ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚುನಾವಣೆ ಮತಯಾಚನೆ ವೇಳೆ ಯುವತಿಗೆ ಕಿಸ್‌ ಕೊಟ್ಟ ಬಿಜೆಪಿ ಅಭ್ಯರ್ಥಿ..!

Twitter
Facebook
LinkedIn
WhatsApp
ಚುನಾವಣೆ ಮತಯಾಚನೆ ವೇಳೆ ಯುವತಿಗೆ ಕಿಸ್‌ ಕೊಟ್ಟ ಬಿಜೆಪಿ ಅಭ್ಯರ್ಥಿ..!

ಕೋಲ್ಕೊತಾ: ಲೋಕಸಭೆ ಚುನಾವಣೆ (Lok Sabha Election 2024) ಇರಲಿ, ವಿಧಾನಸಭೆ ಚುನಾವಣೆ ಇರಲಿ, ಅಭ್ಯರ್ಥಿಗಳು ತುಂಬ ವಿಧೇಯರಾಗಿ ಮತಯಾಚನೆ ಮಾಡುತ್ತಾರೆ. ನೀವೇ ನನ್ನ ತಂದೆ-ತಾಯಿ, ಮತದಾರರೇ ನನ್ನ ಅಕ್ಕ-ತಂಗಿ, ಗೆದ್ದು ಬಂದ ಮೇಲೆ ನಾನು ನಿಮ್ಮ ಮನೆಯ ಮಗನಂತೆ ಕೆಲಸ ಮಾಡುತ್ತೇನೆ ಎಂಬುದು ಸೇರಿ ಹಲವು ರೀತಿಯಲ್ಲಿ ಜನರ ಮನವೊಲಿಸಲು ಯತ್ನಿಸಿದ್ದಾರೆ. ಆದರೆ, ಪಶ್ಚಿಮ ಬಂಗಾಳದಲ್ಲಿ (West Bengal) ಬಿಜೆಪಿಯ ಖಾಗೇನ್‌ ಮುರ್ಮು (Khagen Murmu) ಎಂಬುವರು ಚುನಾವಣೆ ಪ್ರಚಾರದ ಭರಾಟೆಯ ವೇಳೆ ಯುವತಿಯೊಬ್ಬರಿಗೆ ಮುತ್ತು ಕೊಟ್ಟಿದ್ದಾರೆ. ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

ಹೌದು, ಪಶ್ಚಿಮ ಬಂಗಾಳದ ಮಾಲ್ಡಾ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಖಾಗೇನ್‌ ಮುರ್ಮು ವರು ಶ್ರೀಹಿಪುರ ಗ್ರಾಮದಲ್ಲಿ ಪ್ರಚಾರ ಮಾಡುವ ವೇಳೆ ಯುವತಿಯೊಬ್ಬರ ಕೆನ್ನೆಗೆ ಮುತ್ತು ಕೊಟ್ಟಿದ್ದಾರೆ. ಇದು ಈಗ ಪಶ್ಚಿಮ ಬಂಗಾಳದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. “ನರೇಂದ್ರ ಮೋದಿ ಅವರು ಬೇಟಿ ಬಚಾವೋ ಎಂಬ ಅಭಿಯಾನ ಆರಂಭಿಸುತ್ತಾರೆ. ಆದರೆ, ಬಿಜೆಪಿ ನಾಯಕರು ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಾರೆ. ಇಂತಹವರನ್ನು ಚುನಾವಣೆಯಲ್ಲಿ ಸೋಲಿಸಬೇಕು” ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿವೆ. ಟಿಎಂಸಿ ನಾಯಕರು ಕೂಡ ಬಿಜೆಪಿ ಸಂಸದನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ತಮಿಳುನಾಡಿನಲ್ಲಿ ಗಡ್ಡ ಬೋಳಿಸಿ ಮತಯಾಚನೆ

ತಮಿಳುನಾಡಿನ ರಾಮನಾಥಪುರಂ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪರಿರಾಜನ್‌ ಎಂಬುವರು ಚುನಾವಣೆ ಪ್ರಚಾರದ ಭಾಗವಾಗಿ ಒಂದು ದಿನದ ಮಟ್ಟಿಗೆ ಕ್ಷೌರಿಕನ ಕೆಲಸ ಮಾಡಿದ್ದಾರೆ. ಜನರಿಗೆ ಕಟಿಂಗ್‌ ಮಾಡಿ, ಅವರ ಗಡ್ಡ ಬೋಳಿಸಿ, ಅವರು ಸಲೂನ್‌ನಿಂದ ಹೊರಡುವಾಗ ಕೈ ಮುಗಿದು ಮತ ಕೇಳುತ್ತಿದ್ದಾರೆ. ಇದು ಸುತ್ತಮುತ್ತಲಿನ ಭಾಗದ ಜನರ ಗಮನವನ್ನೂ ಸೆಳೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇವರ ಚಟುವಟಿಕೆ ಕುರಿತು ಪರ-ವಿರೋಧ ಚರ್ಚೆ ವ್ಯಕ್ತವಾಗುತ್ತಿದೆ.

“ವೈಟ್‌ ಕಾಲರ್‌ ಅಭ್ಯರ್ಥಿಗಳು, ಶ್ರೀಮಂತರು, ಉದ್ಯಮಿಗಳು ದರ್ಪದಿಂದ ಚುನಾವಣೆ ಎದುರಿಸುತ್ತಿರುವ ಸಂದರ್ಭದಲ್ಲಿ ಜನರಿಗೆ ಕ್ಷೌರ ಮಾಡುವ ಮೂಲಕ ಪ್ರಚಾರ ಕೈಗೊಂಡಿರುವ ಪರಿರಾಜನ್‌ ಅವರ ನಡೆ ಮಾದರಿ” ಎಂದು ಒಂದಷ್ಟು ಜನ ಹೊಗಳಿದ್ದಾರೆ. “ಚುನಾವಣೆ ವೇಳೆ ಜನರ ಗಡ್ಡ ಬೋಳಿಸಿ, ಗೆದ್ದ ನಂತರ ಅವರ ಹಣವನ್ನು ಬೋಳಿಸುವವನೇ ರಾಜಕಾರಣಿ”, “ಈತ ಮತಗಳಿಗಾಗಿ ಜನರ ಎದುರು ಡ್ರಾಮಾ ಮಾಡುತ್ತಿದ್ದಾನೆ. ಇಂತಹವರನ್ನು ನಂಬಬಾರದು” ಎಂಬುದಾಗಿ ಮತ್ತೊಂದಿಷ್ಟು ಜನ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist