ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಳ್ಳಾಲ: ಗುಜರಿ ವ್ಯಾಪಾರಿಗೆ ಚೂರಿ ಇರಿದು ಕೊಲೆ ಯತ್ನ..!

Twitter
Facebook
LinkedIn
WhatsApp
ಉಳ್ಳಾಲ: ಗುಜರಿ ವ್ಯಾಪಾರಿಗೆ ಚೂರಿ ಇರಿದು ಕೊಲೆ ಯತ್ನ..!

ಉಳ್ಳಾಲ: ಉಳ್ಳಾಲದಲ್ಲಿ ಗುಜರಿ ವ್ಯಾಪಾರ ಮಾಡುತ್ತಿದ್ದ  ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಉಳ್ಳಾಲ ಠಾಣಾ ವ್ಯಾಪ್ತಿಯ ಮಹಾತ್ಮ ಗಾಂಧಿ ರಂಗ ಮಂದಿರ ಬಳಿ ಈ ಘಟನೆ ನಡೆದಿದ್ದು ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರಕ್ಕೆ  ಚೂರಿಯಿಂದ ಇರಿದು ಕೊಲೆಗೆ ಯತ್ನಿಸಲಾಗಿದೆ ಎನ್ನಲಾಗಿದೆ.

ಮೂಲತಃ ತಣ್ಣೀರು ಬಾವಿ ನಿವಾಸಿ ಇದೀಗ ಉಳ್ಳಾಲದಲ್ಲಿರುವ ಮೊಹಮ್ಮದ್ ಜಾವೇದ್ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಪಂಜಿಮೊಗೊರು ನಿವಾಸಿ ಗುಜರಿ ವ್ಯಾಪಾರಿ ಹಮೀದ್ ಎಂಬಾತನನ್ನು ಮನೆಗೆ ಕರೆದುಕೊಂಡು ಕೊಲೆ ಯತ್ನ ನಡೆಸಿದ್ದು, ಇದರಿಂದ ಗಂಭೀರ ಗಾಯಗೊಂಡ ಹಮೀದ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪಿ ಜಾವೇದ್ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಹಮೀದ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಕೊಂಡಾಣ ಕ್ಷೇತ್ರದ ಸಿಸಿ ಕ್ಯಾಮೆರಾ ಕಳವು ಪ್ರಕರಣ; ಆರೋಪಿ ಅರೆಸ್ಟ್

ಉಳ್ಳಾಲ: ತಾಲೂಕಿನ ಕೋಟೆಕಾರು ಗ್ರಾಮದ ಕೊಂಡಾಣ ಕ್ಷೇತ್ರದ ಭಂಡಾರ ಮನೆಗೆ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾಗಳು ಕಳವಾಗಿದ್ದವು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬೀರಿ ಕೊಂಡಾಣ ನಿವಾಸಿ ಶುಭಾಶ್ ಚಂದ್ರ ಬಂಧಿತ ಆರೋಪಿ. ಹಾಗೂ ಕಳವಾಗಿದ್ದ ಆರು ಸಿಸಿ ಕ್ಯಾಮೆರಾಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಭಂಡಾರ ಮನೆ ಧ್ವಂಸಗೊಳಿಸಿದ್ದ ಪ್ರಕರಣ ನಡೆದ ಬೆನ್ನಲ್ಲೇ ಕ್ಷೇತ್ರಕ್ಕೆ ಅಳವಡಿಸಲಾಗಿದ್ದ ಆರು ಸಿಸಿ ಕ್ಯಾಮೆರಾಗಳು ಕಳವಾಗಿತ್ತು. ಇನ್ನು ಕ್ಯಾಮೆರಾಗಳು ಕಳವಾಗಿರುವುದು ಗುರುವಾರ ಬೆಳಕಿಗೆ ಬಂಧಿತ್ತು. ಈ ಬಗ್ಗೆ ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಆನಂದ್ ಅವರು ಉಳ್ಳಾಲ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬಳಿಕ ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸರು ಕೊಂಡಾಣ ಕ್ಷೇತ್ರದ ಕಚೇರಿಯಲ್ಲಿದ್ದ ಸಿಸಿ ಕ್ಯಾಮೆರಾದ ಡಿವಿಆರ್ ನಲ್ಲಿ ಸೆರೆಯಾಗಿದ್ದ ಆರೋಪಿಯ ಚಹರೆ ಆಧರಿಸಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಬಂಧಿತ ಆರೋಪಿಯು ಮಾನಸಿಕ ರೋಗಿಯಾಗಿದ್ದಾನೆ. ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ