ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!

Twitter
Facebook
LinkedIn
WhatsApp
ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!

ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫೈಜಲ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫೈಜಲ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ