವನ್ನಪ್ಪಿದ್ದಾಳೆ. ಮಗಳನ್ನ ಕಳೆದುಕೊಂಡ ಪೋಷಕರ ಗೋಳಾಟ ಮುಗಿಲುಮುಟ್ಟಿತ್ತು.

ನೇತ್ರಾವತಿ ನದಿಯಲ್ಲಿ ಮುಳುಗಿ ಯುವಕ ಸಾವು

ನೇತ್ರಾವತಿ ನದಿಯಲ್ಲಿ ಮುಳುಗಿ ಯುವಕ ಸಾವನ್ನಪ್ಪಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ನೇತ್ರಾವತಿ ನದಿಯಲ್ಲಿ ಮೂವರು ಯುವಕರು ಈಜಲು ಹೋಗಿದ್ದರು. ಅದ್ರಲ್ಲಿ ಓರ್ವ ಬಲಿಯಾಗಿದ್ದು, ಮತ್ತಿಬ್ಬರನ್ನು ಸ್ಥಳೀಯ ನಿವಾಸಿ ಮೊಹಮ್ಮದ್ ರಕ್ಷಿಸಿದ್ದಾರೆ. ಸದ್ಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist