ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

Twitter
Facebook
LinkedIn
WhatsApp
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು ಮಾಹಿತಿ ಹರಡಲಾಗುತ್ತಿದ್ದು ಇಂತಹ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಣ್ಣೂರು, ತುಂಬೆ ಮತ್ತು ಅಡ್ಯಾರ್ ಪ್ರದೇಶದ ನಿವಾಸಿಗಳಲ್ಲಿ ವಾಂತಿ ಭೇದಿ ಕಂಡುಬಂದಿರುವ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲ್ಯಾಂಡ್ಸ್ ಫ್ಲೇವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿಯ ಐಸ್ ಕ್ರೀಮ್ ಮತ್ತು ಎಳನೀರನ್ನು ಕುಡಿದ ಬಳಿಕ ಜನರಲ್ಲಿ ವಾಂತಿ ಭೇದಿ ಕಂಡು ಬಂದಿರುವುದಾಗಿ ತಿಳಿದುಬಂದಿದೆ. 

ಸೋಮವಾರದಂದು ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿದ ಬಳಿಕ ಆರೋಗ್ಯದಲ್ಲಿ ಏರುಪೇರಾಗಿರುವ ಕುರಿತು ನಿವಾಸಿಗಳ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಆಹಾರ ಸುರಕ್ಷತಾ ಅಧಿಕಾರಿ ಯವರು ಫ್ಯಾಕ್ಟರಿಗೆ ಭೇಟಿ ನೀಡಿ ಎಳನೀರು ಸ್ಯಾಂಪಲ್ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿರುತ್ತಾರೆ. ಇಡೀ ಫ್ಯಾಕ್ಟರಿಯನ್ನ ಬಂದ್ ಮಾಡಿ ಶುಚಿಗೊಳಿಸಲಾಗಿದೆ. ಫಳ್ನೀರ್ ನಲ್ಲಿರುವ ಹೈಲ್ಯಾಂಡ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತರಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ ಬೊಂಡ ಫ್ಯಾಕ್ಟರಿಯ ಬೊಂಡಾ ನೀರು ಕುಡಿದು ಅಸ್ವಸ್ಥಗೊಂಡ ವದಂತಿ ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಎಲ್ಲ ಕ್ರಮಗಳನ್ನ ಕೈಗೊಳ್ಳುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ್ದೇನೆ. ಸಾರ್ವಜನಿಕರು ಕಾಲರಾ ಎಂಬ ವದಂತಿಗಳಿಗೆ ಕಿವಿಗೊಡಬಾರದೆಂದು ಮನವಿ ಮಾಡುತ್ತೇನೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ