ಬೆಂಗಳೂರು: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರದ (Doddaballapura) ಅರಳು ಮಲ್ಲಿಗೆ ಪಂಚಾಯಿತಿ ಪಿಡಿಒ ಲಂಚ ಸ್ವೀಕರಿಸುವಾಗ ಲೋಕಾಯುಕ್ತ (Karnataka Lokayukta) ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸನ್ಸ್ ನವೀಕರಿಸಲು (License Renewal) 5 ಲಕ್ಷ ರೂಪಾಯಿಗೆ ಪಿಡಿಒ ನಿರಂಜನ್ ಬೇಡಿಕೆ ಇಟ್ಟಿದ್ದ ಆರೋಪ ಕೇಳಿ ಬಂದಿದೆ. 3.5 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ರೆಂಡ್ ಆ್ಯಂಡ್ ಆಗಿ ಹಿಡಿದಿದ್ದಾರೆ.
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO
Twitter
Facebook
LinkedIn
WhatsApp
ನರಸಿಂಹಮೂರ್ತಿ ಎಂಬ ವ್ಯಕ್ತಿಯ ದೂರಿನ ಮೇರೆಗೆ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ದಾಳಿ ಮಾಡಿ ಪಿಡಿಒನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ತಾಲೂಕು ಪಂಚಾಯತಿ ಆವರಣದಲ್ಲಿ ಅಧಿಕಾರಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು, ಪಿಡಿಒರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಲೋಕಾಯುಕ್ತ ಪೊಲೀಸರಿಂದ ಚಿತ್ರದುರ್ಗ ಪ್ರಭಾರ ಕಾರ್ಯದರ್ಶಿ ವಶಕ್ಕೆ
ಲಂಚ ಸ್ವೀಕರಿಸುವ ವೇಳೆ ಚಿತ್ರದುರ್ಗ ಬಯಲುಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ SY ಬಸವರಾಜಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಂಧಿತ ಅಧಿಕಾರಿ ವಿರುದ್ಧ 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಕೇಳಿ ಬಂದಿದೆ. ಕಾಮಗಾರಿ ಪೆಂಡಿಂಗ್ ಹಣ ಬಿಡಗಡೆಗೆ ಜಗಲೂರು ಮೂಲದ ಸಿದ್ದನಗೌಡ ಎಂಬ ವ್ಯಕ್ತಿಯಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರಂತೆ.
ಕಾಮಗಾರಿಗೆ ಆಡಳಿತಾತ್ಮಕ ಮಂಜೂರು ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಇದರಿಂದ ನೊಂದ ವ್ಯಕ್ತಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಹಣ ಪಡೆಯುವ ವೇಳೆ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ರೆಡ್ ಆ್ಯಂಡ್ ಆಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವ್ ರಾವ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
ಬೀದರ್ನ ಹೃದಯಭಾಗ ನಯಾಕಮಾನ್ ಬಳಿ ನಡೆದಿದ್ದ ಕಿಡ್ನಾಪ್ ಪ್ರಕರಣವನ್ನ ಮೂರೇ ದಿನಗಳಲ್ಲಿ ಪೊಲೀಸರು ಬೇಧಿಸಿದ್ದಾರೆ. ಈ ಸಂಬಂಧ ಔರಾದ್ ಮೂಲದ ಮಹಿಳೆಯನ್ನ ಪೊಲೀಸರು ಬಂಧಿಸಿದ್ದಾರೆ. ಕಳೆದ 4ನೇ ತಾರೀಖಿನಂದು ನಯಾಕಮಾನ್ ಹತ್ತಿರ ಮನೆ ಮುಂದೆ ಆಟವಾಡುತ್ತಿದ್ದ ಒಂದೂವರೆ ವರ್ಷದ ಗಂಡು ಮಗುವನ್ನ ಕಿಡ್ನಾಪ್ ಮಾಡಿ ಮಹಿಳೆ ಪರಾರಿಯಾಗಿದ್ದಳು. ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನ ಬಂಧಿಸಿದ್ದಾರೆ.