ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ

Twitter
Facebook
LinkedIn
WhatsApp
ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲಿನಲ್ಲಿದ್ದ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Bail) ಅವರಿಗೆ ಜಾಮೀನು ಸಿಕ್ಕಿದೆ ನಿಜ. ಆದರೆ, ಇದಕ್ಕೆ ನಾನು ಸಂತೋಷ ಪಡಲಾರೆ. ಪಟಾಕಿ ಸಿಡಿಸಿ ಸಂಭ್ರಮಿಸುವ ಸಮಯವೂ ಇದಲ್ಲ ಎಂದು ಕಾರ್ಯಕರ್ತರಿಗೆ ಹೇಳಬಯಸುತ್ತೇನೆ. ತಪ್ಪಿತಸ್ಥರಿಗೆ ಶಿಕ್ಷೆ ಆದಾಗ ಸಂಭ್ರಮ ಪಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್‌.ಡಿ. ಕುಮಾರಸ್ವಾಮಿ, ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ವಿಡಿಯೊ ಲೀಕ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಸರಿಯಾದ ತನಿಖೆಯನ್ನು ನಡೆಸುತ್ತಿಲ್ಲ. ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ ಅವರು ಕೂಡ ಎಸ್‌ಐಟಿಯಿಂದ ಆರೋಪ ಎದುರಿಸಬೇಕಾಯಿತು. ಅವರಿಗೆ ನಿನ್ನೆ (ಸೋಮವಾರ – ಮೇ 13) ಜಾಮೀನು ಸಿಕ್ಕಿದೆ. ಅದಕ್ಕೆ ನಾನು ಸಂತೋಷವನ್ನು ಪಡುವುದಿಲ್ಲ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆದಾಗ ಸಂಭ್ರಮವನ್ನು ಪಡೋಣ. ಈಗ ನಡೆದಿರುವುದು ರಾಜ್ಯವೇ ತಲೆ ತಗ್ಗಿಸುವ ವಿಚಾರವಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಎಸ್‌ಐಟಿ ಅಧಿಕಾರಿಗಳ ಕಾರ್ಯವೈಖರಿ ಹೇಗಿದೆ? ಎಸ್‌ಐಟಿ ಅಧಿಕಾರಿಗಳೇ ನಿಮಗೂ ಅಕ್ಕ – ತಂಗಿ, ತಂದೆ – ತಾಯಿ ಇರುತ್ತಾರೆ. ಚುನಾವಣೆ ಹಿನ್ನೆಲೆಯಲ್ಲಿ ಯಾರು ಪೆನ್ ಡ್ರೈವ್ ಹಂಚಿದರೋ ಅವರನ್ನು ಇದುವರೆಗೂ ಮುಟ್ಟಿಲ್ಲ. ಹಾಸನ ಜಿಲ್ಲಾದ್ಯಂತ ಪೆನ್‌ ಡ್ರೈವ್‌ ಅನ್ನು ರಿಲೀಸ್‌ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‌ನ ನವೀನ್‌ ಗೌಡ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕುತ್ತಾನೆ. ಆದರೆ, ಇಲ್ಲಿಯವರೆಗೆ ಆತನನ್ನು ಮುಟ್ಟಿಲ್ಲ. ಈ ಘಟನೆಗೆ ಕಾರಣವಾದ ವ್ಯಕ್ತಿಯನ್ನೂ ಹಿಡಿಯಲಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದರು.

ಗೃಹ ಸಚಿವರಿಗೆ ನೇರ ಪ್ರಶ್ನೆ

ಈ ಪ್ರಕರಣದ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ಕೊಟ್ಟರೆ ಅಂಥವರನ್ನು ವಿಚಾರಣೆಗೆ ಕರೆಸಬೇಕಾಗುತ್ತದೆ ಎಂಬ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ಗೆ ತಿರುಗೇಟು ನೀಡಿರುವ ಎಚ್.ಡಿ. ಕುಮಾರಸ್ವಾಮಿ, ಈ ಪ್ರಕರಣದ ಬಗ್ಗೆ, ವಿಡಿಯೊ ಬಗ್ಗೆ ಹೇಳಿಕೆ ನೀಡಿದ್ದ ನವೀನ್‌ ಗೌಡ ಸೇರಿ ಉಳಿದವರ ಮೇಲೆ ಯಾವ ಕ್ರಮವನ್ನು ತೆಗೆದುಕೊಂಡಿದ್ದೀರಿ? ವಿದೇಶಕ್ಕೆ ಹೋಗಿರುವ ಪ್ರಜ್ವಲ್ ಅವರನ್ನು ಏಕೆ ಕರೆಸಿಲ್ಲ? ಎಂದು ಪ್ರಶ್ನೆ ಮಾಡಿದರು.

ಪ್ರಜ್ವಲ್‌ ರೇವಣ್ಣ ನನಗೆ ಅಣ್ಣನ ಮಗನೇ ಇರಬಹುದು. ಆದರೆ, ಅವನು ಹೋಗುವಾಗ ನನ್ನನ್ನು ಕೇಳಿ ಹೋಗುತ್ತಿದ್ದನಾ? ಬೆಳೆದ ಮಕ್ಕಳು ನಮ್ಮನ್ನು ಕೇಳಿ ಹೋಗ್ತಾರಾ.? ಎಂದು ಎಚ್.ಡಿ. ಕುಮಾರಸ್ವಾಮಿ ಕೇಳಿದರು.

ಸರ್ಕಾರದ ಜವಾಬ್ದಾರಿ ಅದು

ಬಿಜೆಪಿಯ ಮಾಜಿ ಶಾಸಕರೊಬ್ಬರ ಎಡಬಲಗಳನ್ನು ಹಿಡಿಯಲಾಗಿದೆ. ಇನ್ನೊಂದು ವಾರದಲ್ಲಿ ಮುಖ್ಯ ವಾದವರನ್ನು ಹಿಡಿಯಲಾಗುತ್ತೆ ಅಂದಿದ್ದಾರೆ. ಹಾಗಾದರೆ ಎಸ್ಐಟಿ ತನಿಖೆ ಹೇಗೆ ಸೋರಿಕೆ ಆಗ್ತಾ ಇದೆ? ಎಫ್‌ಐಆರ್ ಆಗಿರುವ ಒಬ್ಬ ವ್ಯಕ್ತಿಯನ್ನೂ ಹಿಡಿಯಲಿಲ್ಲ. ಖಾಸಗಿ ಚಾನಲ್‌ನಲ್ಲಿ ಒಂದೂವರೆ ಗಂಟೆಗಳ ಕಾಲ ಸಂದರ್ಶನ ಕೊಡುತ್ತಾರೆ. ನವೀನ್ ಗೌಡ ನಮ್ಮ ಪಕ್ಷದ ಶಾಸಕರಿಗೆ ಪೆನ್ ಡ್ರೈವ್ ಕೊಟ್ಟಿದ್ದೇನೆ ಎಂದು ಹೇಳುತ್ತಾನೆ. ಕೆಲವೇ ಕ್ಷಣಗಳಲ್ಲಿ ಪೆನ್ ಡ್ರೈವ್ ಬರುತ್ತದೆ ಅಂತಾ ಪೋಸ್ಟ್ ಮಾಡುತ್ತೇನೆ ಎಂದು ಹೇಳಿಕೆ ಕೊಟ್ಟಿದ್ದ ಆತನನ್ನು ಹಿಡಿದಿರಾ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ವಿಡಿಯೊದಲ್ಲಿ ಬಂದಂತಹ ಮಹಿಳೆಯರ ಕುಟುಂಬಗಳ ಬಗ್ಗೆ ಸರ್ಕಾರಕ್ಕೆ ಅನುಕಂಪ‌ ಇದೆಯಾ? ಇದರಲ್ಲಿ ಯಾವುದನ್ನೂ ವಹಿಸಿಕೊಳ್ಳುವ ಪ್ರಶ್ನೆ ಇಲ್ಲ. ಈಗಿನ ಮಾಹಿತಿ ತಂತ್ರಜ್ಞಾನದಲ್ಲಿ ಅಪರಾಧಿ, ನಿರಪರಾಧಿ ಆಗುತ್ತಾನೆ, ನಿರಪರಾಧಿ ಅಪರಾಧಿ ಆಗುತ್ತಾನೆ. ಸರ್ಕಾರಕ್ಕೆ ಬದ್ಧತೆ ಇದ್ದರೆ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಲಿ. ನನ್ನ ಮೇಲೂ ಕಾಂಗ್ರೆಸ್‌ನವರು ಅಪಪ್ರಚಾರ ಮಾಡುತ್ತಿದ್ದಾರೆ. ಎಚ್.ಡಿ. ರೇವಣ್ಣ ಅವರ ಕುಟುಂಬವನ್ನು ಮುಗಿಸಲು ನಾನು ಪ್ರಯತ್ನ ಪಡುತ್ತಿರುವುದಾಗಿ ಸುಳ್ಳು ಹೇಳುತ್ತಿದ್ದಾರೆ.

ನಾನು ನ್ಯಾಯದ ಪರ, ಮಹಿಳೆಯರ ಪರ ಇದ್ದೇನೆ. ಈ ವಿಡಿಯೊದಲ್ಲಿ ಆ ವ್ಯಕ್ತಿಯ ಯಾವುದೇ ಚಿತ್ರಣ ಇಲ್ಲ ಅಂತ ಪತ್ರಿಕೆಯೊಂದು ಬರೆದಿದೆ. ಅಲ್ಲಿಗೆ ಈ ಪ್ರಕರಣ ಎಲ್ಲಿಗೆ ಹೋಗುತ್ತದೆ? ಎಂದು ಎಚ್.ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

ಇನ್ನೆರಡು ದಿನದಲ್ಲಿ ಪರಿಷತ್‌ ಅಭ್ಯರ್ಥಿ ಆಯ್ಕೆ

ಪರಿಷತ್ ಚುನಾವಣೆಗೆ ಸಂಬಂಧಪಟ್ಟಂತೆ ಮೈತ್ರಿ ಒಪ್ಪಂದದ ಪ್ರಕಾರ ಜೆಡಿಎಸ್‌ಗೆ ಇನ್ನೊಂದು ಸೀಟ್‌ ಅನ್ನು ಬಿಟ್ಟುಕೊಡಲಾಗಿದೆ. ಅದಕ್ಕೆ ಸೂಕ್ತ ಅಭ್ಯರ್ಥಿಯ ಆಯ್ಕೆ ಆಗಬೇಕಿದೆ. ಇನ್ನೆರಡು ದಿನಗಳಲ್ಲಿ ಸಭೆ ಕರೆದು ಈ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಹೆದರಿಸಿ ದೂರು ಪಡೆಯಲು ಯತ್ನ

ಎಚ್.ಡಿ. ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತವಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ಈ ರೀತಿ ಮಾಡಿದ್ದಾರೆ. ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಈಗ ಕೇಸ್ ಹಾಕಿ ಬಂಧನ ಮಾಡಿದ್ದು ಏಕೆ? ಒಂದು ತಿಂಗಳಿನಿಂದ ಏನೇನೆಲ್ಲ ಬೆಳವಣಿಗೆ ಆಯಿತು? ದೊಡ್ಡ ತಿಮಿಂಗಲದ ಆಡಿಯೊ ಬಿಟ್ಟರು ಎಂದು ದೇವರಾಜೇಗೌಡ ಅವರ ಬಂಧನ ಮಾಡಿದ್ದಾರಾ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷವಾಗಿ ಆಕ್ರೋಶವನ್ನು ಹೊರಹಾಕಿದರು. ಅಲ್ಲದೆ, ದೊಡ್ಡ ತಿಮಿಂಗಿಲವು ಸರ್ಕಾರದಲ್ಲಿದೆ. ಆ ದೊಡ್ಡ ತಿಮಿಂಗಲವನ್ನು ಹಿಡಿಯಲಾಗದೇ ಇದ್ದರೆ ಸಣ್ಣ ತಿಮಿಂಗಲಗಳನ್ನು ಹಿಡಿಯಲಾಗುತ್ತದೆಯೇ? ಈ ಸರ್ಕಾರದಲ್ಲಿ ಹಲವಾರು ತಪ್ಪುಗಳು ನಡೆದಿವೆ. ಎಚ್.ಡಿ. ರೇವಣ್ಣ ಪ್ರಕರಣದಲ್ಲಿ ನಮ್ಮ ಕುಟುಂಬವನ್ನು ಟಾರ್ಗೆಟ್‌ ಮಾಡಲಾಗಿದೆ ಎಂದು ಕಿಡಿಕಾರಿದರು.

ಸಂತ್ರಸ್ತೆಯರಿಗೆ ನ್ಯಾಯ ಸಿಗುವಂತೆ ಆಗಬೇಕು. ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಒಂದು ಮಹಿಳೆ ದೂರು ಕೊಟ್ಟಿದ್ದು, ಆ ಹೆಣ್ಣುಮಕ್ಕಳಿಗೆ ಹೆದರಿಸಿ‌ ದೂರು ಪಡೆಯಲು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಇದೆಲ್ಲ ಕೆಲವೇ ದಿನಗಳಲ್ಲಿ ಹೊರಗೆ ಬರಲಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist