ಪುತ್ತೂರು: ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ಮಂಗಳವಾರ ರಾತ್ರಿ ನಿಧನ ಹೊಂದಿದರು.
ಅವರಿಗೆ 79 ವರ್ಷ ವಯಸ್ಸಾಗಿತ್ತು.ಸುಳ್ಯ ತಾಲೂಕಿನ ಪೆರುವಾಜೆಯ ಪುತ್ರಿಯ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮೇ 7ರಂದು ಸಂಜೆ ಪುತ್ತೂರು ಮಹಾವೀರ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು.