ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

RCB: ಆರ್​ಸಿಬಿಗೆ ಹೀನಾಯ ಸೋಲು; ವಿರಾಟ್ ಕೊಹ್ಲಿ ವಿರುದ್ಧ ತಿರುಗಿ ಬಿದ್ದ ಫ್ಯಾನ್ಸ್..!

Twitter
Facebook
LinkedIn
WhatsApp
RCB: ಆರ್​ಸಿಬಿಗೆ ಹೀನಾಯ ಸೋಲು; ವಿರಾಟ್ ಕೊಹ್ಲಿ ವಿರುದ್ಧ ತಿರುಗಿ ಬಿದ್ದ ಫ್ಯಾನ್ಸ್..! A crushing defeat for RCB; Fans turned against Virat Kohli..!

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ 2024ರ 19ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಜೋಸ್ ಬಟ್ಲರ್​ ಅವರ ಭರ್ಜರಿ ಶತಕದ ನೆರವಿನಿಂದ ಗೆಲುವು ಸಾಧಿಸಿತು.

ಇಂದು ಜೈಪುರದ ಸವಾಯ್​ ಮಾನ್​ ಸಿಂಗ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ (RCB) ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟ ಮಾಡಿಕೊಂಡರು 183 ರನ್​ ಬಾರಿಸಿತು.

ವಿರಾಟ್ ಕೊಹ್ಲಿ 67 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಇದು ವಿರಾಟ್ ಕೊಹ್ಲಿ ಐಪಿಎಲ್ ವೃತ್ತಿ ಜೀವನದಲ್ಲಿ 8ನೇ ಶತಕವಾಗಿದೆ.

ಗೆಲುವಿಗೆ 184 ರನ್ ಗಳ ಗುರಿ ಬೆನ್ನತ್ತಿದ ರಾಜಸ್ಥಾನ್ ತಂಡ 19.1 ಓವರ್​ಗಳಲ್ಲಿ 4 ವಿಕೆಟ್ ಗೆ 189 ರನ್ ಬಾರಿಸಿ ಸುಲಭವಾಗಿ 6 ವಿಕೆಟ್ ಗಳ ಜಯ ತನ್ನದಾಗಿಸಿಕೊಂಡಿತು. 58 ಎಸೆತಗಳಲ್ಲಿ ಶತಕ ಬಾರಿಸಿದ ಜೋಸ್ ಬಟ್ಲರ್​ ಗೆಲುವಿನ ರೂವಾರಿ ಎನಿಸಿಕೊಂಡರು. ಅವರದ್ದು ಕೂಡ ಐಪಿಎಲ್​ನಲ್ಲಿ 6ನೇ ಶತಕವಾಗಿದೆ. ಈ ಮೂಲಕ ಕ್ರಿಸ್​ಗೇಲ್ ಅವರ ಸಾಧನೆಯನ್ನು ಸರಿಗಟ್ಟಿದ್ದಾರೆ.

ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಇದು ಸತತ ನಾಲ್ಕನೇ ಗೆಲುವಾಗಿದೆ. ಅಲ್ಲದೆ ನಾಲ್ಕು ಗೆಲುವುಗಳ ಸಮೇತ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ರಾಜಸ್ಥಾನ ವಿರುದ್ಧದ ಈ ಪಂದ್ಯದಲ್ಲಿ ಆರ್‌ಸಿಬಿಯ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ವಿರಾಟ್ ಕೊಹ್ಲಿ ಅಜೇಯ 113 ರನ್ ಸಿಡಿಸಿದರೆ, ಡುಪ್ಲೆಸಿಸ್ 44 ರನ್ ಬಾರಿಸಿದ್ದಾರೆ. ಇನ್ನುಳಿದಂತೆ ಕ್ಯಾಮರೂನ್ ಗ್ರೀನ್ ಅಜೇಯ 5 ರನ್ ಗಳಿಸಿದ್ದಾರೆ. ರಾಜಸ್ಥಾನ ಪರ ಬೌಲಿಂಗ್ ನಲ್ಲಿ ಯುಜುವೇಂದ್ರ ಚಹಾಲ್ 2 ವಿಕೆಟ್ ಹಾಗೂ ನಾಂದ್ರೆ ಬರ್ಗರ್ 1 ವಿಕೆಟ್ ಪಡೆದಿದ್ದಾರೆ.

ವಿರಾಟ್ ಕೊಹ್ಲಿ ವಿರುದ್ಧ ತಿರುಗಿ ಬಿದ್ದ ಫ್ಯಾನ್ಸ್..!

ಸಿಎಸ್​ಕೆ, ಕೆಕೆಆರ್ ಮತ್ತು ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧ ಮಕಾಡೆ ಮಲಗಿದ್ದ ಆರ್​ಸಿಬಿ ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ವಿರಾಟ್ ಕೊಹ್ಲಿ (Virat Kohli) RCB ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಿಧಾನಗತಿಯಲ್ಲಿ ಬ್ಯಾಟ್ ಬೀಸಿರುವುದು. ಅಂದರೆ ಐಪಿಎಲ್​ ಇತಿಹಾಸದಲ್ಲಿ 8 ಶತಕ ಬಾರಿಸಿ ದಾಖಲೆ ಬರೆದಿರುವ ಕೊಹ್ಲಿ ಇದೇ ಮೊದಲ ಬಾರಿಗೆ ಅತ್ಯಂತ ನಿಧಾನಗತಿಯಲ್ಲಿ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಶತಕ ಪೂರೈಸಲು ತೆಗೆದುಕೊಂಡಿದ್ದು ಬರೋಬ್ಬರಿ 67 ಎಸೆತಗಳನ್ನು ಎಂಬುದು ವಿಶೇಷ.

ಐಪಿಎಲ್​ನಲ್ಲಿ ನಿಧಾನಗತಿಯಲ್ಲಿ ಶತಕ ಸಿಡಿಸಿ ಕಳಪೆ ದಾಖಲೆ ಬರೆದಿದ್ದ ಮನೀಶ್ ಪಾಂಡೆ ಅವರ ಕೆಟ್ಟ ರೆಕಾರ್ಡ್​ ಅನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ. ಈ ಹೀನಾಯ ದಾಖಲೆಯ ಬೆನ್ನಲ್ಲೇ ಕೊಹ್ಲಿ ಬ್ಯಾಟಿಂಗ್ ಬಗ್ಗೆ ಅಪಸ್ವರಗಳು ಕೇಳಿ ಬರಲಾರಂಭಿಸಿದೆ. ಬ್ಯಾಟಿಂಗ್ ಪಿಚ್ ಆಗಿದ್ದರೂ, ಮೊದಲ ಇನಿಂಗ್ಸ್​ನಲ್ಲಿ ಯಾವುದೇ ಒತ್ತಡ ಇಲ್ಲದಿದ್ದರೂ ವಿರಾಟ್ ಕೊಹ್ಲಿ ಶತಕ ಪೂರೈಸಲು 67 ಎಸೆತಗಳನ್ನು ತೆಗೆದುಕೊಂಡಿದ್ದು ಆರ್​ಸಿಬಿ ತಂಡದ ರನ್​ ಗತಿಯ ಮೇಲೆ ಪರಿಣಾಮ ಬೀರಿದೆ. ಅತ್ತ ರಾಜಸ್ಥಾನ್ ರಾಯಲ್ಸ್ ಪರ ಜೋಸ್ ಬಟ್ಲರ್ ಚೇಸಿಂಗ್​ನ ಒತ್ತಡದಲ್ಲೂ 58 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ.

ಕೊಹ್ಲಿ ಕೊನೆಯ ಓವರ್​ಗಳ ವೇಳೆ ವೇಗದಿಂದ ಆಡದಿರುವುದು ಆರ್​ಸಿಬಿ ತಂಡದ ಒಟ್ಟು ಸ್ಕೋರ್​ ಮೇಲೆ ಪರಿಣಾಮ ಬೀರಿದೆ ಎಂದು ಕೆಲ ಅಭಿಮಾನಿಗಳ ವಾದ.

ಕೊಹ್ಲಿ 19ನೇ ಓವರ್​ನಲ್ಲಿ ತಮ್ಮ ಶತಕ ಪೂರೈಸಲು ಹೆಚ್ಚಿನ ಒತ್ತು ನೀಡಿದ್ದರು. ಇದರಿಂದ ಆರ್​ಸಿಬಿ ತಂಡದ ರನ್​ ಗತಿಯು ಇಳಿಕೆಮುಖವಾಯಿತು ಎಂಬ ವಾದವನ್ನು ಮುಂದಿಡುತ್ತಿದ್ದಾರೆ. 

ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಶತಕ ಬಾರಿಸಿದ ದಾಖಲೆ ಹೊಂದಿರುವ ವಿರಾಟ್ ಕೊಹ್ಲಿ ಇದೀಗ ಸ್ಲೋ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈ ಸ್ಲೋ ಸೆಂಚುರಿ ಬೆನ್ನಲ್ಲೇ ಕೊಹ್ಲಿ ಇನಿಂಗ್ಸ್ ವಿರುದ್ಧ ಪರ ವಿರೋಧ ಚರ್ಚೆಗಳು ಶುರುವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ