ಕಲಬುರಗಿ: ಸೇಡಂ (Sedam) ಮಾಜಿ ಶಾಸಕ ಹಾಗೂ ಕಾಂಗ್ರೆಸ್ (Congress) ಮುಖಂಡ ಡಾ ನಾಗರೆಡ್ಡಿ ಪಾಟೀಲ್ (79) ಇಂದು ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ 3 ಗಂಟೆಗೆ ಸೇಡಂ ಪಟ್ಟಣದಲ್ಲಿ ತಮ್ಮ ನಿವಾಸದಲ್ಲಿ ನಾಗರೆಡ್ಡಿ ಪಾಟೀಲ್ (Dr Nagareddy Patil) ವಿಧಿವಶರಾದರು
ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!
ನಾಗರೆಡ್ಡಿ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್‌ರ ತಂದೆಯಾಗಿದ್ದಾರೆ. ಇಂದು ಮಧ್ಯಾಹ್ನ 3:30ಕ್ಕೆ ಸೇಡಂ ಪಟ್ಟಣದಲ್ಲಿರುವ ಸ್ವತಃ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. 1983 ರಿಂದ 85 ರ ಅವಧಿಯಲ್ಲಿ ಎರಡೂವರೆ ವರ್ಷ ನಾಗರೆಡ್ಡಿ ಪಾಟೀಲ್ ಶಾಸಕರಾಗಿದ್ದರು.
ಹಿರಿಯ ಸಂಸದ ಶ್ರೀನಿವಾಸ್ ಪ್ರಸಾದ್ ವಿಧಿವಶ
ವಾರದ ಹಿಂದೆ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಅವರು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನ ಹೊಂದಿದ್ದರು.
ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀನಿವಾಸ್ ಪ್ರಸಾದ್ 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು . 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.ಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದಾಗಿ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ ಅವರು 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದರು