ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಏಪ್ರಿಲ್ 14 ರಂದು ಮಂಗಳೂರಿನಲ್ಲಿ ನಡೆಯಬೇಕಿದ್ದ ಮೋದಿ ಸಮಾವೇಶ ರದ್ದು ; ರೋಡ್ ಶೋನಲ್ಲಿ ಮಾತ್ರ ಬಾಗಿ..!

Twitter
Facebook
LinkedIn
WhatsApp
ಏಪ್ರಿಲ್ 14 ರಂದು ಮಂಗಳೂರಿನಲ್ಲಿ ನಡೆಯಬೇಕಿದ್ದ ಮೋದಿ ಸಮಾವೇಶ ರದ್ದು ; ರೋಡ್ ಶೋನಲ್ಲಿ ಮಾತ್ರ ಬಾಗಿ..!

ಬೆಂಗಳೂರು : 2024ರ ಲೋಕಸಭಾ ಚುನಾವಣೆಗೆ ಕೇಂದ್ರದ ಆಡಳಿತಾರೂಢ ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಸತತ ಮೂರನೇ ಬಾರಿಗೆ ಗದ್ದುಗೆ ಏರಲು ಬಿಜೆಪಿ ಪ್ರಯತ್ನದಲ್ಲಿದೆ. ಕರ್ನಾಟಕದ ಕಡೆಗೆ ಮತ್ತೆ ಪ್ರಧಾನಿ ಮೋದಿ ಆಗಮಿಸುವ ತಯಾರಿಯಲ್ಲಿದ್ದಾರೆ.

ಏಪ್ರಿಲ್ 14 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಆರಂಭದಲ್ಲಿ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಲಿರುವ ಪ್ರಧಾನಿ ಮೋದಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬ್ಯಾಟರಾಯನಪುರ ಮತ್ತು ಹೆಬ್ಬಾಳ ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.

 

ಮಂಗಳೂರಿಗೆ ಮೋದಿ, ರೋಡ್ ಶೋದಲ್ಲಿ ಭಾಗಿ: ಏಪ್ರಿಲ್ 14ರಂದು ಅಪರಾಹ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡುತ್ತಿದ್ದು, ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಬದಲಾವಣೆಯಾಗಿದ್ದು ಅಂದಿನ ಮೋದಿ ಸಮಾವೇಶ ರದ್ದಾಗಿದೆ. ಪ್ರಧಾನಿಯವರು ಏಪ್ರಿಲ್ 6ರಂದು ಸಂಜೆ ಮಂಗಳೂರಿನಲ್ಲಿ ರೋಡ್ ಶೋ ಮಾತ್ರ ನಡೆಸಲಿದ್ದಾರೆ.

ಕಳೆದ ತಿಂಗಳು ಪ್ರಧಾನಿ ಮೋದಿ ಅವರು ಶಿವಮೊಗ್ಗ ಹಾಗೂ ಕಲಬುರಗಿಗೆ ಆಗಮಿಸಿ ಪ್ರಚಾರ ನಡೆಸಿ ಕಾಂಗ್ರೆಸ್ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಏಪ್ರಿಲ್ 26ರಂದು ರಾಜ್ಯದ 14 ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಇನ್ನುಳಿದ 14 ಕ್ಷೇತ್ರಕ್ಕೆ ಮೇ 7 ರಂದು ಚುನಾವಣೆ ನಡೆಯಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ