ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
Twitter
Facebook
LinkedIn
WhatsApp
ಬೆಳಗಾವಿ: ಪ್ರಜ್ವಲ್ ರೇವಣ್ಣ ಪ್ರಕರಣವು ಚುನಾವಣೆಯ ಮೇಲೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಇದನ್ನು ಇಡೀ ಎನ್ ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ ಮಾಡ್ತಿದೆ. ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನಂತರ ಸತ್ಯಾಸತ್ಯತೆ ಹೊರ ಬರುತ್ತದೆ. ಸರ್ಕಾರವೇ ಎಸ್ಐಟಿ ರಚನೆ ಮಾಡಿದೆ. ತನಿಖೆಯಾಗಲಿ ಎಂದರು.
ಮಹಿಳಾ ನ್ಯಾಯಾಧೀಶರ ತಂಡದಿಂದ ತನಿಖೆಯಾದರೆ ಆದಷ್ಟು ಬೇಗನೆ ಸತ್ಯಾಸತ್ಯತೆ ಹೊರ ಬರುತ್ತೆ. ಇದಕ್ಕೆ ಸಂಬಂಧಪಟ್ಟಂತೆ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಒಪ್ಪುತ್ತೇವೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ. ತನಿಖೆಗೂ ಮುನ್ನ ನಾವು ಯಾರನ್ನೂ ಅಪರಾಧಿ ಎಂದು ಘೋಷಣೆ ಮಾಡುವಂತಿಲ್ಲ. ತನಿಖೆ ನಂತರ ಸತ್ಯ ಏನು ಎನ್ನುವುದು ಹೊರಬರುತ್ತದೆ ಎಂದರು.