ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 17 ರವರೆಗೆ ಮಳೆ ನಿರೀಕ್ಷೆ..!

Twitter
Facebook
LinkedIn
WhatsApp
Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 17 ರವರೆಗೆ ಮಳೆ ನಿರೀಕ್ಷೆ..!

ಯುಗಾದಿಯಂದು ಕರ್ನಾಟಕದ ಕೆಲವೇ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಇಂದಿನಿಂದ ಏಪ್ರಿಲ್​ 17ರವರೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್​ 15ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ.

ಇನ್ನುಳಿದಂತೆ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರ, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಾಗಲಕೋಟೆಯಲ್ಲಿ 41.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದ್ದು, 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 35.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಏಪ್ರಿಲ್​ 12,13 ರಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 38.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 38.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 38.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ