ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!

Twitter
Facebook
LinkedIn
WhatsApp
Boat sinks in river, two die; 7 people are missing..!

ಜಾರ್ಸುಗುಡಾ: ಒಡಿಶಾದ ಜಾರ್ಸುಗುಡಾ ಜಿಲ್ಲೆಯ ಮಹಾನದಿ ನದಿಯಲ್ಲಿ ದೋಣಿಯೊಂದು ಮುಳುಗಿ, ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಾವನ್ನಪ್ಪಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನೆರೆಯ ಛತ್ತೀಸ್‌ಗಢದ ಖಾರ್ಸಿಯಾ ಪ್ರದೇಶದ ಸುಮಾರು 50 ಪ್ರಯಾಣಿಕರು ಒಡಿಶಾದ ಬರ್ಗಢ್ ಜಿಲ್ಲೆಯ ಪಥರ್ಸೇನಿ ಕುಡಾದಲ್ಲಿರುವ ದೇವಸ್ಥಾನಕ್ಕೆ ಭೇಟಿ ನೀಡಿ ದೋಣಿಯಲ್ಲಿ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

 

“ನಾಪತ್ತೆಯಾದವರಲ್ಲಿ ನಾಲ್ವರು ಮಹಿಳೆಯರು ಮತ್ತು ಮೂವರು ಮಕ್ಕಳಿದ್ದಾರೆ. ಎಲ್ಲರೂ ಪತ್ತೆಯಾಗುವವರೆಗೂ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ಉತ್ತರ ರೇಂಜ್ ಐಜಿ ಹಿಮಾಂಶು ಲಾಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ಕೊಲೆ, ಕಿರಿಕ್ ಕೀರ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳ ತಂಡ..!

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಕೊಲೆ, ಗಲಭೆ, ಅಪರಾಧಗಳ ತಾಣವಾಗುತ್ತಿದೆ.  ಬೆಂಗಳೂರು ನಗರದ  ಹೊರಮಾವಿನಲ್ಲಿ ಯುವಕನೋರ್ವನನ್ನು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ.

ಕೀರ್ತಿ ಅಲಿಯಾಸ್ ಕಿರಿಕ್ ಕೀರ್ತಿ (28) ಬರ್ಬರವಾಗಿ ಕೊಲೆಯಾದ ಯುವಕನಾಗಿದ್ದಾನೆ.  ಕೌಟುಂಬಿಕ‌ ಕಲಹದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಕೃತ್ಯ ನಡೆಸಿದ ಆರೋಪದ ಮೇರೆಗೆ ಕಿಶೋರ್, ನಿರ್ಮಲ್, ವೆಂಕಟರಾಜು ಹಾಗೂ ಸಂತೋಷ್ ಎಂಬುವರನ್ನು ಬಂಧಿಸಲಾಗಿದೆ . ‘ಕೀರ್ತಿ ಸಂಬಂಧಿ ಮಹಿಳೆಯೊಬ್ಬರ ಜೊತೆಗೆ ಕಿಶೋರ್‌ ಅಸಭ್ಯವಾಗಿ ವರ್ತಿಸಿದ್ದ. ಇದರ ಮಾಹಿತಿ ತಿಳಿದಿದ್ದ ಕೀರ್ತಿ, ಕಿಶೋರ್‌ಗೆ ಎಚ್ಚರಿಕೆ ನೀಡಿದ್ದ. ಈ ರೀತಿಯ ವರ್ತನೆ ಮುಂದುವರಿಸದಂತೆ ಬೆದರಿಕೆ ಸಹ ಹಾಕಿದ್ದ. ಇದರಿಂದ ಆಕ್ರೋಶಗೊಂಡ ಕಿಶೋರ್‌ ಕೊಲೆಗೆ ಸಂಚು ರೂಪಿಸಿದ್ದ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕಾನೂನು ಹಾಗೂ ಪೊಲೀಸರ ಭಯವಿಲ್ಲದೇ ನಡುರಸ್ತೆಯಲ್ಲೇ ರಕ್ತದೋಕುಳಿ ಹರಿಸುತ್ತಿದ್ದು ಜನ ಭಯಭೀತರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ