ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!

Twitter
Facebook
LinkedIn
WhatsApp
ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!

ಬಾಲಕ ಶೌರ್ಯ ತನ್ನ ಸ್ನೇಹಿತರ ಜೊತೆ ಕ್ರಿಕೆಟ್‌ ಆಟವಾಡುತ್ತಿದ್ದನು. ಅಂತೆಯೇ ಈತ ಬೌಲಿಂಗ್‌ ಮಾಡುತ್ತಿದ್ದಾಗ ಬ್ಯಾಟ್ಸ್‌ಮನ್‌ ನೇರವಾಗಿ ಚೆಂಡನ್ನು ಶೌರ್ಯ ಕಡೆಗೆ ಹೊಡೆದಿದ್ದಾನೆ. ಹೀಗಾಗಿ ಚೆಂಡು ಬಲದಿಂದ ಶೌರ್ಯ ಅವರ ಖಾಸಗಿ ಭಾಗಕ್ಕೆ ಬಂದು ಬಡಿದಿದೆ. ಕೂಡಲೇ ಆತ ಕುಸಿದು ಬಿದ್ದಿದ್ದಾನೆ.

ಕೂಡಲೇ ಸ್ನೇಹಿತರು ಬಂದು ಶೌರ್ಯನನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಶೌರ್ಯ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮದುವೆಗೆ ಹೋಗಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳ ದಾರುಣ ಸಾವು

ಚೆನ್ನೈ: ತಮಿಳುನಾಡಿನ (Tamil Nadu) ಖಾಸಗಿ ವೈದ್ಯಕೀಯ ಕಾಲೇಜಿನ ಐವರು ಎಂಬಿಬಿಎಸ್ ವಿದ್ಯಾರ್ಥಿಗಳು ತಮಿಳುನಾಡಿನ ಖಾಸಗಿ ಬೀಚ್‌ನಲ್ಲಿ ಸೋಮವಾರ ಈಜಲು ಹೋದಾಗ ಕನ್ಯಾಕುಮಾರಿಯ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅವರೆಲ್ಲರೂ ತಮ್ಮ ಗೆಳೆಯರೊಬ್ಬರ ಮದುವೆಯಲ್ಲಿ ಭಾಗವಹಿಸಲು ಹೋಗಿದ್ದರು. ಈ ನಡುವೆ ಸಮಯವಿದ್ದುದರಿಂದ ಅವರು ಸಮುದ್ರದಲ್ಲಿ (Beach) ಎಂಜಾಯ್ ಮಾಡಿ, ಸಮಯ ಕಳೆಯಲು ಹೋಗಿದ್ದರು. ಆಗ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ತಿರುಚಿರಾಪಳ್ಳಿಯ ಎಸ್‌ಆರ್‌ಎಂ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ತೆಂಗಿನ ತೋಟದ ಮೂಲಕ ಲೆಮೂರ್ ಬೀಚ್‌ಗೆ ರಹಸ್ಯವಾಗಿ ಪ್ರವೇಶಿಸಿದ್ದರು. ಆ ಸಮುದ್ರ ಅಪಾಯಕಾರಿಯಾಗಿದ್ದರಿಂದ ಅದನ್ನು ಮುಚ್ಚಲಾಗಿತ್ತು. ಆದರೆ ವಿದ್ಯಾರ್ಥಿಗಳು ಹೇಗಾದರೂ ಅಲ್ಲಿಗೆ ಹೋಗಿ ಈಜಲು ನಿರ್ಧರಿಸಿದರು. ದುರದೃಷ್ಟವಶಾತ್ ಹಠದಿಂದ ಸಮುದ್ರಕ್ಕೆ ಇಳಿದ ಅವರು ಪ್ರಾಣ ಕಳೆದುಕೊಂಡಿದ್ದಾರೆ.

ಸಮುದ್ರದ ಪ್ರಕ್ಷುಬ್ಧತೆಯಿಂದಾಗಿ ಮುಚ್ಚಿಹೋಗಿದ್ದ ತೆಂಗಿನ ತೋಟದ ಮೂಲಕ ವಿದ್ಯಾರ್ಥಿಗಳ ಗುಂಪು ಲೆಮೂರ್ ಬೀಚ್ ಅನ್ನು ರಹಸ್ಯವಾಗಿ ಪ್ರವೇಶಿಸಿತು. ಅವರು ಈಜಲು ಹೋಗಿ ದುರದೃಷ್ಟವಶಾತ್ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಿರುಚಿರಾಪಳ್ಳಿ ಕಾಲೇಜಿನಲ್ಲಿ ಹೌಸ್ ಸರ್ಜನ್‌ಶಿಪ್ ಮಾಡುತ್ತಿರುವ ಎಂಬಿಬಿಎಸ್ ವಿದ್ಯಾರ್ಥಿಗಳ ತಂಡ ರಾಜಕ್ಕಮಂಗಲಂನ ಲೆಮೂರ್ ಬೀಚ್‌ಗೆ ತೆರಳಿದ್ದು, ಭಾrಈ ಅಲೆಯೊಂದು ಅವರಲ್ಲಿ ಹಲವರನ್ನು ಸಮುದ್ರಕ್ಕೆ ಎಳೆದೊಯ್ದಿದೆ ಎಂದು ಕನ್ಯಾಕುಮಾರಿ ಪೊಲೀಸ್ ವರಿಷ್ಠಾಧಿಕಾರಿ ಇ. ಸುಂದರವತನಂ ತಿಳಿಸಿದ್ದಾರೆ.

ಸರ್ಕಾರದ ಅಧಿಕೃತ ಪ್ರಕಟಣೆಯ ಪ್ರಕಾರ, ಗಾಯತ್ರಿ (25) ಮತ್ತು ಚಾರುಕವಿ (23) ಮತ್ತು ಮೂವರು ಪುರುಷರಾದ ಸರ್ವದರ್ಶಿತ್ (23), ಪ್ರವೀಣ್ ಸ್ಯಾಮ್ (23) ಮತ್ತು ವೆಂಕಟೇಶ್ (24) ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಚಾರುಕವಿ ತಂಜಾವೂರಿನ ನಿವಾಸಿ, ನೇವೇಲಿಯ ಗಾಯತ್ರಿ, ಕನ್ನಿಯಾಕುಮಾರಿಯ ಸರ್ವದರ್ಶಿತ್, ದಿಂಡಿಗಲ್‌ನ ಪ್ರವೀಣ್ ಸ್ಯಾಮ್ ಮತ್ತು ಸಮೀಪದ ಆಂಧ್ರಪ್ರದೇಶದ ವೆಂಕಟೇಶ್ ಎಂದು ಪೊಲೀಸರು ತಿಳಿಸಿದ್ದಾರೆ. ತಮ್ಮ ಜೊತೆಗಿದ್ದ ವಿದ್ಯಾರ್ಥಿಯ ಸಹೋದರನ ವಿವಾಹದಲ್ಲಿ ಪಾಲ್ಗೊಳ್ಳಲು ಮೇ 5 ರಂದು ಕನ್ಯಾಕುಮಾರಿಗೆ ಆಗಮಿಸಿದ್ದ ವಿದ್ಯಾರ್ಥಿಗಳು ಹಠಾತ್ ಅಲೆಗಳ ಅಲೆಗಳ ಬಗ್ಗೆ ಸ್ಥಳೀಯರು ಎಚ್ಚರಿಕೆ ನೀಡಿದ್ದರೂ ಹಠ ತೊಟ್ಟು ಸಮುದ್ರಕ್ಕೆ ಇಳಿದಿದ್ದರು. ಕಡಲತೀರದ ತೆಂಗಿನ ತೋಟದ ಮೂಲಕ ಮೃತದೇಹಗಳನ್ನು ಕುಟುಂಬಗಳಿಗೆ ಕಳುಹಿಸಲಾಗುತ್ತಿದೆ.

ಗುಂಪಿನಲ್ಲಿದ್ದ ಇನ್ನೂ ಮೂವರು ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೂರಿನ ನೇಶಿ, ತೇಣಿಯ ಪ್ರೀತಿ ಪ್ರಿಯಾಂಕಾ ಮತ್ತು ಮಧುರೈನ ಶರಣ್ಯ ಎಂದು ಗುರುತಿಸಲಾದ ಮೂವರನ್ನು ಎಸ್‌ಆರ್‌ಎಂ ವೈದ್ಯಕೀಯ ಕಾಲೇಜಿನಲ್ಲಿ ರಕ್ಷಿಸಲಾಗಿದ್ದು, ಆಸರಿಪಳ್ಳಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist